Tuesday, January 15, 2019

ಶೇ.10 ಆರ್ಥಿಕ ಮೀಸಲಾತಿ ಈ ವರ್ಷವೇ ಜಾರಿ

ಶೇ.10 ಆರ್ಥಿಕ ಮೀಸಲಾತಿ ಈ ವರ್ಷವೇ ಜಾರಿ
ನವದೆಹಲಿ: ಸಾಮಾನ್ಯ ವರ್ಗದ ಬಡವರಿಗೆ ಶೇಕಡಾ 10 ಮೀಸಲಾತಿಯನ್ನು 2019 ಶೈಕ್ಷಣಿಕ ವರ್ಷದಿಂದ ಜಾರಿಗೆ ತರಲಾಗುತ್ತಿದ್ದು, ರಾಷ್ಟ್ರಾದ್ಯಂ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವ ವಿದ್ಯಾಲಯಗಳಲ್ಲಿ ಸೀಟುಗಳ ಸಂಖ್ಯೆಯನ್ನು ಶೇಕಡಾ 25ರಷ್ಟು ಹೆಚ್ಚಿಸಲಾಗುವುದು ಎಂದು ಮಾನವ ಸಂಪನ್ಮೂಲ ಸಚಿವಾಲಯವು 2019 ಜನವರಿ 15 ಮಂಗಳವಾರ ಪ್ರಕಟಿಸಿತು.

ಸಚಿವಾಲಯ, ವಿಶ್ವ ವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ (ಎಐಸಿಟಿಇ) ಅಧಿಕಾರಿಗಳ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ ಜಾವಡೇಕರ್ ತಿಳಿಸಿದರು.

‘2019-20 ಶೈಕ್ಷಣಿಕ ಸಾಲಿನಿಂದಲೇ ಆರ್ಥಿಕ ಮೀಸಲಾತಿಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಪರಿಶಿಷ್ಟ  ಜಾತಿ, ಪರಿಶಿಷ್ಟ ವರ್ಗ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ನೀಡಲಾಗಿರುವ ಮೀಸಲಾತಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುವ ಸಲುವಾಗಿ ಸೀಟುಗಳ ಸಂಖ್ಯೆಯನ್ನು ಶೇಕಡಾ 25ರಷ್ಟು ಹೆಚ್ಚಿಸಲಾಗುವುದು.
ದೇಶಾದ್ಯಂತ ಸುಮಾರು 40,000 ಕಾಲೇಜುಗಳು ಮತ್ತು 900 ವಿಶ್ವವಿದ್ಯಾಲಯಗಳಲ್ಲಿ ಪೂರಕ ಮೀಸಲಾತಿ ಜಾರಿಗೆ ಬರಲಿದೆ  ಎಂದು ಸಚಿವರು ನುಡಿದರು.

ಹೆಚ್ಚಿನ ವಿವರಗಳಿಗೆ ಕೆಳಗಿನ ಚಿತ್ರ ಕ್ಲಿಕ್ ಮಾಡಿರಿ:


No comments:

Post a Comment