ನಾನು ಮೆಚ್ಚಿದ ವಾಟ್ಸಪ್

Sunday, August 22, 2021

PARYAYA: ವಾರೇ ವಾಹ್ ಕೇರಳದ ಓಣಂ ಮತ್ತು ತುಳುವರ ದೀಪಾವಳಿ..!

 ವಾರೇ ವಾಹ್  ಕೇರಳದ ಓಣಂ ಮತ್ತು ತುಳುವರ ದೀಪಾವಳಿ..!

ಭಾರತದ ಈ ಸಂಸ್ಕೃತಿಗೆ ವಾರೇ ವಾಹ್ ಎನ್ನಲೇಬೇಕು. ಎಂತಹ ಸಾಮ್ಯತೆ ನೋಡಿ. ಕೇರಳದಲ್ಲಿ ಈಗ (ಇದು ಬರೆಯುವಾಗ ದಿನ: 22 ಆಗಸ್ಟ್ 2021) ಓಣಂ ಸಂಭ್ರಮ.  ಇದೇ ಸಂಭ್ರಮ  ತುಳುನಾಡು ಅಂದರೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಅಥವಾ ಈಗಿನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಹಾಗೂ ಕರ್ನಾಟಕ-ಕೇರಳದ ಗಡಿನಾಡು ಕಾಸರಗೋಡಿನಲ್ಲಿ ದೀಪಾವಳಿಯ ವೇಳೆಯಲ್ಲಿ ಕಂಡು ಬರುತ್ತದೆ.

 ಎರಡೂ ಸಂದರ್ಭಗಳಲ್ಲಿ  ಕಂಡು ಬರುವ ಸಾಮ್ಯತೆ ಬಲಿಯೇಂದ್ರ ಇಲ್ಲವೇ ಬಲಿ ಚಕ್ರವರ್ತಿ ಅಥವಾ ರಾಜಾಮಹಾಬಲಿಗೆ ನೀಡುವ ಸಂಭ್ರಮದ ಸ್ವಾಗತ.

ಈಗ ಕೇರಳದಲ್ಲಿ ಮಾತ್ರವೇ ಅಲ್ಲ ತಾವಿರುವ ಎಲ್ಲ ಕಡೆಗಳಲ್ಲೂ ಕೇರಳಿಗರು ಸಂಭ್ರಮದಿಂದ ಆಚರಿಸುತ್ತಿರುವ ಓಣಂ ಕಡೆಗೆ ಗಮನ ಹರಿಸಿ.

ಓಣಂ ಹಬ್ಬವು ಕೇರಳಿಗರು ನಂಬುವ ಪ್ರಕಾರ ರಾಜ ಮಹಾಬಲಿಯ ತಾಯ್ನಾಡಿನಲ್ಲಿ ಅಂದರೆ ಕೇರಳದಲ್ಲಿ ಆಚರಿಸಲ್ಪಡುತ್ತದೆ.  ಇದು 10 ದಿನಗಳ ಕಾಲ ನಡೆಯುತ್ತದೆ.  ಮುಖ್ಯ ಹಬ್ಬವನ್ನು ಆಗಸ್ಟ್ 21-23 ರಿಂದ ಮೂರು ದಿನಗಳವರೆಗೆ ಆಚರಿಸಲಾಗುತ್ತದೆ.

ಮಹಾಬಲಿರಾಕ್ಷಸ ರಾಜ. ಆದರೆ  ಉದಾರ ಮತ್ತು ದಯಾಮಯ ಎಂದು ಪ್ರತೀತಿ. ಆತನ ಆಡಳಿತವನ್ನು  ಸುವರ್ಣ ಯುಗಕ್ಕೆ ಹೋಲಿಕೆ ಮಾಡಲಾಗುತ್ತದೆ,   ಕಾರಣದಿಂದಾಗಿಪ್ರತಿವರ್ಷ ಮಹಾಬಲಿ ತನ್ನ ತಾಯ್ನಾಡಿಗೆ ಭೇಟಿ ನೀಡಿ ಮರಳುವ ಸಂದರ್ಭವನ್ನು  ವ್ಯಾಪಕವಾಗಿ ಆಚರಿಸಲಾಗುತ್ತದೆಹಬ್ಬವನ್ನು ಮಲಯಾಳಂ ಕ್ಯಾಲೆಂಡರ್ ತಿಂಗಳಾದ ಚಿಂಗಂನಲ್ಲಿ ಆಚರಿಸಲಾಗುತ್ತದೆಈ ಓಣಂ  ಸುಗ್ಗಿಯ ಹಬ್ಬ ಕೂಡಾ.

ಪುರಾಣ ಕಥೆಗಳ ಪ್ರಕಾರ ಅಸುರ ನಾಯಕಾಗಿದ್ದ ರಾಜಾ ಮಹಾಬಲಿಯು ದೇವತೆಗಳನ್ನು  ಸೋಲಿಸಿ ಮೂರು ಲೋಕಗಳನ್ನು ವಶಪಡಿಸಿಕೊಂಡನು.ಇದು ದೇವತೆಗಳನ್ನು ವ್ಯಗ್ರಗೊಳಿಸಿತು.  ಅವರು ರಾಕ್ಷಸ ರಾಜನ ವಿರುದ್ಧ ಹೋರಾಡಲು ಅವರಿಗೆ ಸಹಾಯ ಮಾಡಲು ಭಗವಾನ್ ವಿಷ್ಣುವನ್ನು ಪ್ರಾರ್ಥಿಸಿದರು.

ರಾಜಾ ಮಹಾಬಲಿ ಭಗವಾನ್ ವಿಷ್ಣುವಿನ ಭಕ್ತ.  ಭಗವಾನ್ ವಿಷ್ಣುವಿಗೆ ಉಭಯ ಸಂಕಟ. ವಿಷ್ಣೂ ಭಗವಾನ್ ವಿಷ್ಣು ವಾಮನ  ಅಂದರೆ ಕುಬ್ಜ ಗಾತ್ರದ ಬ್ರಾಹ್ಮಣ ವಟು  ರೂಪದಲ್ಲಿ  ಮಹಾಬಲಿಯನ್ನು ಭೇಟಿ ಮಾಡಿದ  ಮತ್ತು ಮೂರು ಹೆಜ್ಜೆ ಜಾಗವನ್ನು ತನಗೆ ದಾನವಾಗಿ ನೀಡುವಂತೆ ಮಹಾಬಲಿ ಬಳಿ ಪ್ರಾರ್ಥಿಸಿದ. ದಾನಶೂರನಾದ ಮಹಾಬಲಿ  ಅದಕ್ಕೆ ಒಪ್ಪಿದ.

ಬಳಿಕ ವಾಮನ  ಗಾತ್ರದ ವಟುವಿನ ಗಾತ್ರ ಹಿಗ್ಗಿತು.  ಆತ ಕೇಳಿದ  ಎರಡು ಹೆಜ್ಜೆಗಳನ್ನು ಇಡುವಷ್ಟರಲ್ಲಿ ರಾಜಾ ಮಹಾಬಲಿಯ ಆಳ್ವಿಕೆಗೆ ಒಳಪಟ್ಟ ಸಮಸ್ತ ಭೂಮಂಡಲ ಮುಗಿದು ಹೋಯಿತು. ಮೂರನೇ ಹೆಜ್ಜೆ ಇಡಲು ಯಾವುದೇ ಸ್ಥಳ ಇಲ್ಲದೇ ಹೋದಾಗ ಮಹಾಬಲಿ ತನ್ನ ತಲೆಯ ಮೇಲೆಯೇ ಮೂರನೇ ಹೆಜ್ಜೆ ಇಡಲು ಮನವಿ ಮಾಡಿದ.

ಮಹಾಬಲಿಯ ನಡತೆಗೆ ಮೆಚ್ಚಿದ ಭಗವಾನ್ ವಿಷ್ಣು ಆತನಿಗೆ ಪ್ರತಿ  ವರ್ಷದಲ್ಲಿ ಒಂದು ಬಾರಿ ಭೂಮಿಯಲ್ಲಿನ ಆತನ ಸಾಮ್ಯಾಜ್ಯಕ್ಕೆ ಬರಲು ಅವಕಾಶ ನೀಡಿದ. 

ಹೀಗೆ ಪ್ರತಿ ವರ್ಷ ಮಹಾಬಲಿ ಭೂಮಿಯಲ್ಲಿನ ಆತನ ಸಾಮ್ರಾಜ್ಯಕ್ಕೆ ಬರುವ ಕಾಲವನ್ನೇ ಕೇರಳದಲ್ಲಿ ‘ಓಣಂ’ ಎಂಬುದಾಗಿ ಆಚರಿಸಲಾಗುತ್ತದೆ.

ಕೇರಳದಲ್ಲಿ ಅತ್ಯಂತ ಸಂಭ್ರಮದೊಂದಿಗೆ ಆಚರಿಸಲಾಗುವ  ಹಬ್ಬದಲ್ಲಿ ಗಮನ ಸೆಳೆಯುವುದು ರಂಗೋಲಿ ಅಲಂಕಾರ ಮತ್ತು ಬಾಳೆ ಎಲೆಯಲ್ಲಿ ಬಡಿಸಲಾಗುವ ಬಗೆ ಬಗೆಯ ಭಕ್ಷ್ಯ ಭೋಜ್ಯಗಳ ಭೋಜನ.

ಇಲ್ಲಿರುವ ಪುಟ್ಟ ವಿಡಿಯೋ ಈ ‘ಭೋಜನ ಸಂಭ್ರಮವನ್ನು’ ತೋರಿಸುತ್ತದೆ.


ಈ ಜನರು ‘ವಲ್ಲಂ ಕಾಳಿ’ ಎಂದು ಕರೆಯಲಾಗುವ  ದೋಣಿ ಓಟಗಳಲ್ಲಿ ಭಾಗವಹಿಸಿ ಸಂಭ್ರಮ ಆಚರಿಸುತ್ತಾರೆ.

ತುಳುನಾಡಿನಲ್ಲಿ:

ಇದು ಕೇರಳದ ಕಥೆಯಾದರೆ, ಕರ್ನಾಟಕದ ತುಳುನಾಡು ಅಂದರೆ ಪಶ್ಚಿಮ ಕರಾವಳಿಯಲ್ಲಿ ಇದೇ ರಾಜಾ ಮಹಾಬಲಿಯನ್ನು  ಬಲಿಯೇಂದ್ರ ಹೆಸರಿನಲ್ಲಿ ಪ್ರತಿವರ್ಷವೂ ಸಡಗರದೊಂದಿಗೆ ಬರಮಾಡಿಕೊಳ್ಳುತ್ತಾರೆ. ಆದರೆ ಕೇರಳಿಗರ  ಓಣಂ ಸಂದರ್ಭದಲ್ಲಿ ಅಲ್ಲ- ಭಾರತದಾದ್ಯಂತ ಸಂಭ್ರಮದಿಂದ ಆಚರಿಸಲಾಗುವ ದೀಪಾವಳಿಯ ಸಂದರ್ಭದಲ್ಲಿ.

ಕತ್ತಲೆಯಿಂದ ಬೆಳಕಿನ ಕಡೆಗೆ,  ಅಜ್ಞಾನದಿಂದ ಜ್ಞಾನದ ಕಡೆಗೆ ಮತ್ತು ಬಡತನದಿಂದ ಸಮೃದ್ಧಿಯತ್ತ ಸಾಗುವ ನಮ್ಮ ಸಹಜ ಆಕಾಂಕ್ಷೆಯ ಸಂಕೇತವಾಗಿ  ದೀಪಾವಳಿಯನ್ನು ಆಚರಿಸಲಾಗುತ್ತದೆ. ಇದು  ಪ್ರಕೃತಿಮಾತೆಗೆ ಕೃತಜ್ಞತೆ ಸಲ್ಲಿಸುವ ಹಬ್ಬ ಕೂಡಾ ಹೌದು.  ದೀಪಾವಳಿ ಎಂದರೆ ದೀಪಗಳ ಸಮೂಹ.

 ಆಧುನಿಕಸಕಾರಾತ್ಮಕ ಚಿಂತನೆಯ ಶೈಲಿಯ ವಿವರಣೆಗಳ ಹೊರತಾಗಿಯೂಉತ್ಸವವನ್ನು ಮೂಲತಃ  ಬಲಿಯೇಂದ್ರನ ಸಾಮ್ರಾಜ್ಯದ  ವ್ಯಾಪ್ತಿಗೆ ಒಳಪಟ್ಟ ತುಳುನಾಡಿನ ಪ್ರಜೆಗಳು  ತಮ್ಮ ರಾಜನನ್ನು ಸ್ವಾಗತಿಸಿ ಆದರಿಸುವ ಹಬ್ಬವಾಗಿ ಆಚರಿಸುತ್ತಾರೆ.

ಬಲಿಯೇಂದ್ರ ಅಥವಾ ಬಲಿ ಚಕ್ರವರ್ತಿಯನ್ನು ಮನೆ ಮನೆಗಳಲ್ಲೂ ದೀಪ ಬೆಳಗಿ ಊಟ ಇಟ್ಟು  ಬಲಿಯೇಂದ್ರ ಪಠಣದ ಮೂಲಕ ಸ್ವಾಗತಿಸಿ ಸಂಭ್ರಮಿಸುವ ಆಚರಣೆ ತುಳುನಾಡಿನಲ್ಲಿದೆ. ಬಲಿಗೆ ಸಂಬಂಧಿಸಿದಂತೆ ತುಳುನಾಡಿನಲ್ಲಿ ಕೂಡಾ ಪ್ರಚಲಿತವಾಗಿರುವುದು ಕೇರಳದಲ್ಲಿ ಪ್ರಚಲಿತವಾಗಿರುವ ಈ ವಾಮನಾವತಾರದ ಕಥೆಯೇ.

 ಅಸುರ ರಾಜ ಬಲಿಯೇಂದ್ರ ಮಾಡಿದ  ಮಹಾಪಾಪ ಏನು?

ಮಹಾಬಲಿ ಅಸುರನಾಗಿದ್ದರೂ  ಹೃದಯವಂತ.  ಲೋಕೋಪಕಾರಿ.  ಅಗತ್ಯವಿದ್ದವರಿಗೆ ಉಚಿತ ಉಡುಗೊರೆಗಳನ್ನು ಮನಃಪೂರ್ವಕವಾಗಿ ನೀಡುತ್ತಿದ್ದ.

ದಂತಕಥೆಯ ಪ್ರಕಾರ  ರಾಜಾ ಬಲಿಯೇಂದ್ರ ತನ್ನಿಂದ ದಾನ ಪಡೆಯುವವರು ಏನನ್ನೇ ಕೇಳಿದರೂ ಅದನ್ನು ಕೊಟ್ಟು ಬಿಡುತ್ತಿದ್ದ ದೇವತೆಗಳ ಮೊರೆಗೆ ಓಗೊಟ್ಟ ಭಗವಾನ್ ವಿಷ್ಣು  ರಾಜಾ ಬಲಿಯೇಂದ್ರನ    ಗುಣವನ್ನೇ ಬಳಸಿಕೊಂಡಮತ್ತು  ಕುಬ್ಜ ವಟುವಿನ ಗಾತ್ರದಲ್ಲಿ ಬಂದು ಮೂರು  ಅಡಿ ಇಡುವಷ್ಟು ಗಾತ್ರದ ಭೂಮಿಯನ್ನು ನೀಡುವಂತೆ ಕೋರಿದರಾಜಾ ಬಲಿಯೇಂದ್ರ  ಮಾತುಕೊಟ್ಟ ಬಳಿಕ ಬೃಹದಾಕಾರವಾಗಿ ಬೆಳೆದ ವಾಮನ ಎರಡು ಅಡಿಗಳನ್ನು ಸಂಪೂರ್ಣ ಭೂಮಂಡಲವನ್ನೇ ಪಡೆದುಕೊಂಡಮೂರನೇ ಅಡಿ ಇಡಲು ಜಾಗವೇ ಇರಲಿಲ್ಲಬಲಿಯೇಂದ್ರ ಮೂರನೇ ಹೆಜ್ಜೆ ಇಡಲು ತನ್ನ ತಲೆಯನ್ನೇ ಒಡ್ಡಿದ.

ಬಲಿಯೇಂದ್ರನ ತಲೆಯ ಮೇಲೆ ತನ್ನ ಪಾದವನ್ನು ಊರಿದ ವಿಷ್ಣು ಭಗವಾನ್ ಆತನನ್ನು ಪಾತಾಳಕ್ಕೆ ತಳ್ಳಿದ.  ಆದರೆ ಬಲಿಯೇಂದ್ರನ ತ್ಯಾಗಕ್ಕೆ ಮೆಚ್ಚಿದ ಭಗವಾನ್ ವಿಷ್ಣು, ಪ್ರತಿವರ್ಷ ಮೂರು ದಿನ ತನ್ನ ಸಾಮ್ರಾಜ್ಯಕ್ಕೆ ಹಿಂತಿರುಗಿ ಪ್ರಜೆಗಳಿಂದ ಆದರಾತಿಥ್ಯ ಪಡೆಯಲು ಅವಕಾಶ ನೀಡಿದ. ತುಳುನಾಡಿನಲ್ಲಿ ಇದನ್ನೇ ದೀಪಾವಳಿ ಹಬ್ಬವಾಗಿ ಆಚರಿಸಲಾಗುತ್ತಿದೆ.

ದೀಪಾವಳಿ ರಾತ್ರಿಯ ಸಮಯದಲ್ಲಿ ತುಳುನಾಡು ಗ್ರಾಮೀಣ ಭಾಗದಲ್ಲಿ 'ಪೊಲಿ ಪೊಲಿ ಬಲಿಯೇಂದ್ರಪಠಣವು ಬಲಿಯೇಂದ್ರನನ್ನು  ಸ್ವಾಗತಿಸುವ ಪ್ರಾಚೀನ ಸಂಪ್ರದಾಯವನ್ನು ಪ್ರತಿಧ್ವನಿಸುತ್ತದೆ.

ಇಲ್ಲಿರುವ ಪುಟ್ಟ ವಿಡಿಯೋ ತುಳುವರು ಬಲಿಯೇಂದ್ರನನ್ನು ‘ಪೊಲಿ ಪೊಲಿ ಬಲಿಯೇಂದ್ರ’ ಎಂಬುದಾಗಿ ಪಠಿಸುತ್ತಾ ದೀಪ ಹಚ್ಚಿ ಸ್ವಾಗತಿಸುವುದನ್ನು ತೋರಿಸುತ್ತದೆ. 

ಒಂದೇ ಕಥೆ, ಒಂದೇ ಸಂಭ್ರಮ -  ಎರಡು ರಾಜ್ಯಗಳಲ್ಲಿನ ಸಾಮ್ಯತೆಯನ್ನು ಕಣ್ತುಂಬಿಕೊಳ್ಳಿ.

-ನೆತ್ರಕೆರೆ ಉದಯಶಂಕರ


PARYAYA: ವಾರೇ ವಾಹ್ ಕೇರಳದ ಓಣಂ ಮತ್ತು ತುಳುವರ ದೀಪಾವಳಿ..!:   ವಾರೇ ವಾಹ್   ಕೇರಳದ ಓಣಂ ಮತ್ತು ತುಳುವರ ದೀಪಾವಳಿ..! ಭಾರತದ ಈ ಸಂಸ್ಕೃತಿಗೆ ವಾರೇ ವಾಹ್ ಎನ್ನಲೇಬೇಕು. ಎಂತಹ ಸಾಮ್ಯತೆ ನೋಡಿ. ಕೇರಳದಲ್ಲಿ ಈಗ (ಇದು ಬರೆಯುವಾಗ ದಿನ...

Sunday, August 15, 2021

PARYAYA: ತಾಲೀಬಾನ್ ಬಲೆಯೊಳಕ್ಕೆ ಅಪಘಾನಿಸ್ಥಾನ!

PARYAYA: ತಾಲೀಬಾನ್ ಬಲೆಯೊಳಕ್ಕೆ ಅಪಘಾನಿಸ್ಥಾನ!:   ತಾಲೀಬಾನ್   ಬಲೆಯೊಳಕ್ಕೆ ಅಪಘಾನಿಸ್ಥಾನ!   ಮಹಿಳೆಯರಿಗೆ ಮಧ್ಯಯುಗದ ಕಾನೂನು, ಕಲ್ಲೇಟು , ಬಿಗಿ   ಬಟ್ಟೆಗೆ  ಗಲ್ಲು ..! ನವದೆಹಲಿ, ಆಗಸ್ಟ್ 15, 2021: ಅವರೀಗ ಮನಬಿ...

PARYAYA: ಶ್ರಿ ಬಾಲಾಜಿ ಕೃಪಾ ಬಡಾವಣೆಯಲ್ಲಿ ಸ್ವಾತಂತ್ರ್ಯೋತ್ಸವ

PARYAYA: ಶ್ರಿ ಬಾಲಾಜಿ ಕೃಪಾ ಬಡಾವಣೆಯಲ್ಲಿ ಸ್ವಾತಂತ್ರ್ಯೋತ್ಸವ:   ಶ್ರಿ ಬಾಲಾಜಿ ಕೃಪಾ ಬಡಾವಣೆಯಲ್ಲಿ ಸ್ವಾತಂತ್ರ್ಯೋತ್ಸವ ಬೆಂಗಳೂರು:   ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯಲ್ಲಿ   ಬಾಲಾಜಿ ಕೃಪಾ ಬಡಾವಣೆ...