Thursday, October 24, 2019

ಕರ್ತಾರಪುರ ಕಾರಿಡಾರ್ ಕಾರ್ಯಗತ ಒಪ್ಪಂದಕ್ಕೆ ಭಾರತ- ಪಾಕ್ ಸಹಿ

ಕರ್ತಾರಪುರ ಕಾರಿಡಾರ್ ಕಾರ್ಯಗತ
ಒಪ್ಪಂದಕ್ಕೆ
ಭಾರತ- ಪಾಕ್ ಸಹಿ

ನವದೆಹಲಿ: ಸಿಖ್ ಪಂಥದ ಸಂಸ್ಥಾಪಕ ಗುರುನಾನಕ್  ದೇವ್ ಅವರು ತಮ್ಮ ಜೀವನದ ಅಂತಿಮ ವರ್ಷಗಳನ್ನು ಕಳೆದ ಸ್ಥಳದಲ್ಲಿ ನಿರ್ಮಿಸಲಾದ ಗುರುದ್ವಾರವನ್ನು ಸಂದರ್ಶನಕ್ಕೆ  ಭಾರತೀಯ ಯಾತ್ರಾರ್ಥಿಗಳಿಗೆ ಅವಕಾಶ ನೀಡುವ ಕರ್ತಾರಪುರ ಕಾರಿಡಾರ್ ಕಾರ್ಯಗತ ಒಪ್ಪಂದಕ್ಕೆ  ಭಾರತ ಮತ್ತು ಪಾಕಿಸ್ತಾನ 2019 ಅಕ್ಟೋಬರ್ 24ರ ಗುರುವಾರ ಗಡಿಯಲ್ಲಿನ ‘ಶೂನ್ಯ ರೇಖೆ’ ಯಲ್ಲಿ ಸಹಿ ಮಾಡಿದವು. ಉಭಯ ರಾಷ್ಟ್ರಗಳ  ಅಧಿಕಾರಿಗಳು ಒಪ್ಪಂದಕ್ಕೆ ಸಹಿ ಹಾಕಿದರು.

ಒಪ್ಪಂದಕ್ಕೆ ಸಹಿ ಹಾಕಲು ಅಕ್ಟೋಬರ್ ೨೩ ರ ದಿನಾಂಕವನ್ನು ಭಾರತವು ಸೋಮವಾರ ಪ್ರಸ್ತಾಪಿಸಿತ್ತು. ಆದರೆ ಪಾಕಿಸ್ತಾನದ ಕಡೆಯಆಡಳಿತಾತ್ಮಕ ಸಮಸ್ಯೆಗಳ’ ಕಾರಣ ಈ ದಿನಾಂಕವನ್ನು ಒಂದು ದಿನ ಮುಂದೂಡಬೇಕಾಯಿತು ಎಂದು ಅಧಿಕಾರಿಗಳು ತಿಳಿಸಿದರು. ಪಾಕಿಸ್ತಾನ ನಿಯೋಗದ ನೇತೃತ್ವವನ್ನು ವಿದೇಶಾಂಗ ಕಚೇರಿ ವಕ್ತಾರ ಮೊಹಮ್ಮದ್ ಫೈಸಲ್ ವಹಿಸಿದ್ದರು.

ಕರ್ತಾರಪುರ ಸಾಹಿಬ್  ತಲುಪಲು ಕರ್ತಾರಪುರ ಕಾರಿಡಾರ್ ತೆರೆಯುವ ಬಗೆಗಿನ ಐತಿಹಾಸಿಕ ಪಾಕಿಸ್ತಾನ- ಭಾರತ ಒಪ್ಪಂದಕ್ಕೆ ಸಹಿ ಹಾಕಲು  ತೆರಳುತ್ತಿರುವೆ.  ನವೆಂಬರ್ ರಂದು ಪಾಕಿಸ್ತಾನದ ನರೋವಾಲದಲ್ಲಿ  ಕರ್ತಾರಪುರ ಸಾಹಿಬ್ ಕಾರಿಡಾರನ್ನು ಪ್ರಧಾನಿ ಇಮ್ರಾನ್ ಖಾನ್ ಉದ್ಘಾಟಿಸಲಿದ್ದಾರೆಎಂದು ಶೂನ್ಯ ರೇಖೆಯತ್ತ ಹೊರಡುವ ಮುನ್ನ ಫೈಸಲ್ ಟ್ವೀಟ್ ಮಾಡಿದ್ದರು.
ಗುರುನಾನಕ್ ದೇವ್ ಅವರ ೫೫೦ ನೇ ಜನ್ಮದಿನಾಚರಣೆಯ ಮುನ್ನ ಕಾರಿಡಾರ್  ಕಾರ್ಯಗತಕ್ಕಾಗಿ ಭಾರತ ಮತ್ತು ಪಾಕಿಸ್ತಾನ  ಉನ್ನತ ಮಟ್ಟದ ಮಾತುಕತೆ ನಡೆಸಿವೆ. ಕಾರಿಡಾರ್ ಭಾರತೀಯ ಯಾತ್ರಿಕರ ವೀಸಾ ಮುಕ್ತ ಸಂಚಾರಕ್ಕೆ ಅನುಕೂಲವಾಗಲಿದೆ.

೧೫೨೨
ರಲ್ಲಿ ಸಿಖ್ ಪಂಥದ  ಸಂಸ್ಥಾಪಕ ಗುರುನಾನಕ್ ದೇವ್ ಅವರು ಸ್ಥಾಪಿಸಿದ ಕರ್ತಾರಪುರ ಸಾಹಿಬ್ಗೆ ಭೇಟಿ ನೀಡಲು ಈ ಕಾರಿಡಾರಿನಿಂದಾಗಿ ಭಾರತೀಯ  ಯಾತ್ರಿಕರು ಅನುಮತಿ ಪಡೆದರೆ ಸಾಕಾಗುತ್ತದೆ.

No comments:

Post a Comment