ಇಂದಿನ ಇತಿಹಾಸ History
Today
ಆಗಸ್ಟ್ 02
2020: ನವದೆಹಲಿ/ ಚೆನ್ನೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ತಮಿಳುನಾಡು ರಾಜ್ಯಪಾಲ ಬನ್ವಾರಿ ಲಾಲ್ ಪುರೋಹಿತ್ ಅವರಿಗೆ ಕೊರೋನಾ ಸೋಂಕು ತಗುಲಿರವುದು 2020 ಆಗಸ್ಟ್ 02ರ ಭಾನುವಾರ ದೃಢಪಟ್ಟತು. ತಮಗೆ ಕೊರೋನಾ ಸೋಂಕು ತಗುಲಿರುವ ಬಗ್ಗೆ ಟ್ವೀಟ್ ಮಾಡಿದ ಅಮಿತ್ ಶಾ ‘ಕೊರೊನಾದ ಲಕ್ಷಣಗಳು ಕಾಣಿಸಿಕೊಂಡ ಬಳಿಕ ಪರೀಕ್ಷೆ ಮಾಡಿಸಿಕೊಂಡಿದ್ದೇನೆ. ವರದಿಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ನನ್ನ ಆರೋಗ್ಯ ಚೆನ್ನಾಗಿದೆ. ಆದರೆ, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದ ನೀವೆಲ್ಲರೂ ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ’ ಎಂದು ಬರೆದರು. ಕೆಲ ದಿನಗಳ ಹಿಂದೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಮಿತ್ ಶಾ ಭಾಗವಹಿಸಿದ್ದರು. ಅವರ ಸಂಪರ್ಕಕ್ಕೆ ಬಂದಿರುವ ಸಚಿವರನ್ನು ಪತ್ತೆ ಹಚ್ಚಿ, ಕ್ವಾರಂಟ್ವೈನಿನಲ್ಲಿ ಇಡಲಾಗುತ್ತದೆ ಎಂದು ಸುದ್ದಿ ಮೂಲಗಳು ಹೇಳಿದವು. ಆಗಸ್ಟ್ ೧ ರಂದು ಸ್ವಾತಂತ್ರ್ಯ ಹೋರಾಟಗಾರ ಬಾಲ ಗಂಗಾಧರ ತಿಲಕ್ ಜನ್ಮದಿನದ ಪ್ರಯುಕ್ತ ಭಾರತೀಯ ಕೌನ್ಸಿಲ್ ಆಫ್ ಕಲ್ಚರಲ್ ರಿಲೇಶನ್ಸ್ (ಐಸಿಸಿಆರ್) ಏರ್ಪಡಿಸಿದ್ದ ಆನ್ ಲೈನ್ ಸಮಾವೇಶದಲ್ಲಿ ಶಾ ಅವರು ಭಾಗವಹಿಸಿ ಮಾತನಾಡಿದ್ದರು. (ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ)
2020: ಮುಂಬೈ: ಕೊರೋನಾವೈರಸ್ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಮುಂಬೈಯ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಬಾಲಿವುಡ್ ಚಿತ್ರ ನಟ ಅಮಿತಾಭ್ ಬಚ್ಚನ್ 2020 ಆಗಸ್ಟ್ 02ರ ಭಾನುವಾರ ಬಿಡುಗಡೆಯಾದರು. ಆಸ್ಪತ್ರೆಗೆ ದಾಖಲಾದ ೨೩ ದಿನಗಳ ಬಳಿಕ ಅಮಿತಾಬ್ ಬಚ್ಚನ್ ಬಿಡುಗಡೆಯಾಗಿದ್ದು, ಅವರ ಪುತ್ರ ಅಭಿಷೇಕ್ ಬಚ್ಚನ್ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ೭೭ ವರ್ಷದ ಅಮಿತಾಬ್ ಬಚ್ಚನ್ ಅವರಿಗೆ ಜುಲೈ ೧೧ ರಂದು ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಆ ನಂತರ ಅವರ ಪುತ್ರ ಅಭಿಷೇಕ್ ಬಚ್ಚನ್, ಸೊಸೆ ಐಶ್ವರ್ಯಾ ರೈ ಮತ್ತು ಮೊಮ್ಮಗಳಿಗೂ ಕೋವಿಡ್ ಇರುವುದು ಬೆಳಕಿಗೆ ಬಂದಿತ್ತು. ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅಮಿತಾಬ್ ಅವರು ಮುಂಬೈನ ತಮ್ಮ ನಿವಾಸದಲ್ಲಿ ಕ್ವಾರಂಟೈನ್ ಆಗಿರುವುದಾಗಿ ಟ್ವೀಟ್ ಮಾಡಿದರು. ‘ನನ್ನ ಕೋವಿಡ್ ಪರೀಕ್ಷೆಯ ಫಲಿತಾಂಶ ನೆಗೆಟಿವ್ ಬಂದಿದೆ. ನನ್ನನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ನಾನು ಮನೆಗೆ ಮರಳಿ ಹೋಮ್ ಕ್ವಾರಂಟೈನ್ ಆಗಿದ್ದೇನೆ. ದೇವರ ಕೃಪೆ, ಅಪ್ಪ-ಅಮ್ಮನ ಆಶೀರ್ವಾದ, ಆತ್ಮೀಯ ಸ್ನೇಹಿತರ ಪ್ರಾರ್ಥನೆ, ಅಭಿಮಾನಿಗಳ ಹರಕೆ ಮತ್ತು ನಾನಾವತಿ ಆಸ್ಪತ್ರೆಯ ಅತ್ಯುತ್ತಮ ಆರೈಕೆ ಮತ್ತು ಶುಶ್ರೂಷೆಯಿಂದ ನನಗೆ ಈ ದಿನವನ್ನು ಕಾಣಲು ಸಾಧ್ಯವಾಗಿದೆ’ ಎಂದು ಅಮಿತಾಬ್ ಬಚ್ಚನ್ ಟ್ವಿಟ್ಟರ್ ಸಂದೇಶದಲ್ಲಿ ಬರೆದರು. (ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ) ಇಂದಿನ ಇತಿಹಾಸ History Today ಆಗಸ್ಟ್ 02 (2019+ ಹಿಂದಿನವುಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ)
-ಸಂಗ್ರಹ: ನೆತ್ರಕೆರೆ ಉದಯಶಂಕರ
No comments:
Post a Comment