ನಾನು ಮೆಚ್ಚಿದ ವಾಟ್ಸಪ್

Saturday, August 22, 2020

ಇಂದಿನ ಇತಿಹಾಸ History Today ಆಗಸ್ಟ್ 22

 ಇಂದಿನ ಇತಿಹಾಸ History Today ಆಗಸ್ಟ್ 22

2020: ಇಸ್ಲಾಮಾಬಾದ್
: ಪಾತಕಿ ದಾವೂದ್ ಇಬ್ರಾಹಿಂ, ಹಫೀಜ್ ಸಯೀದ್, ಮಸೂದ್ ಅಜರ್ ಮತ್ತು ನಿಷೇಧಿತ ೮೮ ಉಗ್ರ ಸಂಘಟನೆಗಳು, ಅವುಗಳ ನಾಯಕರ ಮೇಲೆ ಪಾಕಿಸ್ತಾನ 2020 ಆಗಸ್ಟ್  22ರ ಶನಿವಾರ ಮತ್ತಷ್ಟು ಕಠಿಣ ಆರ್ಥಿಕ ನಿರ್ಬಂಧ ವಿಧಿಸಿತು. ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುವುದರ ಮೇಲೆ ನಿಗಾ ಇಡುವ ಅಂತಾರಾಷ್ಟ್ರೀಯ ಮಟ್ಟದ ಸಂಸ್ಥೆ ಹಣಕಾಸು ಕಾರ್ಯಪಡೆಯ (ಎಫ್‌ಎಟಿಎಫ್) ‘ಬೂದು ಪಟ್ಟಿಯಲ್ಲಿ ಗುರುತಿಸಿಕೊಳ್ಳುವುದನ್ನು ತಪ್ಪಿಸಿಕೊಳ್ಳಲು ಕ್ರಮ ಕೈಗೊಳ್ಳಲಾಯಿತು. ದಾವೂದ್ ಇಬ್ರಾಹಿಂ, ಹಫೀಜ್ ಸಯೀದ್, ಮಸೂದ್ ಅಜರ್ ಮತ್ತು ಇತರ ಉಗ್ರ ನಾಯಕರ ಎಲ್ಲ ಆಸ್ತಿ, ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಸರ್ಕಾರ ಆದೇಶಿಸಿತು. ಆದೇಶದ ಪ್ರತಿಯಲ್ಲಿ ದಾವೂದ್ ಇಬ್ರಾಹಿನ  ಕರಾಚಿ ವಿಳಾಸವೂ ಉಲ್ಲೇಖವಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿತು. ಇದರೊಂದಿಗೆ, ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿ ಇರುವುದನ್ನು ದೇಶ ಅಧಿಕೃತವಾಗಿ ಒಪ್ಪಿಕೊಂಡಂತಾಗಿದೆ. ಉಗ್ರ ಸಂಘಟನೆಗಳಿಗೆ ಹಣಕಾಸು ನೆರವು ನೀಡುವುದಕ್ಕೆ ಕಡಿವಾಣ ಹಾಕುವಲ್ಲಿ ಗಂಭೀರ ಪ್ರಯತ್ನ ಮಾಡದ ಕಾರಣ, ಪಾಕಿಸ್ತಾನವನ್ನು ಎಫ್‌ಎಟಿಎಫ್ ೨೦೧೮ರ ಜೂನ್ ತಿಂಗಳಲ್ಲಿ ಬೂದು ಪಟ್ಟಿಗೆಸೇರಿಸಿತ್ತು. ಅಲ್ಲದೇ, ೨೭ ಅಂಶಗಳನ್ನು ಈಡೇರಿಸುವ ಸಲುವಾಗಿ ೨೦೧೯ರ ಅಕ್ಟೋಬರ್ ವರೆಗೆ ಗಡುವು ನೀಡಿತ್ತು. ಆದರೆ, ಪೈಕಿ ೨೫ ಅಂಶಗಳನ್ನು ಈಡೇರಿಸುವಲ್ಲಿಯೇ ಪಾಕಿಸ್ತಾನ ವಿಫಲವಾಗಿತ್ತು. (ವಿವರಗಳಿಗೆ  ಇಲ್ಲಿ  ಕ್ಲಿಕ್   ಮಾಡಿರಿ)

ಇಂದಿನ ಇತಿಹಾಸ  History Today ಆಗಸ್ಟ್ 22 (2019+ ಹಿಂದಿನವುಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ)

-ಸಂಗ್ರಹ: ನೆತ್ರಕೆರೆ ಉದಯಶಂಕರ

No comments:

Post a Comment