ಪ್ರಿಯಾಂಕಾ ವಾದ್ರಾಗೆ ಡೆಂಗ್ಯೂ ಜ್ವರ; ಆಸ್ಪತ್ರೆಗೆ ದಾಖಲು
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಅವರು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ.
ನವದೆಹಲಿಯ ಗಂಗಾರಾಮ್ ಆಸ್ಪತ್ರೆಯಲ್ಲಿ ದಾಖಲಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ನವದೆಹಲಿಯ ಗಂಗಾರಾಮ್ ಆಸ್ಪತ್ರೆಯಲ್ಲಿ ದಾಖಲಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಿಯಾಂಕಾರಿಗೆ ಪ್ರಾರಂಭದಲ್ಲಿ ಜ್ವರ ಕಾಣಿಸಿಕೊಂಡಿತು. ಜ್ವರ ತೀವ್ರ ಗೊಂಡಾಗ ಪರೀಕ್ಷ
ನಡೆಸಲಾಯಿತು. ಆಗ ಅವರಿಗೆ ಡೆಂಗ್ಯೂ ಇರುವುದು ಪತ್ತೆಯಾಯಿತು. ಸದ್ಯ ಅವರು ಗುಣಮುಖ ರಾಗುತ್ತಿದ್ದಾರೆ ಎಂದು ಆಸ್ಪತ್ರೆಯ ಅಧ್ಯಕ್ಷ ಡಿ.ಎಸ್. ರಾಣಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರಸ್ತುತ ವರ್ಷ ದೆಹಲಿಯಲ್ಲಿ 325 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಡೆಂಗ್ಯೂ ಪ್ರಕರಣಗಳು ದುಪ್ಪಟ್ಟಾಗಿವೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.