2020: ಬೆಂಗಳೂರು: ೨೦೨೦ನೇ
ಇಸವಿಯು ಭಾರತದ ಗಗನಯಾನ ಮತ್ತು ಚಂದ್ರಯಾನ-೩ರ ವರ್ಷ ಎಂಬುದಾಗಿ
2020 ಜನವರಿ 01ರ ಬುಧವಾರ ಇಲ್ಲಿ
ಘೋಷಿಸಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮುಖ್ಯಸ್ಥ ಕೆ.ಶಿವನ್ ಅವರು
ಭಾರತದ ಚೊಚ್ಚಲ ಮಾನವ ಸಹಿತ ಗಗನಯಾನ ಯೋಜನೆಯ ತರಬೇತಿ ಪಡೆಯಲು ಭಾರತೀಯ ವಾಯುಪಡೆಯ ನಾಲ್ವರು ಸಿಬ್ಬಂದಿಯನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಿಸಿದರು. ಇಸ್ರೋ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವನ್ ಅವರು ನಾಲ್ವರು ಗಗನಯಾನಿಗಳು ಜನವರಿ ೩ನೇ ವಾರದಿಂದ ರಷ್ಯಾದಲ್ಲಿ ತರಬೇತಿ ಪಡೆಯಲಿದ್ದಾರೆ ಎಂದು ಹೇಳಿದರು. ಆದರೆ ಅವರ ಹೆಸರುಗಳನ್ನು ಇಸ್ರೋ ಅಧ್ಯಕ್ಷರು ಬಹಿರಂಗ ಪಡಿಸಲಿಲ್ಲ. ‘ಗಗನಯಾನಕ್ಕೆ
ಮುನ್ನ ಪ್ರೊಪಲ್ಷನ್ ಮಾಡ್ಯೂಲ್ಗಳ ಮಾನವ ರೇಟಿಂಗ್
ಮತ್ತು ಸಿಬ್ಬಂದಿ ತಪ್ಪಿಸಿಕೊಳ್ಳುವ ವ್ಯವಸ್ಥೆ ಸೇರಿದಂತೆ ಅನೇಕ ವ್ಯವಸ್ಥೆಗಳನ್ನು ಪರೀಕ್ಷಿಸಲಾಗುವುದು’ ಎಂದು
ಶಿವನ್ ಹೇಳಿದರು. ಚಂದ್ರನ ದಕ್ಷಿಣ ಧ್ರುವ ಪ್ರದೇಶಕ್ಕೇ ಚಂದ್ರಯಾನ-೩ ಸಾಗಲಿದೆ. ಇದಕ್ಕಾಗಿ
ಅಂದಾಜು ೬೦೦ ಕೋಟಿ ರೂಪಾಯಿ ವೆಚ್ಚವಾಗುವ ನಿರೀಕ್ಷೆ ಇದೆ ಎಂದು ಶಿವನ್ ಅಧಿಕೃತವಾಗಿ ಪ್ರಕಟಿಸಿದರು. ಚಂದ್ರಯಾನ-೩ ಯೋಜನೆಯಲ್ಲಿ ಲ್ಯಾಂಡರ್
ಮತ್ತು ರೋವರ್ನ್ನು ಮಾತ್ರ ಹೊಸದಾಗಿ ಬಳಸಲಾಗುವುದು. ಚಾಂದ್ರಕಕ್ಷೆಯಲ್ಲಿ ಸುತ್ತುತ್ತಿರುವ ಚಂದ್ರಯಾನ -೨ ಆರ್ಬಿಟರ್ ನ್ನೇ
ಈ ಯೋಜನೆಯಲ್ಲಿ ಬಳಸಿಕೊಳ್ಳಲಾಗುವುದು. ಯೋಜನೆಗೆ ಕೇಂದ್ರ ಸರ್ಕಾರದ ಒಪ್ಪಿಗೆ ಲಭಿಸಿದ್ದು, ಸಿದ್ಧತೆ ಆರಂಭಿಸಲಾಗಿದೆ ಎಂದು ಶಿವನ್ ಹೇಳಿದರು. (ವಿವರಗಳಿಗೆಇಲ್ಲಿ ಕ್ಲಿಕ್ಕಿಸಿ)

2020: ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇನ್ನು ಮಂದೆ ೪೨ ಮೀಟರಿಗಿಂತ ಎತ್ತರದ ಕಟ್ಟಡ ನಿರ್ಮಿಸುವಂತಿಲ್ಲ. ಕೇಂದ್ರೀಯ ಭಾಗದಲ್ಲಿ ಕೇಂದ್ರ ಸರ್ಕಾರದ ಸಚಿವಾಲಯಗಳು, ನೂತನ ಸಂಸತ್ ಭವನ, ರಾಜಪಥವನ್ನು ನವೀಕರಣಗೊಳಿಸಲಾಗುತ್ತಿದ್ದು, ಎಲ್ಲ ಕಟ್ಟಡಗಳು ಕೂಡ ಏಕರೂಪತೆಯಿಂದ ಕೂಡಿರಲು ಕೇಂದ್ರ ನಗರಾಭಿವೃದ್ಧಿ ಸಚಿವಾಲಯ 2020 ಜನವರಿ 01ರ ಬುಧವಾರ ಈ ನಿರ್ಧಾರ ಕೈಗೊಂಡಿತು. ಐತಿಹಾಸಿಕ ದೆಹಲಿ ಗೇಟ್ ೪೨ ಮೀಟರ್ ಎತ್ತರವಿದ್ದು, ಮುಂದೆ ನಿರ್ಮಾಣವಾಗುವ ಯಾವುದೇ ಕಟ್ಟಡಗಳು ಇದಕ್ಕಿಂತ ಒಂದು ಇಂಚು ಎತ್ತರ ಕೂಡ ಇರುವಂತಿಲ್ಲ. ಈ ಮೂರು ಕಟ್ಟಡಗಳ ನಿರ್ಮಾಣದ ಗುತ್ತಿಗೆ ಗುಜರಾತ್ ಮೂಲದ ಎಚ್ಸಿಪಿ ಡಿಸೈನ್ ಸಂಸ್ಥೆಗೆ ನೀಡಲಾಗಿದೆ. ೨೦೨೨ಕ್ಕೆ ೭೫ನೇ ಸ್ವಾತಂತ್ರೋತ್ಸವ ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಂಸತ್ ಭವನವನ್ನು ಈ ಅವಧಿಯೊಳಗೆ ನಿರ್ಮಿಸಲು ಉದ್ದೇಶಿಸಲಾಗಿದೆ. ಉಳಿದ ಕಟ್ಟಡಗಳನ್ನು ೨೦೨೪ಕ್ಕೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ. ಸುಮಾರು ೧೨ ಸಾವಿರ ಕೋಟಿ ರೂ.ವೆಚ್ಚದ ಯೋಜನೆ ಇದಾಗಿದೆ. ರಾಷ್ಟ್ರಪತಿ ಭವನವು ೩೪೫ ಎಕರೆ ವಿಸ್ತೀರ್ಣ ಹೊಂದಿದ್ದು, ಈ ಪೈಕಿ ೬೦ ಎಕರೆಯಲ್ಲಿ ಜೈವಿಕ ಉದ್ಯಾನ ನಿರ್ಮಿಸಲು ಪ್ರಸ್ತಾವನೆ ಇದೆ. ಜೊತೆಗೆ ಉಪರಾಷ್ಟ್ರಪತಿ ಹಾಗೂ ಪ್ರಧಾನಿ ನಿವಾಸವನ್ನು ಕೂಡ ನವೀಕರಿಸುವ ಸಾಧ್ಯತೆ ಇದೆ. (ವಿವರಗಳಿಗೆ ಇಲ್ಲಿ ಕ್ಲಿಕ್ಕಿಸಿ)


ಜನವರಿ 01ರ ಬುಧವಾರ ಅಧಿಕಾರ ವಹಿಸಿಕೊಂಡಿರುವ ಜನರಲ್ ಬಿಪಿನ್ ರಾವತ್ ಅವರು ತಮ್ಮ ಮೊದಲ ಸಂದೇಶದಲ್ಲಿ ಸರ್ಕಾರದ ನಿರ್ದೇಶನಗಳನ್ನು ಪಾಲನೆ ಮಾಡುವ ಸೇನಾ ಪಡೆಗಳು ರಾಜಕೀಯದಿಂದ ದೂರ ಇರುತ್ತವೆ ಎಂದು ಹೇಳಿದರು. ಅಧಿಕಾರ ಸ್ವೀಕರಿಸಿದ ಬಳಿಕ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ ರಾವತ್ ಅವರು ಸ್ಮಾರಕಕ್ಕೆ ಹೂಗುಚ್ಛ ಇಡುವ ಮೂಲಕ ಗೌರವ ಸಲ್ಲಿಸಿ ಬಳಿಕ ತಮ್ಮ ವಿರುದ್ಧದ ಟೀಕೆಗಳಿಗೆ ಉತ್ತರ ನೀಡಿದರು. ಮೂರೂ ರಕ್ಷಣಾ ಪಡೆಗಳು ಸಂಘಟಿತ ರೀತಿಯಲ್ಲಿ ಒಂದೇ ತಂಡದಂತೆ ಕಾರ್ಯವೆಸಗಬೇಕು. ರಾಜಕೀಯದಿಂದ ದೂರವಿದ್ದು, ಸರ್ಕಾರ ನೀಡಿದ ನಿರ್ದೇಶನದಂತೆ ಕೆಲಸ ಮಾಡೋಣ ಎಂದು ಅವರು ಹೇಳಿದರು. ೧+೧+೧ ಎಂಬ ರೀತಿಯಲ್ಲಿ ಈ ತಂಡದ ಗುರಿ ಮೂರು ಅಲ್ಲ, ಅದು ಐದು ಅಥವಾ ಏಳು ಆಗಿರಬಹುದು. ಸಂಘಟಿತ ರೀತಿಯಲ್ಲಿ ನಮ್ಮ ಪ್ರಯತ್ನ ಮತ್ತಷ್ಟು ಹೆಚ್ಚು ಇರಬೇಕು. ಏಕೀಕರಣದ ಮೂಲಕ ನಾವು ಮತ್ತಷ್ಟು ಸಾಧಿಸಬೇಕು ಎಂದು ರಾವತ್ ನುಡಿದರು. ಸಂಪನ್ಮೂಲಗಳ ಸರಿಯಾದ ಬಳಕೆ ಮತ್ತು ಜಂಟಿ ತರಬೇತಿ ನೀಡುವುದರ ಬಗ್ಗೆ ಸಿಡಿಎಸ್ ಹೆಚ್ಚಿನ ಗಮನ ಹರಿಸುವುದು ಎಂದು ಅವರು ಹೇಳಿದರು. (ವಿವರಗಳಿಗೆ ಇಲ್ಲಿ ಕ್ಲಿಕ್ಕಿಸಿ)
ಇಂದಿನ ಇತಿಹಾಸ
History Today ಜನವರಿ
01 (2019+ ಹಿಂದಿನವುಗಳಿಗೆ ಇಲ್ಲಿಕ್ಲಿಕ್ ಮಾಡಿರಿ)
-ಸಂಗ್ರಹ: ನೆತ್ರಕೆರೆ ಉದಯಶಂಕರ
-ಸಂಗ್ರಹ: ನೆತ್ರಕೆರೆ ಉದಯಶಂಕರ
No comments:
Post a Comment