ನಾನು ಮೆಚ್ಚಿದ ವಾಟ್ಸಪ್

Sunday, January 24, 2016

'Paryaya' Why?

'Paryaya' Why?
Dear Reader,Here comes 'Paryaya'. Paryaya means alternative. To grow day by day we couldn’t stick to something, we must search for alternative, and then only we can grow.

Look at this example: Two persons come from opposite directions and start quarrel for the same way. Both of them want the other person should give way to him. At that time third person comes. He saw the quarrel for the same way. He decides to choose some other way instead of quarreling with them as third party. He picks alternative way and continues his journey.

This is way of thinking is Paryaya, a novel way to solve ticklish problems. To solve the energy problem we can select the Paryaya way of Solar or wind power, instead of chemical fertilizers to our farms we can go for Savayava, even in Savayava we can go for Liquid fertilizers like Jeevamruta, for solving water problem in villages as well as in cities we can go for rain water harvesting instead of bore wells, to get good price for our farm products we should try to value addition of our products. Isn’t it?

So come, let us go in this new way for new thoughts, especially regarding farmer problems, environment problems and developmental and humanitarian and consumer issues and of course any other issues touches our society.

'Paryaya' also wants its readers to update their knowledge on various issues and seeks your contribution in this direction. Will you join your hands with 'Paryaya'?

You can write in English or in Kannada. Paryaya will publish them in both languages.

We start with the information on a novel effort by Sri Raghaveshwar Bharati Swamji of Sri Ramachandrapur Mutt, Hosanagar to protect and conserve Indian Breed of Cows with the intention of prospering our rural area and providing healthy life to the Society. He termed his campaign as ‘Second Freedom Struggle of India’. We hope you appreciate it.

So come, let us walk together in Paryaya Way.

Thursday, January 21, 2016

ಇಂದಿನ ಇತಿಹಾಸ History Today ಜೂನ್ 30

 

ಇಂದಿನ ಇತಿಹಾಸ

ಜೂನ್ 30

119 ವರ್ಷ ವಯಸ್ಸಿನ ಶತಾಯುಷಿ ಸ್ವಾತಂತ್ರ್ಯ ಯೋಧ ಪಂಡಿತ ಸುಧಾಕರ ಚತುರ್ವೇದಿಅವರನ್ನು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಪಿಂಚಣಿದಾರರ ಸಂಘದ ಸ್ವರ್ಣ ಮಹೋತ್ಸವ ಆಚರಣೆ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

2008: ಪಾಕಿಸ್ಥಾನದ ಖೈಬರ್ ಪ್ರಾಂತ್ಯದಲ್ಲಿ ಉಗ್ರರನ್ನು ಮಣಿಸಲು ಭದ್ರತಾ ಪಡೆಗಳು ನಡೆಸಿದ ಕ್ಷಿಪಣಿ ದಾಳಿಯಲ್ಲಿ 9 ಜನ ಮೃತರಾದರು. ಖೈಬರ್ ಪ್ರಾಂತ್ಯದ ಬಾರಾದಲ್ಲಿ ಉಗ್ರಗಾಮಿ ಧಾರ್ಮಿಕ ಸಂಘಟನೆ `ಅಮಾರ್ ಬಿಲ್ ಮರೂಫ್ ವಾ ನಹಿ ಅನೀಲ್ಮುಂಕಾರ್' ಕೇಂದ್ರ ಕಚೇರಿ ಮೇಲೆ ಸಂಘಟನೆಯ ಮುಖ್ಯಸ್ಥ ಹಾಜಿ ನಾಮದಾರ್ ಅವರನ್ನು ಗುರಿಯಾಗಿಟ್ಟುಕೊಂಡು ಕ್ಷಿಪಣಿ ಪ್ರಯೋಗಿಸಲಾಯಿತು.

2007: ಕರ್ನಾಟಕ ರಾಜ್ಯದಲ್ಲಿ ಈದಿನ ಮಧ್ಯರಾತ್ರಿಯಿಂದ ಸಾರಾಯಿ ನಿಷೇಧ ಜಾರಿಗೆ ಬಂದಿತು. ಸ್ತ್ರೀಶಕ್ತಿ ಸಂಘಟನೆಗಳ ಒತ್ತಡಕ್ಕೆ ಮಣಿದು ಜುಲೈ 1ರಿಂದ ಸಾರಾಯಿ ನಿಷೇಧಿಸುವುದಾಗಿ ಸರ್ಕಾರ ಮುಂಗಡಪತ್ರದಲ್ಲಿ ಘೋಷಿಸಿತ್ತು. ಆದೇಶ ಧಿಕ್ಕರಿಸಿ ಸಾರಾಯಿ ತಯಾರಿಸಿದರೆ ಅಥವಾ ಮಾರಾಟ ಮಾಡಿದರೆ ಗೂಂಡಾ ಕಾಯ್ದೆ ಅನ್ವಯ 5 ವರ್ಷದ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಸರ್ಕಾರ ಎಚ್ಚರಿಕೆ ನೀಡಿತು.

2007: ಮಹಿಳಾ ಗ್ರ್ಯಾಂಡ್ ಮಾಸ್ಟರ್ ಕೊನೇರು ಹಂಪಿ ಅವರು ಹಾಲೆಂಡಿನ ಹಿಲ್ವೆರ್ಸಮ್ ನಲ್ಲಿ ನಡೆದ ಪುರುಷರ ಚೆಸ್ ಟೂರ್ನಿಯಲ್ಲಿ ಪಾಲ್ಗೊಂಡದ್ದಲ್ಲದೆ ಪ್ರಶಸ್ತಿಯನ್ನು ಕೂಡಾ ಜಯಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದರು. ಹಂಪಿ ಅವರು ತಮ್ಮ ಎದುರಾಳಿ ಅತಿಥೇಯ ರಾಷ್ಟ್ರದ ಗ್ರ್ಯಾಂಡ್ ಮಾಸ್ಟರ್ ಎರಿಕ್ ವಾನ್ ಡೆನ್ ಡೊಯಲ್ ಅವರನ್ನು ಪರಾಭವಗೊಳಿಸಿ ಎಚ್ ಎಸ್ ಜಿ ಅಂತಾರಾಷ್ಟ್ರೀಯ ಓಪನ್ ಚೆಸ್ ಟೂರ್ನಿಯಲ್ಲಿ ಚಾಂಪಿಯನ್ ಶಿಪ್ ಬಗಲಿಗೆ ಹಾಕಿಕೊಂಡರು.

2007: ದೆಹಲಿಯ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಬಿಜೆಪಿಯ ಹಿರಿಯ ಮುಖಂಡ ಸಾಹಿಬ್ ಸಿಂಗ್ ವರ್ಮಾ (64) ಅವರು ರಾಜಸ್ಥಾನದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತರಾದರು. ಶಹಜಾನಪುರ ಬಳಿ ಅವರ ಕಾರಿಗೆ ಮಿನಿಟ್ರಕ್ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿತು. ದಿಲ್ಲಿಯ ಮುಂಡ್ಯಾ ಗ್ರಾಮದಲ್ಲಿ 1943ರ ಮಾರ್ಚ್ 15ರಂದು ರೈತ ಕುಟುಂಬದಲ್ಲಿ ಜನಿಸಿದ ವರ್ಮಾ 1993ರಲ್ಲಿ ದೆಹಲಿಯ ಬಿಜೆಪಿ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿ, 1996ರಲ್ಲಿ ಮುಖ್ಯಮಂತ್ರಿ ಗದ್ದುಗೆಗೆ ಏರಿದ್ದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರೂ, ಪ್ರಚಾರಕರೂ ಆಗಿದ್ದ ಅವರು 2002ರಲ್ಲಿ ಕೇಂದ್ರದಲ್ಲಿ ಕಾರ್ಮಿಕ ಸಚಿವರಾಗಿದ್ದರು. ಬಿಜೆಪಿ ಉಪಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.

2007: ಹಿಂದಿನ ದಿನದ ರಾತ್ರಿಯಿಂದ ಸುರಿದ ಮಹಾಮಳೆಗೆ ಮುಂಬೈ ಸೇರಿದಂತೆ ಮಹಾರಾಷ್ಟ್ರದಲ್ಲಿ ಒಟ್ಟು 16 ಜನ ಮೃತರಾಗಿ, ನೂರಾರು ಗ್ರಾಮಗಳು ಜಲಾವೃತಗೊಂಡವು.

2007: 119 ವರ್ಷ ವಯಸ್ಸಿನ ಶತಾಯುಷಿ ಸ್ವಾತಂತ್ರ್ಯ ಯೋಧ ಪಂಡಿತ ಸುಧಾಕರ ಚತುರ್ವೇದಿ ಅವರನ್ನು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಪಿಂಚಣಿದಾರರ ಸಂಘದ ಸ್ವರ್ಣ ಮಹೋತ್ಸವ ಆಚರಣೆ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

2007: ಕರ್ನಾಟಕದ ಮಾಜಿ ಮುಖ್ಯ ಕಾರ್ಯದರ್ಶಿ ಜಿ.ವಿ.ಕೆ. ರಾವ್ (87) ಬೆಂಗಳೂರಿನ ಜಯನಗರದ ತಮ್ಮ ನಿವಾಸದಲ್ಲಿ ಮೃತರಾದರು. 1974- 1977ರ ಅವಧಿಯಲ್ಲಿ ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದಾಗ ಜಿ.ವಿ.ಕೆ. ರಾವ್ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿದ್ದರು.

2007: ಭಾರತೀಯ ಮೂಲದ ಆರ್ಥಿಕ ತಜ್ಞೆ ಶೃತಿ ವಡೇರಾ ಅವರು ಬ್ರಿಟನ್ನಿನ ಅಂತಾರಾಷ್ಟ್ರೀಯ ಅಭಿವೃದ್ಧಿ ಇಲಾಖೆಯಲ್ಲಿ ಸಂಸದೀಯ ಅಧೀನ ಕಾರ್ಯದರ್ಶಿಯಾಗಿ ನೇಮಕ ಗೊಂಡರು. ಪ್ರಧಾನಿ ಗಾರ್ಡನ್ ಬ್ರೌನ್ ಅವರಿಗೆ ಆಪ್ತರಾದ ವಡೇರಾ ಅವರಿಗೆ ನೀಡಲಾಗಿರುವ ಈ ಹುದ್ದೆ ಸಂಪುಟದಲ್ಲಿ ಸಹಾಯಕ ಸಚಿವರ ಹುದ್ದೆಗೆ ಸರಿಸಮವಾದದ್ದು.

2002: ಜಪಾನಿನ ಯೊಕೊಹಾಮಾದಲ್ಲಿ ಜರ್ಮನಿಯ ವಿರುದ್ಧ ಬ್ರೆಝಿಲನ್ನು 2-0 ಅಂತರದ ವಿಜಯದತ್ತ ಮುನ್ನಡೆಸುವ ಮೂಲಕ ಮೂರು ಫೈನಲ್ ಫುಟ್ ಬಾಲ್ ವಿಶ್ವಕಪ್ ಪಂದ್ಯಗಳಲ್ಲಿ ಆಡಿದ ಮೊತ್ತ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಬ್ರೆಝಿಲ್ ನ ಕ್ಯಾಪ್ಟನ್ ಮಾರ್ಕೊಸ್ ಕಫು ಪಾತ್ರರಾದರು.

1997: ಹಾಂಕಾಂಗಿನ ಗವರ್ನಮೆಂಟ್ ಹೌಸ್ ಮೇಲೆ ಇಂಗ್ಲೆಂಡಿನ ಯೂನಿಯನ್ ಜ್ಯಾಕ್ ಕಟ್ಟ ಕಡೆಯ ಬಾರಿಗೆ ಹಾರಾಡಿತು. 156 ವರ್ಷಗಳ ನಂತರ ತನ್ನ ವಸಾಹತನ್ನು ಚೀನಾಕ್ಕೆ ಒಪ್ಪಿಸಲು ಬ್ರಿಟನ್ ಈ ದಿನ ಸಿದ್ಧತೆ ನಡೆಸಿತು.

1948: ಬೆಲ್ ಟೆಲಿಫೋನ್ ಲ್ಯಾಬೋರೇಟರೀಸ್ ಸಂಶೋಧನಾ ನಿರ್ದೇಶಕ ರಾಲ್ಫ್ ಬೌನ್ ಅವರು `ಟ್ರಾನ್ಸಿಸ್ಟರ್' ನಿರ್ಮಿಸಿದ್ದನ್ನು ನ್ಯೂಜೆರ್ಸಿಯ ಮುರ್ರೇ ಹಿಲ್ಸ್ ನಲ್ಲಿ ಪತ್ರಕರ್ತರ ಮುಂದೆ ಪ್ರಕಟಿಸಿದರು. ಮ್ಯಾನ್ ಹಟ್ಟನ್ ನ ವೆಸ್ಟ್ ಸ್ಟ್ರೀಟ್ ನಲ್ಲಿದ್ದ ಬೆಲ್ ಕೇಂದ್ರ ಕಚೇರಿಯಲ್ಲಿ ಈ ಪತ್ರಿಕಾಗೋಷ್ಠಿ ನಡೆಯಿತು.

1917: ಭಾರತೀಯ ರಾಷ್ಟ್ರೀಯವಾದಿ ಬ್ರಿಟಿಷ್ ಆರ್ಥಿಕ ನೀತಿಯ ಕಟು ಟೀಕಾಕಾರ ದಾದಾಭಾಯಿ ನವರೋಜಿ ಅವರು ಮುಂಬೈಯಲ್ಲಿ ತಮ್ಮ 91ನೇ ವಯಸ್ಸಿನಲ್ಲಿ ನಿಧನರಾದರು. `ಭಾರತದ ಹಿರಿಯಜ್ಜ' (ಗ್ರ್ಯಾಂಡ್ ಓಲ್ಡ್ಮ್ಯಾನ್ ಆಫ್ ಇಂಡಿಯಾ) ಎಂದೇ ಅವರು ಖ್ಯಾತರಾಗಿದ್ದರು.

1859: ಫ್ರೆಂಚ್ ಸಾಹಸಿ ಬ್ಲಾಂಡಿನ್ ಅವರು ನಯಾಗರಾ ಜಲಪಾತಕ್ಕೆ ಅಡ್ಡಲಾಗಿ 160 ಅಡಿ ಎತ್ತರದಲ್ಲಿ 1100 ಅಡಿ ಉದ್ದದ ಹಗ್ಗ ಕಟ್ಟಿ ಅದರ ಮೇಲೆ ನಡೆಯುತ್ತಾ ಜಲಪಾತವನ್ನು ದಾಟಿದರು. 5000 ಮಂದಿ ಈ ಸಾಹಸವನ್ನು ವೀಕ್ಷಿಸಿದರು.

(ಸಂಗ್ರಹ: ನೆತ್ರಕೆರೆ ಉದಯಶಂಕರ)

ಇಂದಿನ ಇತಿಹಾಸ History Today ಜೂನ್ 29

 

ಇಂದಿನ ಇತಿಹಾಸ

ಜೂನ್ 29


ಫೆರ್ನಾಂಡೊ ಟೊರೆಸ್ ಅವರು ತಂದಿತ್ತ ಏಕೈಕ ಗೋಲಿನ ನೆರವಿನಿಂದ ಸ್ಪೇನ್ ತಂಡ ಜರ್ಮನಿ ತಂಡವನ್ನು ಮಣಿಸಿ ಯೂರೊ 2008 ಫುಟ್ಬಾಲ್ ಚಾಂಪಿಯನ್ಶಿಪ್ನ ಕಿರೀಟ ಮುಡಿಗೇರಿಸಿಕೊಂಡಿತು. ಆಸ್ಟ್ರಿಯಾದ ರಾಜಧಾನಿ ವಿಯೆನ್ನಾದಲ್ಲಿರುವ ಅರ್ನೆಸ್ಟ್ ಹಾಪೆಲ್ ಕ್ರೀಡಾಂಗಣದಲ್ಲಿ ರಾತ್ರಿ ನಡೆದ ಫೈನಲ್ ಪಂದ್ಯದಲ್ಲಿ ಫೆರ್ನಾಂಡೊ ಟೊರೆಸ್ ಅವರು ಮೊದಲಾರ್ಧದ 33ನೇ ನಿಮಿಷದಲ್ಲಿ ನಿರ್ಣಾಯಕ ಗೋಲು ಗಳಿಸಿದರು.


2016: ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ಹಾಗೂ ನಿವೃತ್ತ ನೌಕರರ ವೇತನ ಪರಿಷ್ಕರಣೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಒಪ್ಪಿಗೆ ನೀಡಿತು. 7 ನೇ ವೇತನ ಆಯೋಗದ ಶಿಫಾರಸು ಪ್ರಕಾರ ಕೇಂದ್ರ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಯಲ್ಲಿ ಶೇಕಡಾ 23.55ರಷ್ಟು ಏರಿಕೆಯಾಗಲಿದೆ. 7 ನೆ ವೇತನ ಆಯೋಗದ ಶಿಫಾರಸು ಜಾರಿಯಿಂದ ಕೇಂದ್ರ ಸರ್ಕಾರದ 4.4 ಕೋಟಿ ನೌಕರರು ಮತ್ತು 5.5 ಕೋಟಿ ನಿವೃತ್ತ ಸಿಬ್ಬಂದಿಗೆ ಅನುಕೂಲವಾಗಲಿದೆ. ಕೇಂದ್ರ ಬೊಕ್ಕಸದ ಮೇಲೆ 1.02 ಲಕ್ಷ ಕೋಟಿ ರೂಪಾಯಿ ಹೊರೆ ಬೀಳಲಿದೆ. 2016 ಜನವರಿ 1ರಿಂದ ಪೂರ್ವಾನ್ವಯಾಗಿ ವೇತನ ಪರಿಷ್ಕರಣೆಯಾಗಲಿದೆ. ನ್ಯಾಯಮೂರ್ತಿ .ಕೆ. ಮಾಥುರ್ ನೇತೃತ್ವದ 7 ನೇ ವೇತನ ಆಯೋಗವು 900 ಪುಟಗಳ ವರದಿಯನ್ನು 2015 ನವೆಂಬರ್ನಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ ಅವರಿಗೆ ಸಲ್ಲಿಸಿತ್ತು. ವರದಿಯ ಪರಿಶೀಲನೆಗೆ ಸಂಪುಟ ಕಾರ್ಯದರ್ಶಿ ಪಿ ಕೆ ಸಿನ್ಹಾ ನೇತೃತ್ವದಲ್ಲಿ ಉನ್ನತಾಧಿಕಾರ ಸಲಹಾ ಸಮಿತಿ ರಚಿಸಲಾಗಿತ್ತು. ಸಿನ್ಹಾರ ವೇತನ ಸಲಹಾ ಸಮಿತಿ ಸಲ್ಲಿಸಿದ ವರದಿ ಆಧರಿಸಿ 7 ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ಕುರಿತು ಈದಿನ ಸಂಪುಟವು ಚರ್ಚಿಸಿ ಬಳಿಕ ಒಪ್ಪಿಗೆ ನೀಡಿತು. 6 ನೇ ವೇತನ ಆಯೋಗದ ಶಿಫಾರಸಿನಂತೆ ಶೇಕಡಾ 20% ದಷ್ಟು ವೇತನ ಹೆಚ್ಚಿಸಿದ್ದ ಸರ್ಕಾರ ಪರಿಷ್ಕರಣೆಯನ್ನು 2008ರಿಂದ ಜಾರಿಗೊಳಿಸಿತ್ತು.

2016: ವಡೋದರಾ: ದೇಶದ ಪ್ರಸಿದ್ಧ ಚಿತ್ರ ಕಲಾವಿದ ಹಾಗೂ ಸಾವಿರಾರು ಯುವ ಕಲಾವಿದರ ಸ್ಪೂರ್ತಿಯ ಸೆಲೆ ಕೆ.ಜಿ. ಸುಬ್ರಮಣ್ಯನ್ ಅವರು ಈದಿನ ನಿಧನರಾದರು. ಮೃತರಿಗೆ 91 ವರ್ಷ ವಯಸ್ಸಾಗಿತ್ತು. ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದ ಕೆ.ಜಿ. ಸುಬ್ರಮಣ್ಯನ್ ಕುಟುಂಬ ಸದಸ್ಯರನ್ನು, ಸಾವಿರಾರು ಕಲಾವಿದರನ್ನು, ಕಲಾಪ್ರಿಯರನ್ನು, ಕಲಾಭಿಮಾನಿಗಳನ್ನು ಅಗಲಿದರು. ಭಾರತೀಯ ನವ್ಯ ಕಲಾಪ್ರಕಾರದಲ್ಲಿ ತಮ್ಮದೇ ವಿಭಿನ್ನ ಶೈಲಿಯ ಮೂಲಕ ಗುರುತಿಸಿಕೊಂಡಿದ್ದ ಅವರು ಭಾರತೀಯ ನವ್ಯ ಚಿತ್ರಕಲಾ ಪರಂಪರೆಯ ಹುಟ್ಟಿಗೂ ಕಾರಣೀಕರ್ತರಾದವರಲ್ಲಿ ಒಬ್ಬರಾಗಿದ್ದರು. ಅದರಲ್ಲೂ ಸಂದಭೋಚಿತ ಆಧುನಿಕ ನವ್ಯ ಕಲಾಕೃತಿಗಳ (Contextual Modernism) ರಚನೆಯಲ್ಲಿ ವಿಶೇಷವಾದ ಸೇವೆ ಸಲ್ಲಿಸಿದ ಅಪರೂಪದ ಕಲಾಕಾರ ಎನಿಸಿಕೊಂಡಿದ್ದರು. ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ, ಕಾಳಿದಾಸ ಸಮ್ಮಾನ್ ಪುರಸ್ಕಾರಗಳು ಕೆ.ಜಿ.ಸುಬ್ರಮಣ್ಯನ್ ಅವರಿಗೆ ಸಂದಿದ್ದವು. 1924ರಲ್ಲಿ ಕೇರಳದಲ್ಲಿ ಜನಿಸಿದ ಕೆ.ಜಿ.ಸುಬ್ರಮಣ್ಯನ್ ಅವರು ಬಾಲ್ಯದಲ್ಲಿಯೇ ಚಿತ್ರಕಲೆಯಲ್ಲಿ ವಿಶೇಷವಾದ ಆಸಕ್ತಿ ಹೊಂದಿದ್ದರು. ಬಳಿಕ ವಿಶ್ವಭಾರತಿ ವಿಶ್ವವಿದ್ಯಾಲಯದಲ್ಲಿ ಚಿತ್ರಕಲೆಯನ್ನೇ ಅಧ್ಯಯನ ಮಾಡಿ ಪದವಿ ಪಡೆದರು. ನಂತರದ ದಿನಗಳಲ್ಲಿ ಬರೋಡಾ ಎಂ.ಎಸ್. ವಿಶ್ವವಿದ್ಯಾಲಯದ ಫೈನ್ ಆರ್ಟ್ ಕಾಲೇಜು, ಶಾಂತಿನಿಕೇತನ ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಕೆ.ಜಿ. ಸುಬ್ರಮಣ್ಯನ್ ಕಳೆದ ಕೆಲ ವರ್ಷಗಳಿಂದ ಬರೋಡದಲ್ಲಿ ತಮ್ಮ ಮಗಳು ಉಮಾ ಅವರ ಜತೆ ವಾಸವಿದ್ದರು. ಇತ್ತೀಚೆಗಷ್ಟೇ ಕೆ.ಜಿ. ಸುಬ್ರಮಣ್ಯನ್ ಅವರ ಇತ್ತೀಚೆಗಿನ ಕಲಾಕೃತಿಗಳ ಪ್ರದರ್ಶನ ಬೆಂಗಳೂರಿನ ರಾಷ್ಟ್ರೀಯ ನವ್ಯ ಕಲಾಗ್ಯಾಲರಿಯಲ್ಲಿ ಪ್ರದರ್ಶನಗೊಂಡಿತ್ತು.
2016: ಇಸ್ತಾನ್ಬುಲ್ವಿಶ್ವದ ಅತಿ ಹೆಚ್ಚು ಜನದಟ್ಟಣೆ ಇರುವ ಟರ್ಕಿಯ ಇಸ್ತಾನ್ಬುಲ್ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಮೂರು ಆತ್ಮಾಹುತಿ ಬಾಂಬ್ ಸ್ಫೋಟಗಳಲ್ಲಿ 41 ಪ್ರಯಾಣಿಕರು ಮೃತರಾಗಿ,  350ಕ್ಕೂ ಹೆಚ್ಚು ಜನ ಗಾಯಗೊಂಡರು. ಸ್ಥಳೀಯ ಕಾಲಮಾನ ನಸುಕಿನ 3 ಗಂಟೆಗೆ ಟ್ಯಾಕ್ಸಿಯಲ್ಲಿ ಬಂದಿಳಿದ ಮೂವರು ಆತ್ಮಹತ್ಯಾ ಬಾಂಬರ್ಗಳು ಏಕಾಏಕಿ ಪ್ರಯಾಣಿಕರ ಮೇಲೆ ಗುಂಡಿನ ಮಳೆಗರೆದರು. ಕ್ಷಣಾರ್ಧಗಳಲ್ಲಿ ಈ ದುರಂತ ಸಂಭವಿಸಿತು. ದುರಂತದ ಬಗ್ಗೆ ತೀವ್ರ ದಿಗ್ ಭ್ರಮೆ ವ್ಯಕ್ತಪಡಿಸಿದ ಟರ್ಕಿಷ್ ಪ್ರಧಾನಿ ಬಿನಾಲಿ ಇಡಿರಿಮ್ ಇದು ಇಸ್ಲಾಮಿಕ್ ರಾಷ್ಟ್ರಗಳ ಕೈವಾಡದಿಂದ ಐಸಿಎಸ್ ಉಗ್ರರು ನಡೆಸಿದ ದಾಳಿ ಎಂಬ ಶಂಕೆ ಇದೆ ಎಂದು ಪ್ರತಿಕ್ರಿಯಿಸಿದರು.

2016: ಮುಂಬೈ: ಖ್ಯಾತ ಬಾಲಿಉಡ್ ನಟ ಹೃತಿಕ್ ರೋಷನ್ ಇಸ್ತಾನ್ಬುಲ್ ಬಾಂಬ್ ಸ್ಫೋಟ ದುರಂತದಿಂದ ಅದೃಷ್ಟವಶಾತ್ ಪಾರಾದರು. 36 ಪ್ರಯಾಣಿಕರನ್ನು ಬಲಿ ತೆಗೆದುಕೊಂಡ ಉಗ್ರರ ಹಠಾತ್ ದಾಳಿಗೆ ಕೆಲವೇ ಗಂಟೆಗಳ ಮೊದಲು ಹೃತಿಕ್ ಇಸ್ತಾನ್ಬುಲ್ ಅಟಾಟರ್ಕ್ ವಿಮಾನ ನಿಲ್ದಾಣದಲ್ಲಿದ್ದರು. ರಜೆ ನಿಮಿತ್ತ ಮಕ್ಕಳೊಂದಿಗೆ ಆಫ್ರಿಕಾ ಪ್ರವಾಸಕ್ಕೆ ತೆರಳಿದ್ದ ಹೃತಿಕ್, ಭಾರತಕ್ಕೆ ಮರಳುವ ಮುನ್ನ ಇಸ್ತಾನ್ಬುಲ್ನಲ್ಲಿ ಇಳಿದಿದ್ದರು. ಸದ್ಯ ಸಂಪರ್ಕ ವಿಮಾನ ದೊರಕುವುದಿಲ್ಲ. ಮುಂಬೈಗೆ ತೆರಳಲು ಮತ್ತೆ ವಿಮಾನ ಲಭ್ಯತೆಗೆ ಒಂದು ದಿನ ಕಾಯಲೇಬೇಕೆಂಬ ಸೂಚನೆ ಸಿಕ್ಕ ಕೂಡಲೇ ಅವರು ಅಲ್ಲಿಂದ ಜಾಗ ಖಾಲಿ ಮಾಡಿದ್ದರು. ವಿಮಾನ ಮಿಸ್ ಆಗಿದ್ದೇ ಹೃತಿಕ್ ಅವರನ್ನು ದುರ್ಘಟನೆಯಿಂದ ಪಾರುಮಾಡಿತು. ಏರ್ಪೋಟ್ ಅಧಿಕಾರಿಗಳಿಗೆ ಮತ್ತು ಅಭಿಮಾನಿಗಳಿಗೆ ಕೃತಜ್ಞತೆ ಅರ್ಪಿಸಿದ ಹೃತಿಕ್, ಭಯೋತ್ಪಾದನೆ ವಿರುದ್ಧ ಎಲ್ಲರೂ ಒಟ್ಟಾಗಿ ಸೇರಿ ಹೋರಾಡೋಣ ಎಂದು ಕರೆ ಕೊಟ್ಟರು.

2016: ನವದೆಹಲಿ: ಟಿಕೆಟ್ಗಾಗಿ ಉದ್ದನೆಯ ಸಾಲು, ಅವ್ಯವಸ್ಥೆಯ ವಿಶ್ರಾಂತಿ ಕೊಠಡಿ, ಗಲೀಜು ಶೌಚಾಲಯಗಳಿಂದ ಕೂಡಿರುವ ಈಗಿನ ಅದೆಷ್ಟೋ ರೈಲ್ವೆ ನಿಲ್ದಾಣಗಳಿಗೂ ಭಿನ್ನವಾದ ಹೈಟೆಕ್ ನಿಲ್ದಾಣಗಳು ಭಾರತದಲ್ಲಿ ನಿರ್ಮಾಣಗೊಳ್ಳಲಿವೆ. ಶಾಪಿಂಗ್ವಾಲ್, ರೆಸ್ಟೋರೆಂಟ್ಗಳು, ಹ್ಯಾಲಿಪ್ಯಾಡ್ಗಳನ್ನೊಳಗೊಂಡ ವಿಶ್ವದರ್ಜೆಯ ರೈಲ್ವೆ ನಿಲ್ದಾಣಗಳು ಇವಾಗಿರಲಿವೆ. ವಿಮಾನ ನಿಲ್ದಾಣಗಳಿಗೆ ಏನೂ ಕಡಿಮೆ ಇಲ್ಲ ಎನ್ನುವಂತೆ ತಲೆ ಎತ್ತಲಿವೆ! . ಇದೀಗ ಕೇಂದ್ರ ಸರ್ಕಾರ ಇಂತಹದ್ದೇ ವಿಶ್ವದರ್ಜೆಯ ರೈಲ್ವೇ ನಿಲ್ದಾಣಗಳ ನಿರ್ಮಾಣಕ್ಕೆ ಕೈಹಾಕಿದೆಶಾಪ್ಪಿಂಗ್ ಮಾಲ್, ಸ್ಟಾರ್ ಹೋಟೆಲುಗಳು, ಹೆಲಿಪ್ಯಾಡ್ಗಳನ್ನೊಳಗೊಂಡ ಹೊಸ ರೀತಿಯ ರೈಲ್ವೆ ನಿಲ್ದಾಣದ ಪುನರ್ನಿರ್ವಣ ಕಾರ್ಯಕ್ಕೆ ಸಚಿವಾಲಯ 100 ಕೋಟಿ ರೂ. ಹಾಗೂ 300 ಕೋಟಿ ರೂ. ವಾಣಿಜ್ಯ ಅಭಿವೃದ್ಧಿಗಾಗಿ ಮೀಸಲಿರಿಸಿದೆ. ಹಬೀಬ್ಗಂಜ್ನಲ್ಲಿ ಈಗಾಗಲೇ ನಿರ್ಮಾಣ ಕಾರ್ಯಗಳು ಆರಂಭಗೊಂಡಿದೆ. ಇದಲ್ಲದೆ ಗುಜರಾತ್ ಸೂರತ್ ಹಾಗೂ ಗಾಂಧಿನಗರ, ದೆಹಲಿಯ ಆನಂದ ವಿಲಾಸ್ ಹಾಗೂ ಬಿಜವಾಸನ್ ನಿಲ್ದಾಣಗಳು, ಪುಣೆಯ ಶಿವಾಜಿ ನಗರ, ಚಂಡೀಗಢ, ಮೊಹಾಲಿಯ ಸಾಸ್ ನಗರಗಳೂ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಂಡಿವೆ. ನಿರ್ಮಾಣಕಾರ್ಯ ಕೈಗೊಂಡಿರುವ ಫ್ರೆಂಚ್ ರೈಲ್ವೆ ಸಂಸ್ಥೆ ಅಂಬಾಲ ಹಾಗೂ ಲುದಿಯಾನ ನಿಲ್ದಾಣಗಳಲ್ಲೂ ನಿರ್ಮಾಣಕಾರ್ಯ ಪ್ರಾರಂಭಿಸಿದೆ. ಉತ್ತರ ಪ್ರದೇಶದಲ್ಲಿ 12 ರೈಲ್ವೆ ನಿಲ್ದಾಣಗಳು ಪಟ್ಟಿಗೆ ತೇರ್ಗಡೆಯಾಗಿದ್ದು ಉಳಿದ ರಾಜ್ಯಗಳಿಗಿಂತ ರಾಜ್ಯದಲ್ಲಿ ಹೆಚ್ಚು ರೈಲ್ವೆ ನಿಲ್ದಾಣಗಳು ಪುನರ್ ನಿರ್ಮಾಣವಾಗಲಿದೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ. ಭಾರತದ ರೈಲ್ವೆ ನಿಲ್ದಾಣಗಳನ್ನು ವಿಶ್ವ ದರ್ಜೆಯ ನಿಲ್ದಾಣವನ್ನಾಗಿ ಮಾಡಲು ದಕ್ಷಿಣ ಕೊರಿಯಾ, ಜಪಾನ್, ಬೆಲ್ಜಿಯಂ, ಸ್ವಿಜರ್ಲ್ಯಾಂಡ್ ಮತ್ತು ಆಸ್ಟ್ರೇಲಿಯಾದ ನಿರ್ಮಾಣ ಸಂಸ್ಥೆಗಳು ಆಸಕ್ತಿ ತೋರಿಸಿದೆ ಎಂದು ಸಚಿವಾಲಯ ತಿಳಿಸಿದೆ.

2016: ನೊಯಿಡಾ: ವಿಶ್ವದ ಅತ್ಯಂತ ಅಗ್ಗದ ಸ್ಮಾರ್ಟ್ ಫೋನ್ ಕೇವಲ 251 ರೂಪಾಯಿ ಬೆಲೆಯಫ್ರೀಡಮ್ 251’ ಸ್ಮಾರ್ಟ್ ಫೋನ್ ವಿತರಣೆ ವಿಳಂಬವಾಗಿದ್ದು, ಜೂನ್ 30 ಬದಲಿಗೆ ಜುಲೈ 6ರಂದು ಬಿಡುಗಡೆಯಾಗಲಿದೆ ಎಂದು ರಿಂಗಿಂಗ್ ಬೆಲ್ಸ್ ಕಂಪೆನಿ ಇಲ್ಲಿ ಪ್ರಕಟಿಸಿತು. ಮೇಕ್ ಇಂಡಿಯಾಉಪಕ್ರಮದ ಅಡಿಯಲ್ಲಿ ಯೋಜನೆಗೆ ಬೆಂಬಲ ಪಡೆಯುವ ಯತ್ನವಾಗಿ ತಾವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಯತ್ನಿಸುತ್ತಿದ್ದೇವೆ ಎಂದು ರಿಂಗಿಂಗ್ ಬೆಲ್ಸ್ ಸ್ಥಾಪಕ ಮತ್ತು ಸಿಇಒ ಮೋಹಿತ್ ಗೋಯೆಲ್ ಇಲ್ಲಿ ತಿಳಿಸಿದರು. ಗೋಯೆಲ್ ಪ್ರಕಾರ ಸಾರ್ವಜನಿಕರಿಗೆ ವಿತರಣೆಗಾಗಿ 2 ಲಕ್ಷಫ್ರೀಡಮ್ 251’ ಸ್ಮಾರ್ಟ್ ಫೋನ್ ಹ್ಯಾಂಡ್ಸೆಟ್ಗಳು ಸಿದ್ಧವಾಗಿವೆ. ‘ಈಮಧ್ಯೆ ನಾವು ನಮ್ಮ ಪ್ರಕರಣವನ್ನು ಮೇಕ್ ಇನ್ ಇಂಡಿಯಾ ಉಪಕ್ರಮಕ್ಕೆ ಕೊಡುಗೆ ನೀಡಬಯಸಿರುವ ದೇಶೀ ಸ್ಮಾರ್ಟ್ಫೋನ್ ತಯಾರಕರು ಎಂಬುದಾಗಿ ಪರಿಗಣಿಸಿ ಬೆಂಬಲಿಸುವಂತೆ ಕೋರಲು ಪ್ರಧಾನಿಯವರ ಭೇಟಿ ಅವಕಾಶ ಕೋರಿ ಪತ್ರ ಸಿದ್ಧ ಪಡಿಸಿದ್ದೇವೆ. ಫೋನ್ ವಿತರಣೆ ಆರಂಭದ ಬಳಿಕ ಜುಲೈ 7ರಂದು ರಾಜಧಾನಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಉದ್ಘಾಟನಾ ಸಮಾರಂಭ ಸಂಘಟಿಸಲು ನಾವು ಯೋಜಿಸುತ್ತಿದ್ದೇವೆಎಂದು ಗೋಯೆಲ್ ಹೇಳಿದರು.

2016: ಹೈದರಾಬಾದ್: ಟಾಲಿವುಡ್ ಸ್ಟಾರ್ ನಟಿ ಸಮಂತಾ ಹಾಗೂ ಸೂಪರ್ ಸ್ಟಾರ್ ನಾಗಾರ್ಜುನ ಅವರ ಪುತ್ರ ನಾಗಚೈತನ್ಯ ವಿವಾಹವಾಗಲಿದ್ದು, ಜುಲೈ ಅಂತ್ಯ ಅಥವಾ ಅಗಸ್ಟ್ ಮೊದಲವಾರದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ನಾಗಾರ್ಜುನ ಕಿರಿಯ ಪುತ್ರ ಅಖಿಲ್ ಅಕ್ಕಿನೇನಿ ತಿಳಿಸಿದರು. ದಕ್ಷಿಣ ಭಾರತದ ನಟಿಯರಲ್ಲಿ ಮುಂಚುಣಿಯಲ್ಲಿರುವ ನಟಿ ಸಮಂತಾ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಸುದ್ದಿ ಸಮಂತ ಅಭಿಮಾನಿಗಳಿಗೆ ನುಂಗಲಾರದ ತುತ್ತಾಗಿದೆ. ವಿಚಾರವಾಗಿ ಹಲವು ದಿನಗಳಿಂದ ಹರಿದಾಡುತ್ತಿದ್ದ ಗಾಳಿ ಸುದ್ದಿಗೆ ಇದೀಗ ಬಲ ಬಂದಿದ್ದು, ನಾಗಾರ್ಜುನ ಕಿರಿಯ ಪುತ್ರ ಕುರಿತು ಸ್ಪಷ್ಟನೆ ನೀಡಿದರು. ಸಹೋದರ ನಾಗಚೈತನ್ಯ ಹಾಗೂ ಸಮಂತ ಒಬ್ಬರನ್ನೊಬ್ಬರು ಇಷ್ಟಪಟ್ಟು ಮದುವೆ ಆಗಲು ನಿರ್ಧರಿಸಿದ್ದಾರೆ. ಇದಕ್ಕೆ ಎರಡು ಕುಟುಂಬಗಳು ಸಹಮತಿ ಸೂಚಿಸಿವೆ, ಮುಂದಿನ ವರ್ಷ ವಿವಾಹ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ ಎಂದು ಹೇಳಿದರು. ಮಧ್ಯೆ ಅಖಿಲ್ ಅಕ್ಕಿನೇನಿ ಹೈದರಾಬಾದ್ ಮೂಲದ ವಿನ್ಯಾಸಗಾರ್ತಿ ಶ್ರೀಯಾ ಸೋಮ್ ಜತೆಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಅಕ್ಕಿನೇನಿ ಇದನ್ನು ತಳ್ಳಿದ್ದು, ಶ್ರೀಯಾ ತಮ್ಮ ಕುಟುಂಬದ ಸ್ನೇಹಿತೆಯಾಗಿದ್ದಾಳೆ ಎಂದು ತಿಳಿಸಿದರು.

2016: ನವದೆಹಲಿ: ರಾಷ್ಟ್ರೀಯ ಖನಿಜ ಅನ್ವೇಷಣಾ ನೀತಿಗೆ (ಎನ್ಎಂಇಪಿ) ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿತು. ಇದರಿಂದಾಗಿ ಈಗ ಅಂದಾಜು 100 ಖನಿಜ ನಿಕ್ಷೇಪಗಳ ಹರಾಜಿಗೆ ದಾರಿ ಸುಗಮವಾಗಿದ್ದು, ರಾಷ್ಟ್ರದ ಖನಿಜ ಸಂಪತ್ತಿನ ಬಳಕೆಗೆ ಒತ್ತು ಸಿಗಲಿದೆ. ‘ಸಚಿವ ಸಂಪುಟವು ಈದಿನ ಎನ್ಎಂಇಪಿಗೆ ಒಪ್ಪಿಗೆ ನೀಡಿದೆ. ನೀತಿಗೆ ಅನುಮೋದನೆ ನೀಡಿದ ಬಳಿಕ ಭಾರತೀಯ ಭೂಗರ್ಭ ಸಮೀಕ್ಷೆಯು (ಜಿಎಸ್) ಗುರುತಿಸಿದ 100 ಖನಿಜ ನಿಕ್ಷೇಪಗಳನ್ನು ಶೋಧನೆಗಾಗಿ ಹರಾಜು ಹಾಕಬಹುದು ಎಂದು ಸುದ್ದಿಮೂಲವೊಂದು ತಿಳಿಸಿತು. ರಾಷ್ಟ್ರದಲ್ಲಿ ಖನಿಜ ಅನ್ವೇಷಣೆಗೆ ಪ್ರೋತ್ಸಾಹ ನೀಡುವ ಸಲುವಾಗಿ ಗಣಿಗಾರಿಕೆ ಸಚಿವಾಲಯವು ರಾಷ್ಟ್ರೀಯ ಖನಿಜ ಸಂಶೋಧನಾ ಟ್ರಸ್ಟ್ನ್ನು (ಎನ್ಎಂಇಟಿ) ರಚಿಸಿದೆ. ಎನ್ಎಂಇಪಿ ಮೂಲಕ ಖನಿಜ ಅನ್ವೇಷಣೆಯಲ್ಲಿ ಖಾಸಗಿ ಪಾಲುದಾರಿಕೆಯನ್ನು ಸರ್ಕಾರ ಬಯಸಿದೆ. ಎನ್ಎಂಇಟಿ ಕೈಗೆತ್ತಿಕೊಳ್ಳುವ ಯೋಜನೆಗಳಲ್ಲಿ ರಾಜ್ಯಗಳು ಪ್ರಮುಖ ಪಾತ್ರ ವಹಿಸಲಿವೆ ಎಂದು ರಾಜ್ಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದರು.
2016: ನವದೆಹಲಿ: ದೇಶದ ಭದ್ರತೆಯ ಹಿತದೃಷ್ಟಿಯಿಂದ ವಾಟ್ಸ್ಆಪ್ ಮೆಸೆಂಜರ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಸಂದೇಶ ರವಾನೆ ವ್ಯವಸ್ಥೆಯ ಅಪ್ಲಿಕೇಷನ್ಗಳನ್ನೇ ನಿಷೇಧಿಸಬೇಕೆಂದು ಸಲ್ಲಿಸಲಾಗಿದ್ದ ಅರ್ಜಿಯನ್ನು  ಸುಪ್ರೀಂ ಕೋರ್ಟ್ ವಜಾಗೊಳಿಸಿತು. ಭಯೋತ್ಪಾದಕ ಕರಿನೆರಳು ದೇಶದ ಮೇಲೆ ಬಿದ್ದಿದ್ದು, ಸದಾ ಆತಂಕದಲ್ಲಿ ಇರಬೇಕಾದ ಅನಿವಾರ್ಯತೆ ಇದೆ. ಕಾರಣ ಕ್ಷಣಾರ್ಧದಲ್ಲಿ ಸಂದೇಶ ರವಾನೆ ಮಾಡಿಕೊಳ್ಳುವ, ಮಾಹಿತಿ ವಿನಿಮಯ ಮಾಡಿಕೊಳ್ಳಲು ಅನುಕೂಲಕರವಾದ ವಾಟ್ಸ್ಆಪ್ನಂಥ ಅಪ್ಲಿಕೇಷನ್ಗಳನ್ನು ಕೂಡಲೇ ನಿಷೇಧಿಸಬೇಕು ಎಂದು ಹರಿಯಾಣ ಮೂಲದ ಆರ್ಟಿಐ ಕಾರ್ಯಕರ್ತ ಸುಧೀರ್ ಯಾದವ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲದೇ ತಮ್ಮ ಅರ್ಜಿಯಲ್ಲಿಇಬ್ಬರು ವ್ಯಕ್ತಿಗಳ ನಡುವೆ ನಡೆದ ಸಂಭಾಷಣೆ ಅಥವಾ ಇನ್ನಾವುದೇ ಸಂದೇಶಗಳನ್ನು ಕಂಪನಿ ಸರ್ಕಾರಕ್ಕೆ ನೀಡುವಂತೆ ಇರಬೇಕು. ಆದರೆ ಸಾಧ್ಯವಾಗದು ಎಂದಾದರೆ ಅದರಿಂದ ಅಪಾಯ ತಪ್ಪಿದ್ದಲ್ಲ. ಭದ್ರತೆಯ ಹಿತದೃಷ್ಟಿಯಿಂದಾದರೂ ಇದು ಲಭ್ಯವಾಗುವಂತೆ ಇರಬೇಕು. ನಿಯಂತ್ರಣ ಸಾಧ್ಯವಾಗದೇ ಇದ್ದಲ್ಲಿ ನಿಷೇಧ ಹೇರುವ ಬಗ್ಗೆ ಪರಿಶೀಲಿಸಬೇಕು ಎಂದು ಮನವಿ ಮಾಡಿಕೊಂಡಿದ್ದರು.

2008: ಫೆರ್ನಾಂಡೊ ಟೊರೆಸ್ ಅವರು ತಂದಿತ್ತ ಏಕೈಕ ಗೋಲಿನ ನೆರವಿನಿಂದ ಸ್ಪೇನ್ ತಂಡ ಜರ್ಮನಿ ತಂಡವನ್ನು ಮಣಿಸಿ ಯೂರೊ 2008 ಫುಟ್ಬಾಲ್ ಚಾಂಪಿಯನ್ಶಿಪ್ನ ಕಿರೀಟ ಮುಡಿಗೇರಿಸಿಕೊಂಡಿತು. ಆಸ್ಟ್ರಿಯಾದ ರಾಜಧಾನಿ ವಿಯೆನ್ನಾದಲ್ಲಿರುವ ಅರ್ನೆಸ್ಟ್ ಹಾಪೆಲ್ ಕ್ರೀಡಾಂಗಣದಲ್ಲಿ ರಾತ್ರಿ ನಡೆದ ಫೈನಲ್ ಪಂದ್ಯದಲ್ಲಿ ಫೆರ್ನಾಂಡೊ ಟೊರೆಸ್ ಅವರು ಮೊದಲಾರ್ಧದ 33ನೇ ನಿಮಿಷದಲ್ಲಿ ನಿರ್ಣಾಯಕ ಗೋಲು ಗಳಿಸಿದರು. ಈ ಗೆಲುವಿನೊಂದಿಗೆ ಸ್ಪೇನ್ ತಂಡ 44 ವರ್ಷಗಳ ಪ್ರಶಸ್ತಿ ಬರವನ್ನು ನೀಗಿಸಿಕೊಂಡಿತು. ವಿಶ್ವಕಪ್ ಒಳಗೊಂಡಂತೆ ಪ್ರಮುಖ ಟೂರ್ನಿಗಳಲ್ಲಿ ಸ್ಪೇನ್ ತಂಡಕ್ಕೆ ಹಲವು ಬಾರಿ ಅದೃಷ್ಟ ಕೈಕೊಟ್ಟಿತ್ತು. ಆದರೆ ಈ ಬಾರಿ ಅವರು ಎಡವಲಿಲ್ಲ. ಮೈಕಲ್ ಬಲಾಕ್, ಲೂಕಾಸ್ ಪೊಡೊಲ್ಸ್ಕಿ ಮತ್ತು ಮಿರೊಸ್ಲಾವ್ ಕ್ಲೋಸ್ ಅವರಂತಹ ಘಟಾನುಘಟಿ ಆಟಗಾರರಿದ್ದ ಜರ್ಮನಿ ತಂಡವನ್ನು ಮಣಿಸುವ ಮೂಲಕ ಐಕರ್ ಕೆಸಿಲಾಸ್ ನೇತೃತ್ವದ ಸ್ಪೇನ್ ಜಗತ್ತನ್ನೇ ನಿಬ್ಬೆರಗಾಗಿಸಿತು. ಫೆರ್ನಾಂಡೊ ಟೊರೆಸ್ ಅವರು ತಂದಿತ್ತ ಏಕೈಕ ಗೋಲಿನ ನೆರವಿನಿಂದ ಸ್ಪೇನ್ ತಂಡ ಜರ್ಮನಿ ತಂಡವನ್ನು ಮಣಿಸಿ ಯೂರೊ

2008 ಫುಟ್ಬಾಲ್ ಚಾಂಪಿಯನ್ಶಿಪ್ನ ಕಿರೀಟ ಮುಡಿಗೇರಿಸಿಕೊಂಡಿತು.

2007: 1948ರ ಒಲಿಂಪಿಕ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಅಂತಾರಾಷ್ಟ್ರೀಯ ಫುಟ್ ಬಾಲ್ ಆಟಗಾರ ಬಿ.ಎನ್. ವಜ್ರವೇಲು (84) ಬೆಂಗಳೂರಿನಲ್ಲಿ ನಿಧನರಾದರು. 1948ರಲಲ್ಲಿ ಇಂಗ್ಲೆಂಡಿನಲ್ಲಿ ನಡೆದ ಒಲಿಂಪಿಕ್ನಲ್ಲಿ ಬರಿಗಾಲಿನಲ್ಲೇ ಆಡುವ ಮೂಲಕ ವಜ್ರವೇಲು ಜನರನ್ನು ನಿಬ್ಬೆರಗಾಗಿಸಿದ್ದರು. ಆಗ ಭಾರತ ನಾಲ್ಕನೇ ಸ್ಥಾನ ಪಡೆದಿತ್ತು. ವಜ್ರವೇಲು ಅವರನ್ನು ಅಭಿಮಾನಿಗಳು ಭಾರತದ 'ಸ್ಟಾರ್ಲಿ ಮ್ಯಾಥ್ಯೂಸ್' ಎಂದೇ ಕರೆಯುತ್ತಿದ್ದರು. ಒಂದು ಕಾಲಿನ ತೊಂದರೆ ಕಾರಣ ಫುಟ್ ಬಾಲ್ ನಿಂದ ನಿವೃತ್ತರಾದ ಅವರು ಬೆಂಗಳೂರಿನಲ್ಲಿ ಸಣ್ಣ ಕೈಗಾರಿಕೆಯೊಂದನ್ನು ಆರಂಭಿಸಿದ್ದರು.

2007: ಬೆಲ್ ಫಾಸ್ಟಿನಲ್ಲಿ ನಡೆದ ದಕ್ಷಿಣ ಆಫ್ರಿಕ ವಿರುದ್ಧದ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ 50 ರನ್ನುಗಳ ಗಡಿ ದಾಟಿದ ಕ್ಷಣದಲ್ಲಿ 15,000 ರನ್ನುಗಳನ್ನು ಸೇರಿಸಿದ ವಿಶ್ವದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಶ್ರೀಲಂಕೆಯ ಸನತ್ ಜಯಸೂರ್ಯ ಅವರು ಹೆಚ್ಚು ರನ್ನುಗಳನ್ನು ಪೇರಿಸಿದವರಲ್ಲಿ ಎರಡನೇ ಸ್ಥಾನದಲ್ಲಿದ್ದು ಅವರು ಸೇರಿಸಿರುವ ರನ್ನುಗಳ ಒಟ್ಟು ಮೊತ್ತ 12,063.

2007: ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ನೀಡಲಾಗುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ 'ನೃಪತುಂಗ' ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ದೇ. ಜವರೇಗೌಡ ಅವರನ್ನು ಆರಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಸ್ಥಾಪಿಸಲಾಗಿರುವ ಈ ಪ್ರಶಸ್ತಿಯ ಮೊತ್ತ ಐದು ಲಕ್ಷದ ಒಂದು ಸಾವಿರ ರೂಪಾಯಿಗಳು.

2006: ಗುಜರಾತಿನ ಕಾಂಡ್ಲಾ ಬಂದರಿನಲ್ಲಿ ಎರಡು ನೌಕೆಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮವಾಗಿ ಒಟ್ಟು 7 ಮಂದಿ ಅಸು ನೀಗಿದರು. ಕಾಲುವೆಯ ಹೊರಭಾಗದಲ್ಲಿ ಸಾಗುತ್ತಿದ್ದ ಜೆಶು ಶಿಪ್ಪಿಂಗ್ ಮಾಲಕತ್ವದ ಬಾರ್ಜ್ ಮತ್ತು ಬಂದರಿನಿಂದ ಹೊರಟಿದ್ದ ನೌಕೆ ಪರಸ್ಪರ ಡಿಕ್ಕಿಯಾಗಿ ಈ ದುರಂತ ಸಂಭವಿಸಿತು. ಬಾರ್ಜಿನಿಂದ ಸಮುದ್ರಕ್ಕೆ ಬಿದ್ದ 16 ಮಂದಿಯ ಪೈಕಿ 9 ಮಂದಿಯನ್ನು ರಕ್ಷಿಸಲಾಯಿತು, 7 ಮಂದಿ ನೀರಿನಲ್ಲಿ ಮುಳುಗಿದರು.

2006: ಜಮ್ಮು ಮತ್ತು ಕಾಶ್ಮೀರದ ಲಡಾಖ್ ನಿಂದ ಅರುಣಾಚಲ ಪ್ರದೇಶದ ದಿಫು ಲಾ ವರೆಗಿನ ಭಾರತ-ಚೀನಾ ಗಡಿಭಾಗದ ರಸ್ತೆ ಅಭಿವೃದ್ಧಿ ಪಡಿಸಲು ಭದ್ರತೆ ಮೇಲಿನ ಕೇಂದ್ರ ಸಂಪುಟ ಸಮಿತಿಯು ತೀರ್ಮಾನ ಕೈಗೊಂಡಿತು. 608 ಕಿ.ಮೀ ಹರಡಿಕೊಂಡಿರುವ ಭಾರತ-ಚೀನಾ ಗಡಿ ರಸ್ತೆಗಳ ಸುಧಾರಣೆ ಮತ್ತು ನಿರ್ಮಾಣಕ್ಕೆ ಒಟ್ಟು 912 ಕೋಟಿ ರೂ ಬೇಕಾಗುತ್ತದೆ. ಕಳೆದ 50 ವರ್ಷಗಳ ಹಿಂದೆ ಗಡಿ ರಸ್ತೆ ನಿರ್ಮಾಣ ಮಾಡಿದ್ದು, ಇಲ್ಲಿಯವರೆಗೆ ಯಾವುದೇ ಸುಧಾರಣೆ ಮಾಡದ್ದರಿಂದ ಇಂಡೋ-ಟಿಬೆಟ್ ಗಡಿ ಪೊಲೀಸರಿಗೆ ಹಾಗು ಸೇನೆಗೆ ಸಂಚರಿಸಲು ಸಾಕಷ್ಟು ತೊಂದರೆಯಾಗುತ್ತಿತ್ತು.

2006: ಪ್ರಖ್ಯಾತ ಶಿವನ ಯಾತ್ರಾಕ್ಷೇತ್ರ ಅಮರನಾಥದಲ್ಲಿ ಕೃತಕ ಹಿಮಲಿಂಗ ನಿರ್ಮಿಸಲಾಗಿದೆ ಎಂಬ ಆರೋಪಗಳ ಕುರಿತು ನ್ಯಾಯಾಂಗ ತನಿಖೆ ನಡೆಸಲು ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಎಸ್.ಕೆ. ಸಿನ್ಹಾ ಆದೇಶ ನೀಡಿದರು. ಮುಖ್ಯಮಂತ್ರಿ ಗುಲಾಮ್ ನಬಿ ಆಜಾದ್ ಅವರೊಂದಿಗೆ ಸಮಾಲೋಚಿಸಿ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಕೆ.ಕೆ.ಗುಪ್ತಾ ಅವರನ್ನು ತನಿಖಾ ಆಯೋಗದ ಮುಖ್ಯಸ್ಥರನ್ನಾಗಿ ನೇಮಕ ಮಾಡಿ ಅವರು ಆದೇಶ ಹೊರಡಿಸಿದರು.

2002: ದಕ್ಷಿಣ ಕೊರಿಯಾದ ವಿರುದ್ಧ ನಡೆದ ಪಂದ್ಯದಲ್ಲಿ ಟರ್ಕಿಯು ಹಕನ್ ಸುಕುರ್ ಅವರು ಫುಟ್ ಬಾಲ್ ವಿಶ್ವಕಪ್ ನಲ್ಲೇ ಅತ್ಯಂತ ಕಡಿಮೆ ಅವಧಿಯಲ್ಲಿ (11 ಸೆಕೆಂಡುಗಳಲ್ಲಿ) ಗೋಲ್ ಗಳಿಸಿ ಅತ್ಯಂತ ವೇಗದ ಗೋಲ್ ಪಡೆದರು.

1995: ಅಟ್ಲಾಂಟಿಸ್ ಷಟ್ಲ್ ನೌಕೆ ಮತ್ತು ರಷ್ಯದ ಮೀರ್ ಬಾಹ್ಯಾಕಾಶ ನಿಲ್ದಾಣ ಜೊತೆಗೂಡಿ ಭೂಮಿಗೆ ಸುತ್ತು ಹಾಕುವ ಅತ್ಯಂತ ದೊಡ್ಡದಾದ ಮಾನವ ನಿರ್ಮಿತ ಅಟ್ಟಣಿಗೆ ರೂಪಿಸಲು ಅಡಿಪಾಯ ಹಾಕಿದವು. ಕಮಾಂಡರ್ ರಾಬರ್ಟ್ ಗಿಬ್ಸನ್ ಮೀರ್ ನೊಳಕ್ಕೆ ತೇಲುತ್ತಾ ಸಾಗಿ ರಷ್ಯದ ಕಮಾಂಡರ್ ವ್ಲಾಡಿಮೀರ್ ಡೆಝ್ ರೊವ್ ಅವರ ಕೈ ಕುಲುಕಿದರು. 1975ರಲ್ಲಿ ಅಮೆರಿಕದ ಅಪೋಲ್ಲೋ ಮತ್ತು ಸೋವಿಯತ್ ಸೋಯುಜ್ ಸಿಬ್ಬಂದಿ ಕಕ್ಷೆಯಲ್ಲಿ ಜೊತೆಗೂಡಿದ ಬಳಿಕ ಅಂತಾರಾಷ್ಟ್ರೀಯ ಬಾಹ್ಯಾಕಾಶ ನೌಕೆಗಳಲ್ಲಿ ಪರಸ್ಪರ ಸಹಕರಿಸಿದ್ದು ಇದೇ ಪ್ರಥಮ.

1986: ರಿಚರ್ಡ್ ಬ್ರಾಂಡ್ಸನ್ ಅವರ ದೋಣಿ `ವರ್ಜಿನ್ ಅಟ್ಲಾಂಟಿಕ್ ಚಾಲೆಂಜರ್ 2' ಮೂರು ದಿನ ಎಂಟು ಗಂಟೆ 31 ನಿಮಿಷಗಳಲ್ಲಿ ಅಟ್ಲಾಂಟಿಕ್ ಸಾಗರವನ್ನು ದಾಟುವ ಮೂಲಕ ಅತಿ ವೇಗವಾಗಿ ಅಟ್ಲಾಂಟಿಕ್ ದಾಟಿದ ಹೆಗ್ಗಳಿಕೆಗೆ ಪಾತ್ರವಾಯಿತು.

1873: ಬಂಗಾಳಿ ಸಾಹಿತಿ ಮೈಕೆಲ್ ಮಧುಸೂದನ ದತ್ತ ಅವರು ತಮ್ಮ 49ನೇ ವಯಸ್ಸಿನಲ್ಲಿ ನಿಧನರಾದರು. ಕವಿ ಹಾಗೂ ನಾಟಕಕಾರರಾಗಿದ್ದ ಅವರು ಆಧುನಿಕ ಬಂಗಾಳಿ ಸಾಹಿತ್ಯದ ಮೊತ್ತ ಮೊದಲ ಮಹಾನ್ ಕವಿಯಾಗಿದ್ದರು.

1864: ಅಶುತೋಶ್ ಮುಖರ್ಜಿ (1864-1924) ಜನ್ಮದಿನ. ಭಾರತೀಯ ನ್ಯಾಯವಾದಿ ಹಾಗೂ ಶಿಕ್ಷಣ ತಜ್ಞರಾದ ಇವರು ಜನಸಂಘದ ಸ್ಥಾಪಕ ಶ್ಯಾಮ ಪ್ರಸಾದ ಮುಖರ್ಜಿ ಅವರ ತಂದೆ.

(ಸಂಗ್ರಹ: ನೆತ್ರಕೆರೆ ಉದಯಶಂಕರ)