ನಾನು ಮೆಚ್ಚಿದ ವಾಟ್ಸಪ್

Monday, October 29, 2018

ಅಯೋಧ್ಯಾ ಪ್ರಕರಣ: 2019 ಜನವರಿಗೆ ಮುಂದೂಡಿಕೆ

ಅಯೋಧ್ಯಾ ಪ್ರಕರಣ: 2019 ಜನವರಿಗೆ ಮುಂದೂಡಿಕೆ

ನವದೆಹಲಿ: ಅಯೋಧ್ಯೆಯಲ್ಲಿನ ರಾಮಜನ್ಮಭೂಮಿ-ಬಾಬರಿ ಮಸೀದಿ ವಿವಾದಿತ ಭೂಮಿಯನ್ನು ಮೂರು ಭಾಗಗಳಾಗಿ ವಿಭಜಿಸುವಂತೆ ಅಲಹಾಬಾದ್ ಹೈಕೋರ್ಟ್ 2010ರಲ್ಲಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಗಳ ಸಮೂಹದ ವಿಚಾರಣೆಯನ್ನು ಸುಪ್ರೀಂಕೋರ್ಟ್ 29 ಅಕ್ಟೊಬರ್ 2018 ಸೋಮವಾರ ಜನವರಿ 2019ಕ್ಕೆ ಮುಂದೂಡಿತು.

ಜನವರಿ ತಿಂಗಳಲ್ಲಿ ವಿಷಯವು ಸೂಕ್ತ ಪೀಠದ ಮುಂದೆ ವಿಚಾರಣೆಗೆ ಬರಲಿದೆ ಎಂದು ಸುಪ್ರೀಂಕೋರ್ಟ್ ಹೇಳಿತು. ವಿಚಾರಣೆಗಾಗಿ ಪೀಠ ರಚನೆ ವಿಚಾರವಾಗಿ ಸುಪ್ರೀಂಕೋರ್ಟ್ ಈದಿನ ಯಾವುದೇ ನಿರ್ಧಾರವನ್ನೂ ಕೈಗೊಳ್ಳಲಿಲ್ಲ.

27 ಸೆಪ್ಟೆಂಬರ್ 2018ರಂದು ಆಗಿನ ಭಾರತದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರ ಮತ್ತು ನ್ಯಾಯಮೂರ್ತಿಗಳಾದ ಅಶೋಕ ಭೂಷಣ್ ಮತ್ತು ಎಸ್. ಅಬ್ದುಲ್ ನಜೀರ್ ಅವರನ್ನು ಒಳಗೊಂಡ ಸುಪ್ರೀಂಕೋರ್ಟ್ ಪೀಠವು  ಮಸೀದಿಯು ಇಸ್ಲಾಮ್ ಧರ್ಮದ ಅವಿಭಾಜ್ಯ ಅಂಗವಲ್ಲ ಎಂಬುದಾಗಿ ಸುಪ್ರೀಂಕೋರ್ಟ್ ನೀಡಿದ್ದ 1994 ತೀರ್ಪನ್ನು ಪುನರ್ ಪರಿಶೀಲಿಸುವ ಸಲುವಾಗಿ ಸಂವಿಧಾನ ಪೀಠಕ್ಕೆ ಒಪ್ಪಿಸಲು ನಿರಾಕರಿಸಿತ್ತು.

2:1 ಬಹುಮತದ ತೀರ್ಪು ನೀಡಿದ್ದ ಸಿಜೆಐ ದೀಪಕ್ ಮಿಶ್ರ ನೇತೃತ್ವದ ಪೀಠವು ಬಾಬರಿ ಮಸೀದಿ- ರಾಮಜನ್ಮಭೂಮಿ ಭೂವಿವಾದದ ಸಿವಿಲ್ ಖಟ್ಲೆಯನ್ನು ಸಾಕ್ಷ್ಯಾಧಾರಗಳನ್ನು ಆಧರಿಸಿ ತೀರ್ಮಾನಿಸಬೇಕು. ಹಿಂದಿನ ತೀರ್ಪು  ಅದಕ್ಕೆ ಪ್ರಸ್ತುತವಾಗುವುದಿಲ್ಲ ಎಂದು ಸ್ಪಷ್ಟ ಪಡಿಸಿತ್ತು. ಇದರೊಂದಿಗೆ ಅಯೋಧ್ಯಾ ಪ್ರಕರಣದ ವಿಚಾರಣೆಗೆ ಇದ್ದ ಪ್ರಮುಖ ಅಡಚಣೆ ನಿವಾರಣೆಗೊಂಡಿತ್ತು.

ವಿವರಗಳಿಗೆ ಕೆಳಗಿನ ಚಿತ್ರ ಕ್ಲಿಕ್ಕಿಸಿ:

No comments:

Post a Comment