ಹಿರಿಯ ಸಾಹಿತಿ ದೇಜಗೌ ವಿಧಿವಶ
ಮೈಸೂರು: ಕನ್ನಡದ ಹಿರಿಯ ಸಾಹಿತಿ, ಕುವೆಂಪು ಶಿಷ್ಯ ದೇ. ಜವರೇಗೌಡ (ದೇಜಗೌ) (98 ವರ್ಷ) ಅನಾರೋಗ್ಯದ ಕಾರಣ ಸೋಮವಾರ
30 ಮೇ 2016 ರ ಸಂಜೆ ಮೈಸೂರಿನಲ್ಲಿ ವಿಧಿವಶರಾದರು.
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ದೇಜಗೌ ಅವರನ್ನು ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಸೋಮವಾರ ಸಂಜೆ ಸುಮಾರು 7 ಗಂಟೆ ಸಮಯದಲ್ಲಿಕೊನೆಯುಸಿರು
ಎಳೆದರು ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.
1918ರ ಜುಲೈ 8ರಂದು ಈಗಿನ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚಕ್ಕರೆಯಲ್ಲಿ ದೇಜಗೌ ಜನಿಸಿದ್ದರು. ದೇಜಗೌ ಅವರು ಮೈಸೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ಸೇವೆ ಸಲ್ಲಿಸಿದ್ದರು. 135ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿರುವ ದೇಜಗೌ ಅವರು ಪದ್ಮಶ್ರೀ, ಕರ್ನಾಟಕ ರತ್ನ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಪಂಪ ಪ್ರಶಸ್ತಿ, ನಾಡೋಜ ಪ್ರಶಸ್ತಿ ಸೇರಿದಂತೆ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿದ್ದಾರೆ. ದೇಜಗೌ ಅವರು 1970ರಲ್ಲಿ ಬೆಂಗಳೂರಿನಲ್ಲಿ ನಡೆದ 47ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
No comments:
Post a Comment