ನಾನು ಮೆಚ್ಚಿದ ವಾಟ್ಸಪ್

Wednesday, October 23, 2019

ಇಂದಿನ ಇತಿಹಾಸ History Today ಅಕ್ಟೋಬರ್ 23

2019: ನವದೆಹಲಿ: ರಾಷ್ಟ್ರದ ರಾಜಧಾನಿ ದೆಹಲಿಯ ಅನಧಿಕೃತ ಕಾಲೋನಿಗಳಲ್ಲಿ ವಾಸವಾಗಿರುವ ೪೦ ಲಕ್ಷ ಮಂದಿಗೆ ಕಾಲೋನಿಗಳ ತಮ್ಮ ಮನೆಗಳ ಮೇಲಿನ ಮಾಲೀಕತ್ವ ಹಕ್ಕು ಒದಗಿಸಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ  2019 ಅಕ್ಟೋಬರ್ 23 ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ನಿರ್ಧರಿಸಿತು. ಅನಧಿಕೃತ ಕಾಲೋನಿಗಳಲ್ಲಿನ ಮನೆಗಳು ಸರ್ಕಾರಿ ಭೂಮಿಯಲ್ಲಿ ನಿರ್ಮಿಸಲ್ಪಟ್ಟಿರಲಿ ಅಥವಾ ಖಾಸಗಿ ಭೂಮಿಯಲ್ಲಿ ನಿರ್ಮಿಸಲ್ಪಟ್ಟಿರಲಿ ಅವುಗಳ ಮೇಲಿನ ಮಾಲೀಕತ್ವ ಹಕ್ಕು ಅಂತಹ ಮನೆಗಳಲ್ಲಿ ವಾಸವಾಗಿರುವವರಿಗೆ ಲಭಿಸಲಿದೆ ಎಂದು ನಗರಾಭಿವೃದ್ಧಿ ಸಚಿವ ಹರದೀಪ್ ಸಿಂಗ್ ಪುರಿ ಹೇಳಿದರು. ಸೈನಿಕ್ ಫಾಮ್ಸ್, ಮಹೇಂದ್ರು ಎನ್ ಕ್ಲೇವ್ ಮತ್ತು ಅನಂತರಾಮ್ ಡೈರಿಗಳಂತಹ ೬೭ ಶ್ರೀಮಂತ ಆದರೆ ಅನಧಿಕೃತ ಕಾಲೋನಿಗಳು ಮಾತ್ರ ಸರ್ಕಾರದ ನಿರ್ಣಯಕ್ಕೆ ಅಪವಾದವಾಗಿವೆ. ಅಂದರೆ ಕಾಲೋನಿಗಳಲ್ಲಿ ವಾಸವಾಗಿರುವವರಿಗೆ ಮಾಲೀಕತ್ವ ಹಕ್ಕು ಲಭಿಸುವುದಿಲ್ಲ. ‘ಬುಧವಾರದ ಸಚಿವ ಸಂಪುಟ ಸಭೆಗೆ ಅತ್ಯಂತ ದೊಡ್ಡ ನಿರ್ಣಯ ಇದು. ಕಾಲೋನಿಗಳಲ್ಲಿ ವಾಸವಾಗಿರುವವರಿಗೆ ಮಾಲೀಕತ್ವದ ಹಕ್ಕು ನೀಡುವ ನಿರ್ಣಯ ಚಾರಿತ್ರಿಕಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ ಜಾವಡೇಕರ್ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಬಣ್ಣಿಸಿದರು. ನಗರಾಭಿವೃದ್ಧಿ ಸಚಿವ ಹರದೀಪ್ ಸಿಂಗ್ ಪುರಿ ಅವರು ನಿರ್ಣಯವನ್ನುದೂರ ದೃಷ್ಟಿಯ ಕ್ರಾಂತಿಕಾರಿ ನಿರ್ಣಯಎಂದು ಹೇಳಿದರು. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕೂಡಾ ವರ್ಷ ಜುಲೈ ತಿಂಗಳಲ್ಲಿ ಕಾಲೋನಿಗಳಲ್ಲಿ  ವಾಸವಾಗಿರುವ ಜನರಿಗೆ ಮಾಲೀಕತ್ವ ಹಕ್ಕು ನೀಡುವ ಪ್ರಸ್ತಾವವನ್ನು ಪ್ರಕಟಿಸಿದ್ದರು. ಆಮ್ ಆದ್ಮಿ ಪಕ್ಷಕ್ಕೆ ವಿಚಾರದಲ್ಲಿ  ಕೇಂದ್ರ ಸರ್ಕಾರದ ಸಮ್ಮತಿ ಲಭಿಸಿದೆ ಎಂದು ಕೇಜ್ರಿವಾಲ್ ಅವರು ಆಗ ಪ್ರಕಟಿಸಿದ್ದರು.  (ವಿವರಗಳಿಗೆಇಲ್ಲಿ ಕ್ಲಿಕ್  ಮಾಡಿರಿ)

2019: ಚೆನ್ನೈ: ಮಹಾಬಲಿಪುರಂನಲ್ಲಿ ಇತ್ತೀಚೆಗೆ ನಡೆದ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನೀ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರ ಅನೌಪಚಾರಿಕ ಶೃಂಗಕ್ಕೆ ಸಂಬಂಧಿಸಿದಂತೆ ಫ್ಲೆಕ್ಸ್ ಬೋರ್ಡ್ಗಳನ್ನು ಹಾಕಲು ತಾನು ಅನುಮತಿ ನೀಡಿದ್ದುದಾಗಿ ಮಾಧ್ಯಮಗಳಲ್ಲಿ ಬಂದ ವರದಿಯನ್ನು ಮದ್ರಾಸ್ ಹೈಕೋರ್ಟ್ 2019 ಅಕ್ಟೋಬರ್ 23 ಬುಧವಾರ ನಿರಾಕರಿಸಿತು ಮತ್ತು ತಪ್ಪು ವರದಿಗಳಿಗಾಗಿ ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡಿತು. ‘ನಾವು ಫ್ಲೆಕ್ಸ್ ಬೋರ್ಡ್ಗಳನ್ನು ಹಾಕಲು ಅನುಮತಿ ಕೊಟ್ಟಿರಲಿಲ್ಲ. ನಿಯಮಾವಳಿಗಳನ್ನು ಪಾಲಿಸಿ ಎಂದಷ್ಟೇ ನಾವು ಹೇಳಿದ್ದೆವು. ಮಾಧ್ಯಮವು ಆದೇಶವನ್ನು ಸಮರ್ಪಕವಾಗಿ ಓದದೇ ಸಾರ್ವಜನಿಕರಿಗೆ ತಪ್ಪು ಸಂದೇಶವನ್ನು ರವಾನಿಸಿತು. ಮುಂದಿನಬಾರಿ, ಕೋರ್ಟ್ ಆದೇಶಗಳನ್ನು ತಪ್ಪಾಗಿ ವರದಿ ಮಾಡಿದ್ದು ನಮ್ಮ ಗಮನಕ್ಕೆ ಬಂದಲ್ಲಿ ನ್ಯಾಯಾಂಗ ನಿಂದನೆಯ ಕಷ್ಟಕ್ಕೆ ಗುರಿಯಾಗಬೇಕಾದೀತುಎಂದು ನ್ಯಾಯಾಲಯ ಎಚ್ಚರಿಕೆ ನೀಡಿತು. ೬೦ಕಿಮೀ ವ್ಯಾಪ್ತಿಯಲ್ಲಿ ಫ್ಲೆಕ್ಸ್ ಬೋರ್ಡ್ಗಳನ್ನು ಹಾಕಲು ತಿಂಗಳ ಆದಿಯಲ್ಲಿ ಹಸಿರು ನಿಶಾನೆ ತೋರಿದ್ದ ನ್ಯಾಯಮೂರ್ತಿ ಎಂ. ಸತ್ಯನಾರಾಯಣನ್ ಮತ್ತು ನ್ಯಾಯಮೂರ್ತಿ ಎನ್ ಶೇಷಸಾಯಿ ಅವರನ್ನು ಒಳಗೊಂಡ ವಿಭಾಗೀಯ ಪೀಠವು ಫ್ಲೆಕ್ಸ್ ಬೋರ್ಡ್ಗಳನ್ನು ಹಾಕದಂತೆ ತಾನು ನಿರ್ಬಧಿಸಿರುವುದು ಸರ್ಕಾರವನ್ನಲ್ಲ, ಕೇವಲ ರಾಜಕೀಯ ಪಕ್ಷಗಳನ್ನಾದ್ದರಿಂದ ನಿಜವಾಗಿ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಹೇಳಿತ್ತು. ಸರ್ಕಾರದ ಮನವಿಯನ್ನು ವಿರೋಧಿಸಿದ್ದ ಡಿಎಂಕೆಯು ಆಡಳಿತಾರೂಢ ಎಐಎಡಿಎಂಕೆಯುಹಲವಾರು ಬ್ಯಾನರುಗಳನ್ನು ಹಾಕುವರಹಸ್ಯ ಕಾರ್ಯಸೂಚಿ ಇಟ್ಟುಕೊಂಡಿರುವಂತಿದೆ ಎಂದು ಆಪಾದಿಸಿತ್ತು. ‘ಬ್ಯಾನರ್ ಸಂಸ್ಕೃತಿಯನ್ನು ನ್ಯಾಯಾಲಯವು ನಿಷೇಧಿಸಿದ ಬಳಿಕ, ರಾಜ್ಯಾದ್ಯಂತ ಬ್ಯಾನರುಗಳನ್ನು ಹಾಕಲು ಅಧಿಕಾರಿಗಳು ಅನುಮತಿ ನೀಡುತ್ತಿಲ್ಲ ಎಂದು ಸರ್ಕಾರದ ಪರವಾಗಿ ಮುನಿಸಿಪಲ್ ಆಡಳಿತದ ಕಮೀಷನರ್  ಸಲ್ಲಿಸಿದ್ದ ಅರ್ಜಿಯು ಹೇಳಿತ್ತುಕಳೆದ ತಿಂಗಳು ೨೩ರ ಹರೆಯದ ಸಾಫ್ಟ್ವೇರ್ ಎಂಜಿನಿಯರ್ ಒಬ್ಬರು ಸಾವನ್ನಪ್ಪಿದ ಬಳಿಕ ನ್ಯಾಯಾಲಯವು ಬ್ಯಾನರ್ ಸಂಸ್ಕೃತಿ ವಿರುದ್ಧ ಹರಿಹಾಯ್ದಿತ್ತು. (ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿರಿ)

2019: ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ (ಇಡಿ) ಒಂದೂವರೆ ತಿಂಗಳ ಹಿಂದೆ ಬಂಧನಕ್ಕೆ ಒಳಗಾಗಿ ತಿಹಾರ್ ಸೆರೆಮನೆ ಸೇರಿದ್ದ ಕರ್ನಾಟಕದ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರಿಗೆ  ದೆಹಲಿ ಹೈಕೋರ್ಟ್ 2019 ಅಕ್ಟೋಬರ್ 23 ಬುಧವಾರ ಶರತ್ತಿನ ಜಾಮೀನು ಮಂಜೂರು ಮಾಡಿತು. ಇದರೊಂದಿಗೆ ಬಂಧನಕ್ಕೆ ಒಳಗಾದ ೪೮ ದಿನಗಳ ಬಳಿಕ ೫೭ರ ಹರೆಯದ ಕಾಂಗ್ರೆಸ್ ನಾಯಕನಿಗೆ ನಿರಾಳತೆ ಲಭಿಸಿತುದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್ ಅವರು ಐಪಿಸಿ ಸೆಕ್ಷನ್ ೧೨೦ ಬಿ ಬಗ್ಗೆ ವಿವರಣೆ ನೀಡಿ ತೀರ್ಪನ್ನು ಪ್ರಕಟಿಸಿದರು. ಡಿಕೆ ಶಿವಕುಮಾರ್ ಜಾಮೀನು ಅರ್ಜಿ ಕುರಿತು ವಾದ, ಪ್ರತಿವಾದ ಆಲಿಸಿದ್ದ ನ್ಯಾಯಮೂರ್ತಿ ತಮ್ಮ ತೀರ್ಪನ್ನು 2019 ಅಕ್ಟೋಬರ್ 23 ಬುಧವಾರಕ್ಕೆ ಕಾಯ್ದಿರಿಸಿದ್ದರು. ತಿಹಾರ್ ಜೈಲು ವಾಸ ಅನುಭವಿಸುತ್ತಿದ್ದ ಶಿವಕುಮಾರ್ ಅವರ ಆರೋಗ್ಯ ಸ್ಥಿತಿ ಗಮನಿಸಿ ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್ ಅವರ ಏಕಸದಸ್ಯ ಪೀಠ  ಜಾಮೀನು ಮಂಜೂರು ಮಾಡಿತು. ಇದರ ಜೊತೆಗೆ ೨೫ ಲಕ್ಷ  ರೂಪಾಯಿ ಮೌಲ್ಯದ ಎರಡು ಬಾಂಡುಗಳನ್ನು ಒದಗಿಸಬೇಕು, ಪಾಸ್ ಪೋರ್ಟ್ನ್ನು ಒಪ್ಪಿಸಬೇಕು ಮತ್ತು ವಿಚಾರಣೆಗೆ ಸಹರಿಸಬೇಕು ಎಂಬ ಶರತ್ತುಗಳನ್ನು ವಿಧಿಸಿತು. (ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿರಿ)

2019: ನವದೆಹಲಿ: ಅಕ್ಟೋಬರ್ ೨೭ರ ಭಾನುವಾರದೀಪಾವಳಿದಿನದಂದು ಲಂಡನ್ನಿನಲ್ಲಿ ಜಮ್ಮ ಮತ್ತು ಕಾಶ್ಮೀರದ ವಿಷಯವಾಗಿ ನಡೆಸಲು ಉದ್ದೇಶಿಸಲಾಗಿರುವ ಭಾರತ ವಿರೋಧಿ ಪ್ರತಿಭಟನೆ ಬಗ್ಗೆ ಬ್ರಿಟಿಷ್ ಸರ್ಕಾರದ ಗಮನ ಸೆಳೆದು 2019 ಅಕ್ಟೋಬರ್ 23 ಬುಧವಾರ ಭಾರತವು ಪತ್ರ ಬರೆಯಿತು ಮತ್ತು ಲಂಡನ್ನಿನಲ್ಲಿ ಇರುವ ಭಾರತದ ರಾಯಭಾರಿ ಕಚೇರಿ ಮತ್ತು ಸಿಬ್ಬಂದಿಗೆ ಭದ್ರತೆ ಒದಗಿಸುವಂತೆ ಆಗ್ರಹಿಸಿತು. ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ ಇಂಗ್ಲೆಂಡಿನಲ್ಲಿ ಭಾರತ ವಿರೋಧಿ ಭಾವನೆಗಳನ್ನು ಹುಟು ಹಾಕಲು ನಡೆಯುತ್ತಿರುವ ಯತ್ನಗಳ ಬಗ್ಗೆ ಮತ್ತು ಲಂಡನ್ನಿನ ಭಾರತೀಯ ರಾಯಭಾರ ಕಚೇರಿಯ ಸಿಬ್ಬಂದಿ ಸುರಕ್ಷತೆ ಮತ್ತು ಭದ್ರತೆ ಬಗ್ಗೆ ಕಳವಳ ವ್ಯಕ್ತ ಪಡಿಸಿ ಭಾರತವು ಲಂಡನ್ನಿನ ರಾಜತಾಂತ್ರಿಕ ಕಚೇರಿಯ ಮೂಲಕ ಇಂಗ್ಲೆಂಡ್ ಸರ್ಕಾರಕ್ಕೆ ರಾಜತಾಂತ್ರಿಕ ಪತ್ರವನ್ನು ರವಾನಿಸಿತು. ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಪರ ಗುಂಪುಗಳು ಲಂಡನ್ನಿನ ಭಾರತೀಯ ರಾಯಭಾರ ಕಚೇರಿಯ ಮುಂದೆ ಆಗಸ್ಟ್ ೧೫ ಮತ್ತು ಸೆಪ್ಟೆಂಬರ್ ೩ರಂದು ಪ್ರತಿಭಟನೆಗಳನ್ನು ನಡೆಸಿದ್ದವು. ಆಗಸ್ಟ್ ೧೫ರಂದು ಭಾರತದ ರಾಯಭಾರ ಕಚೇರಿಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ ಸಮಾರಂಭವನ್ನು ಹಾಳುಗೆಡಹುವ ಉದ್ದೇಶದೊಂದಿಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿಯವರು ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಜೊತೆಗೆ ಆಗಸ್ಟ್ ೨೦ರಂದು ನಡೆಸಿದ ದೂರವಾಣಿ ಮಾತುಕತೆಯಲ್ಲಿ ಪ್ರಸ್ತಾಪಿಸಿದ್ದರು. ಲಂಡನ್ನಿನ ಭಾರತೀಯ ರಾಯಭಾರ ಕಚೇರಿಯ ಮುಂಭಾಗದಲ್ಲಿ ಭಾರೀ ಗುಂಪೊಂದರಿಂದ ನಡೆದ ಹಿಂಸಾಚಾರ ಮತ್ತು ವಿಧ್ವಂಸಕ ಕೃತ್ಯದ ಬಗ್ಗೆ ಮೋದಿ ಪ್ರಸ್ತಾಪಿಸಿದ್ದು, ಜಾನ್ಸನ್ ಅವರು ಘಟನೆ ಬಗ್ಗೆ ವಿಷಾದ ವ್ಯಕ್ತ ಪಡಿಸಿದರು ಮತ್ತು ಹೈಕಮೀಷನ್, ಸಿಬ್ಬಂದಿ ಮತ್ತು ಸಂದರ್ಶಕರಿಗೆ ಭದ್ರತೆ ಹಾಗೂ ಸುರಕ್ಷತೆ ಒದಿಗುಸ ಬಗ್ಗೆ ಅಗತ್ಯ ಕ್ರಮದ ಭರವಸೆ ನೀಡಿದ್ದಾರೆ ಎಂದು ಭಾರತದ ಕಡೆಯಿಂದ ಬಿಡುಗಡೆ ಮಾಡಲಾದ ಮಾಹಿತಿ ತಿಳಿಸಿತ್ತು. (ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿರಿ)

2019: ನವದೆಹಲಿ: ಕಾಂಗ್ರೆಸ್ ಪಕ್ಷವು ಪಕ್ಷದ ನಾಯಕ ಸುಭಾಶ್ ಛೋಪ್ರಾ ಅವರನ್ನು ಪಕ್ಷದ ದೆಹಲಿ ಘಟಕದ ಅಧ್ಯಕ್ಷರಾಗಿ 2019 ಅಕ್ಟೋಬರ್ 23 ಬುಧವಾರ ನೇಮಕ ಮಾಡಿತು. ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು ಜುಲೈ ೨೦ರಂದು ನಿಧನರಾದಂದಿನಿಂದ ಹುದ್ದೆಯು ಖಾಲಿ ಬಿದ್ದಿತ್ತು. ದೆಹಲಿಯ ಪಕ್ಷದ ನಾಯಕರ ಜೊತೆಗೆ ಮಾತುಕತೆಗಳನ್ನು ನಡೆಸಿದ ಬಳಿಕ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸುಭಾಶ್ ಛೋಪ್ರಾ ಅವರನ್ನು ಪಕ್ಷದ ಹುದ್ದೆಗೆ ಆಯ್ಕೆ ಮಾಡಿದರು. ಕಳೆದ ಕೆಲವು ತಿಂಗಳುಗಳಿಂದ ಕಾಂಗ್ರೆಸ್ ಪಕ್ಷವು ರಾಷ್ಟ್ರದ ರಾಜಧಾನಿಯಲ್ಲಿ ಪಕ್ಷದ ವ್ಯವಹಾರಗಳನ್ನು ಹರೂನ್ ಯೂಸುಫ್, ದೇವೇಂದ್ರ ಯಾದವ್ ಮತ್ತು ರಾಜೇಶ್ ಲಿಲೋಥಿಯ ಮೂವರು ಕಾರ್ಯಾಧ್ಯಕ್ಷರ ಮೂಲಕ ನಿಭಾಯಿಸುತ್ತಿತ್ತು. (ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿರಿ)



No comments:

Post a Comment