Sunday, September 27, 2020

ಇಂದಿನ ಇತಿಹಾಸ History Today ಸೆಪ್ಟೆಂಬರ್ 27

 ಇಂದಿನ ಇತಿಹಾಸ  History Today ಸೆಪ್ಟೆಂಬರ್ 27

2020: ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು 2020 ಸೆಪ್ಟೆಂಬರ್ 27ರ ಭಾನುವಾರ ಮೂರು ವಿವಾದಾತ್ಮಕ ಕೃಷಿ ಮಸೂದೆಗಳಿಗೆ ಅಂಕಿತ ಹಾಕಿದರು. ಮಸೂದೆಗಳು  ಪಂಜಾಬ್ ಮತ್ತು ಹರಿಯಾಣದಲ್ಲಿ ರೈತರ ಪ್ರತಿಭಟನೆಗೆ ಕಾರಣವಾಗಿದೆ.ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ನೆರವು) ಮಸೂದೆ, ಬೆಲೆ ಖಾತರಿ ಹಾಗೂ ಬೇಸಾಯ ಸೇವೆಗಳಿಗೆ ರೈತರ ಒಪ್ಪಿಗೆ (ಸಶಕ್ತೀಕರಣ ಹಾಗೂ ರಕ್ಷಣೆ),  ಅಗತ್ಯ ವಸ್ತುಗಳ (ತಿದ್ದುಪಡಿ) ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ ಹಾಕಿದರು.ಇದಕ್ಕೂ ಮುನ್ನ ವಿರೋಧ ಪಕ್ಷಗಳ ಸದಸ್ಯರ ಭಾರಿ ಗದ್ದಲ, ಪ್ರತಿಭಟನೆ ಮತ್ತು ವಿರೋಧದ ನಡುವೆಯೇ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಎರಡು ಮಸೂದೆಗಳಿಗೆ ರಾಜ್ಯಸಭೆ ಧ್ವನಿಮತದ ಅಂಗೀಕಾರ ನೀಡಿತು.ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಮಸೂದೆಗಳನ್ನು ಮಂಡಿಸಿದಾಗ ರಾಜ್ಯಸಭೆಯಲ್ಲಿ ಜೋರು ಗಲಾಟೆ ಆರಂಭವಾಯಿತು.ರೈತರ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆ ಮತ್ತು ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕುರಿತಂತೆ ರೈತರ ಜತೆ (ಸಬಲೀಕರಣ ಮತ್ತು ರಕ್ಷಣೆ) ಒಪ್ಪಂದ ಮಸೂದೆಗಳನ್ನು ಪರಿಶೀಲನಾ ಸಮಿತಿಗೆ ಕಳಿಸುವಂತೆ ವಿರೋಧ ಪಕ್ಷಗಳ ಸದಸ್ಯರು ಪಟ್ಟು ಹಿಡಿದರು.(ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ)

2020: ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರು 2020 ಸೆಪ್ಟೆಂಬರ್ 27 ಭಾನುವಾರ ನಿಧನರಾದರು. ತೀವ್ರ ಅಸ್ವಸ್ಥರಾಗಿದ್ದ ಸಿಂಗ್ ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಜಸ್ವಂತ್ ಸಿಂಗ್(೮೨) ಅವರನ್ನು ಕಳೆದ ಜೂನ್ ತಿಂಗಳಲ್ಲೇ ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಈದಿನ ಬೆಳಗಿನ ಜಾವ ಸುಮಾರು :೫೫ಕ್ಕೆ ಜಸ್ವಂತ್ ಸಿಂಗ್ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದವು.ಕೇಂದ್ರದ ಹಣಕಾಸು ಸಚಿವ, ರಕ್ಷಣಾ ಸಚಿವ ಹಾಗೂ ವಿದೇಶಾಂಗ ಸಚಿವರಾಗಿ ಸೇವೆ ಸಲ್ಲಿಸಿರುವ ಜಸ್ವಂತ್ ಸಿಂಗ್, ಬಿಜೆಪಿಯ ಹಿರಿಯ ನಾಯಕರ ಸಾಲಿನಲ್ಲಿ ಗುರುತಿಸಿಕೊಂಡಿದ್ದರು.೧೯೫೦-೬೦ರ ದಶಕದಲ್ಲಿ ಭಾರತೀಯ ಸೇನೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಜಸ್ವಂತ್ ಸಿಂಗ್, ರಾಜಕೀಯ ಕ್ಷೇತ್ರದತ್ತ ಆಕರ್ಷಿತರಾಗಿ ಹುದ್ದೆಗೆ ರಾಜೀನಾಮೆ ನೀಡಿದ್ದರು.(ವಿವರಗಳಿಗೆಇಲ್ಲಿ ಕ್ಲಿಕ್ ಮಾಡಿರಿ)

ಇಂದಿನ ಇತಿಹಾಸ  History Today ಸೆಪ್ಟೆಂಬರ್ 27 (2019+ ಹಿಂದಿನವುಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ)

-ಸಂಗ್ರಹ: ನೆತ್ರಕೆರೆ ಉದಯಶಂಕರ

No comments:

Post a Comment