ನಾನು ಮೆಚ್ಚಿದ ವಾಟ್ಸಪ್

Monday, October 14, 2019

ಇಂದಿನ ಇತಿಹಾಸ History Today ಅಕ್ಟೋಬರ್ 14


ಸ್ಟಾಕ್ಹೋಮ್: ಜಾಗತಿಕ ಬಡತನ ನಿವಾರಣೆ ಕುರಿತ ಅಧ್ಯಯನಕ್ಕಾಗಿ ಭಾರತೀಯ ಮೂಲದ
ಅಮೆರಿಕನ್ ಅರ್ಥ ಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ, ಪತ್ನಿ ಎಸ್ತರ್ ಡ್ಯುಫ್ಲೋ ಹಾಗೂ ಮೈಕೆಲ್ ಕ್ರೇಮರ್ ಸೇರಿದಂತೆ ಮೂವರು 2019ರ ಸಾಲಿನ  ಪ್ರತಿಷ್ಠಿತ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಗೆ ಭಾಜನರಾದರು. ಜಾಗತಿಕ ಬಡತನವನ್ನು ನಿವಾರಿಸುವ ಪ್ರಾಯೋಗಿಕ ವಿಧಾನಕ್ಕಾಗಿ ಇವರಿಗೆ ನೊಬೆಲ್ ಪ್ರಶಸ್ತಿ ನೀಡಲಾಗಿದೆ ಪ್ರಶಸ್ತಿ ಸಮಿತಿಯು 2019ರ ಅಕ್ಟೋಬರ್ 14 ಸೋಮವಾರ ಪ್ರಕಟಿಸಿತು. ವರ್ಷದ ಪ್ರಶಸ್ತಿ ವಿಜೇತರು ನಡೆಸಿದ ಸಂಶೋಧನೆಯು ಜಾಗತಿಕ ಬಡತನದ ವಿರುದ್ಧ ಹೋರಾಡುವ ನಮ್ಮ ಸಾಮರ್ಥ್ಯವನ್ನು ಗಣನೀಯವಾಗಿ ಸುಧಾರಿಸಿದೆ. ಕೇವಲ ಎರಡು ದಶಕಗಳಲ್ಲಿ, ಅವರ ಹೊಸ ಪ್ರಯೋಗ ಆಧಾರಿತ ವಿಧಾನವು ಅಭಿವೃದ್ಧಿ ಅರ್ಥಶಾಸ್ತ್ರವನ್ನೇ ಮಾರ್ಪಡಿಸಿದೆ, ಇದು ಈಗ ಅಭಿವೃದ್ಧಿ ಹೊಂದುತ್ತಿರುವ ಸಂಶೋಧನಾ ಕ್ಷೇತ್ರವಾಗಿದೆ,” ಎಂದು ಸಂಬಂಧ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ನೊಬೆಲ್ ಸಮಿತಿ ಅಭಿಪ್ರಾಯ ವ್ಯಕ್ತಪಡಿಸಿತು. ಅಭಿಜಿತ್ ವಿನಾಯಕ ಬ್ಯಾನರ್ಜಿ ಮೂಲತಃ ಕೋಲ್ಕತಾದವರು. ಅವರು ಪ್ರಸ್ತುತ ಮೆಸ್ಯಾಚುಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ (ಎಂಐಟಿ) ಅರ್ಥಶಾಸ್ತ್ರದ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಬ್ಯಾನರ್ಜಿ ಅವರು 2003ರಲ್ಲಿ ಅಬ್ದುಲ್ ಲತೀಫ್ ಜಮೀಲ್ ಪವರ್ಟಿ ಆ್ಯಕ್ಷನ್ ಲ್ಯಾಬನ್ನು  ಪತ್ನಿ, ಅರ್ಥಶಾಸ್ತ್ರಜ್ಞೆ ಎಸ್ತರ್ ಡ್ಯುಫ್ಲೋ  ಹಾಗೂ ಸೆಂಧಿಲ್ ಮುಲ್ಲಯ್ಯನಾಥನ್ ಅವರ ಜೊತೆಗೆ ಸ್ಥಾಪನೆ ಮಾಡಿದ್ದರು. ಬ್ಯಾನರ್ಜಿ ಅವರು ಇಂದಿಗೂ ಇದರ ನಿರ್ದೇಶಕರಾಗಿದ್ದಾರೆ. (ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ)


2019: ನವದೆಹಲಿ:  ಎಸ್ತರ್  ಡ್ಯುಫ್ಲೋ ಮತ್ತು ಮೈಕೆಲ್ ಕ್ರೇಮರ್ ಜೊತೆಗೆ ೨೦೧೯ರ ಸಾಲಿನ ಅರ್ಥಶಾಸ್ತ್ರ ನೊಬೆಲ್ ಪಾರಿತೋಷಕಕ್ಕೆ ಭಾಜನರಾಗಿರುವ ಭಾರತೀಯ ಮೂಲಕ ಅಮೆರಿಕನ್ ಆರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು  2019 ಅಕ್ಟೋಬರ್ 14ರ ಸೋಮವಾರ ಅಭಿನಂದಿಸಿದರು. ‘ಅಲ್ಫ್ರೆಡ್ ನೊಬೆಲ್ ಅವರ ನೆನಪಿಗಾಗಿ ಅರ್ಥಶಾಸ್ತ್ರ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಕೊಡಲಾಗುವ ೨೦೧೯ರ ಸ್ವೆರ್ಗೆಸ್ ರಿಕ್ಸಬ್ಯಾಂಕ್ ಪ್ರಶಸ್ತಿಗೆ ಭಾಜನರಾದುದಕ್ಕಾಗಿ ಅಭಿಜಿತ್ ಬ್ಯಾನರ್ಜಿ ಅವರಿಗೆ ಅಭಿನಂದನೆಗಳು. ಬಡತನ ನಿವಾರಣೆಯ ಕ್ಷೇತ್ರಕ್ಕೆ ಅವರು ಗಮನಾರ್ಹ ಕೊಡುಗೆ ನೀಡಿದ್ದಾರೆಎಂದು ಮೋದಿ ಟ್ವೀಟ್ ಮಾಡಿದರುರಾಯಲ್ ಸ್ವೀಡಿಶ್ ಅಕಾಡೆಮಿಯ ಅತ್ಯುನ್ನತ ಪ್ರಶಸ್ತಿಗೆ ಭಾಜನರಾದ ಎಸ್ತರ್ ಡ್ಯುಫ್ಲೋ ಮತ್ತು ಮೈಕೆಲ್ ಕ್ರೇಮರ್ ಅವರನ್ನೂ ಪ್ರಧಾನಿ ಅಭಿನಂದಿಸಿದರು. ಪ್ರಧಾನಿಯವರ ಹೊರತಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರೂ ಅಭಿಜಿತ್ ಬ್ಯಾನರ್ಜಿ, ಎಸ್ತರ್ ಡ್ಯೂಫ್ಲೋ ಮತ್ತು ಮೈಕೆಲ್ ಕ್ರೇಮರ್ ಅವರನ್ನು ಅಭಿನಂದಿಸಿ ಟ್ವೀಟ್ ಮಾಡಿದರು. (ವಿವರಗಳಿಗೆ ಇಲ್ಲಿ ಕ್ಲಿಕ್ಮಾಡಿರಿ)

2019: ನವದೆಹಲಿ:  ಆತ್ಮಹತ್ಯಾ ಬಾಂಬರ್ಗಳು ಸೇರಿದಂತೆ ೪೦-೫೦ ಮಂದಿ ಕಟ್ಟಾ ಭಯೋತ್ಪಾದಕರಿಗೆ ಪಾಕಿಸ್ತಾನದ ಬಾಲಾಕೋಟ್ನಲ್ಲಿರುವ ಜೈಶ್--ಮೊಹಮ್ಮದ್ (ಜೆಇಎಂ) ಭಯೋತ್ಪಾದಕ ಶಿಬಿರದಲ್ಲಿ ತರಬೇತಿ ನೀಡಲಾಗುತ್ತಿದೆ ಎಂದು  2019ಅಕ್ಟೋಬರ್ 14ರ ಸೋಮವಾರ ವರದಿಯಾಯಿತು.  ಇದೇ ಭಯೋತ್ಪಾದಕ ಶಿಬಿರದ ಮೇಲೆ ಎಂಟು ತಿಂಗಳ  ಹಿಂದೆ  ಭಾರತೀಯ ವಾಯುಪಡೆ ವಿಮಾನಗಳು ವೈಮಾನಿಕ  ದಾಳಿ  ನಡೆಸಿದ್ದವು.  ಸುಮಾರು ೪೫-೫೦ ಆತ್ಮಹತ್ಯಾ ಬಾಂಬರ್ಗಳಿಗೆ ಪಾಕಿಸ್ತಾನದ ಬಾಲಾಕೋಟ್ ಜೈಶ್--ಮೊಹಮ್ಮದ್ ಭಯೋತ್ಪಾದಕ  ಶಿಬಿರದಲ್ಲಿ ತರಬೇತಿ ನೀಡಲಾಗುತ್ತಿದೆಎಂದು ಉನ್ನತ ಸರ್ಕಾರಿ ಮೂಲಗಳು  ತಿಳಿಸಿದವು. ಬಾಲಾಕೋಟ್ ಜೈಶ್--ಮೊಹಮ್ಮದ್ ತರಬೇತಿ ಶಿಬಿರದ ಚಟುವಟಿಕೆಗಳ ಮೇಲೆ ನಾವು ಕಣ್ಣಿಟ್ಟಿದ್ದೇವೆ ಮತ್ತು ಅಲ್ಲಿನ ಬೆಳವಣಿಗೆಗಳ ಬಗ್ಗೆ ಅರಿತುಕೊಳ್ಳ್ಳುವುದಕ್ಕಾಗಿ ತಾಂತ್ರಿಕ ಕಣ್ಗಾವಲನ್ನು ಹೆಚ್ಚಿಸಿದ್ದೇವೆ ಎಂದು ಮೂಲಗಳು ಹೇಳಿದವು. ಉಗ್ರ ಶಿಬಿರದಲ್ಲಿ ತರಬೇತಿ ಪಡೆದ ಕೆಲವು ಭಯೋತ್ಪಾದಕರನ್ನು ಭಾರತೀಯ ಭದ್ರತಾ ನೆಲೆಗಳ ಮೇಲೆ ಭಯೋತ್ಪಾದಕ ದಾಳಿ ನಡೆಸುವ ಸಲುವಾಗಿ ಕಾಶ್ಮೀರಕ್ಕೆ ಕಳುಹಿಸಲಾಗಿದೆ ಎಂದೂ ಮೂಲಗಳು ತಿಳಿಸಿದವು. ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಭಾರತವು ರದ್ದು ಪಡಿಸಿದ ಬಳಿಕ ಕಣಿವೆಯಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ ಎಂಬುದಾಗಿ ಅಂತಾರಾಷ್ಟ್ರೀಯ ಸಮುದಾಯಕ್ಕೆ ಮನವರಿಕೆ ಮಾಡಿಸಿಕೊಡುವ ಗುರಿ ಇಟ್ಟುಕೊಂಡು ಕಾಶ್ಮೀರದಲ್ಲಿ ಅಶಾಂತಿ ಸೃಷ್ಟಿಸುವುದು ಪಾಕಿಸ್ತಾನದ ಯೋಜನೆಯಾಗಿದೆ ಎಂದು ಮೂಲಗಳು ಹೇಳಿದವು. (ವಿವರಗಳಿಗೆ ಇಲ್ಲಿ ಕ್ಲಿಕ್ಮಾಡಿರಿ)
2019: ಶ್ರೀನಗರ:  ಎಲ್ಲೆಂದರಲ್ಲಿ ರಿಂಗಣಿಸುತ್ತಿದ್ದ ಮೊಬೈಲ್ ಫೋನುಗಳು, ಪರಸ್ಪರಮುಬಾರಕ್ವಿನಿಮಯ, ಉಭಯು ಕುಶಲೋಪರಿಯ ಖುಷಿ- ಇದು ಜಮ್ಮು ಮತ್ತು ಕಾಶ್ಮೀರದಲಿ  2019 ಅಕ್ಟೋಬರ್ 14ರ ಸೋಮವಾರ ಕಂಡು ಬಂದ ಖುಷಿಯ ಅಲೆಗಳ ದೃಶ್ಯ..  ಜಮ್ಮು  ಮತ್ತು ಕಾಶ್ಮೀರದಲ್ಲಿ ಸಂಪೂರ್ಣ ಸಂಪರ್ಕ ನಿರ್ಬಂಧ ಹೇರಿಕೆಯ ಸುಮಾರು ೭೦ ದಿನಗಳ ಬಳಿಕ ಸೋಮವಾರ ಪೋಸ್ಟ್ ಪೇಯ್ಡ್ ಮೊಬೈಲ್ ಫೋನುಗಳ ಸಂಪರ್ಕ ಪುನಾರಂಭಗೊಂಡಿದ್ದು ಕಾಶ್ಮೀರಿಗಳು ಖುಷಿಯೊಂದಿಗೆ ತಮ್ಮ ಆಪ್ರರೊಂದಿಗೆ ಮೊಬೈಲ್ ಮಾತುಕತೆ ನಡೆಸಿದ್ದು ಕಂಡು ಬಂತು. ಸುಮಾರು ೭೦ ದಿನಗಳ ಸಂಪೂರ್ಣ ಸಂಪರ್ಕ ನಿರ್ಬಂಧದ ಬಳಿಕ ಮುಜಮ್ಮಿಲ್ ಅಹ್ಮದ್ಗೆ ಬಂದ ಮೊತ್ತ ಮೊದಲ ಕರೆ- ಆತನ ಅಜ್ಜಿಯದ್ದು. ಕಾನೂನು ವಿದ್ಯಾರ್ಥಿಯಾದ ಶಾ ತನ್ನ ಹೆತ್ತವರ ಜೊತೆ ನೆರೆಹೊರೆಯವರ ಸ್ಥಿರ ದೂರವಾಣಿ ಬಳಸಿ ಯಾವಾಗಾದರೂ ಒಮ್ಮೆ ಶೋಪಿಯಾನ್ ಜಿಲ್ಲೆಯ ಗೆಹೆಂಡ್ನಲ್ಲಿದ್ದ ತಮ್ಮ ಹೆತ್ತವರ ಜೊತೆ ಮಾತನಾಡುತ್ತಿದ್ದರು. ಆದರೆ ಅವರಿಗೆ ಅಜ್ಜಿಯ ಸಂಪರ್ಕ ಸಾಧ್ಯವಾಗುತ್ತಿರಲಿಲ್ಲ. ‘ಸೋಮವಾರದಿಂದ ಫೋನ್ ಲೈನುಗಳು ಪುನಃಸ್ಥಾಪನೆಗೊಳ್ಳಲಿವೆ ಎಂಬುದಾಗಿ ಹೇಳಿದ್ದರಿಂದ ನಾನು ರಾತ್ರಿ ೧೨ ಗಂಟೆ ಆಗುವುದನ್ನೇ ಕಾಯುತ್ತಿದ್ದೆ. ನನಗೆ ಯಾವಾಗಲೂ ನನ್ನ ಹೆತ್ತವರ ಆರೋಗ್ಯದ ಬಗ್ಗೆ ಚಿಂತೆಯಿತ್ತು. ಸ್ಥಿರ ದೂರವಾಣಿಯಲ್ಲಿ ಯಾವಾಗಾದರೂ ಒಮ್ಮೆ ಸಂಪರ್ಕ ಸಾಧ್ಯವಾಗುತ್ತಿದ್ದರೂ, ಹಲವಾರು ಅಡಚಣೆಗಳ ಕಾರಣ ಅದು ಅಷ್ಟೊಂದು ಉತ್ತಮ ಸಂವಹನ ಮಾಧ್ಯಮವಾಗಿರಲಿಲ್ಲ. ನಾನು ಹೆತ್ತವರ ಜೊತೆಗೆ ಕೆಲವು ಬಾರಿ ಮಾತನಾಡಿದ್ದರೂ, ಸ್ಥಿರ ದೂರವಾಣಿ ಇದ್ದ ಮನೆಗೆ ಬರುವುದು ಅಜ್ಜಿಗೆ ಕಷ್ಟವಾದ ಕಾರಣ ಅವರ ಜೊತೆಗೆ ಮಾತನಾಡಲು ಸಾಧ್ಯವಾಗಿರಲಿಲ್ಲ. ಈದಿನ ಅಜ್ಜಿಯ ಸ್ವರ ಕೇಳಿದಾಗ ನನಗೆ ಅತ್ಯಂತ ಖುಷಿಯಾಯಿತುಎಂದು ಶಾ ತಮ್ಮ ಸಂತಸ ಹಂಚಿಕೊಂಡರು.  (ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ)

No comments:

Post a Comment