ನಾನು ಮೆಚ್ಚಿದ ವಾಟ್ಸಪ್

Tuesday, October 1, 2024

PARYAYA: ಎನ್‌ಎಲ್‌ಟಿ ಬಳಕೆ: ಸಮಿತಿ ರಚನೆಗೆ ಸಚಿವ ಖರ್ಗೆ ನಿರ್ದೇಶನ

 ಎನ್‌ಎಲ್‌ಟಿ ಬಳಕೆ: ಸಮಿತಿ ರಚನೆಗೆ ಸಚಿವ ಖರ್ಗೆ ನಿರ್ದೇಶನ

ಬೆಂಗಳೂರು: ಗ್ರಾಮ ಪಂಚಾಯಿತಿಗಳ ಸಾಮರ್ಥ್ಯ ವೃದ್ಧಿಗಾಗಿ ಸಂಪೂರ್ಣ ಸ್ವರಾಜ್‌ ಫೌಂಡೇಶನ್‌ ಅಭಿವೃದ್ಧಿ ಪಡಿಸಿದ ʼಸಂಪೂರ್ಣ ಪಂಚಾಯತ್‌ ಆಪ್ತಮಿತ್ರʼ ಆಪ್‌ ಆಧಾರಿತ ದಿಕ್ಸೂಚಿ ಕಲಿಕಾ ತಂತ್ರಜ್ಞಾನವನ್ನು (ಎನ್‌ಎಲ್‌ಟಿ) ಬಳಸಿಕೊಳ್ಳುವ ನಿಟ್ಟಿನಲ್ಲಿ ಸಮಿತಿಯೊಂದನ್ನು ರಚಿಸಿ ಕಾರ್ಯಪ್ರವೃತ್ತರಾಗುವಂತೆ ರಾಜ್ಯ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರು 2024 ಸೆಪ್ಟೆಂಬರ್‌ 30ರ ಸೋಮವಾರ ಇಲಾಖಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರ ಸಹಪಾಠಿಗಳಾದ ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯದ ಹಳೆ ವಿದ್ಯಾರ್ಥಿಗಳ ಸಂಘ ʼಅಗ್ರಿ ಬೆಸ್ಟ್‌ ಕ್ಲಬ್‌ -75ʼ ಸದಸ್ಯರು ನೇತೃತ್ವದಲ್ಲಿ ವಿಕಾಸಸೌಧದ ಗೃಹ ಸಚಿವರ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಸಚಿವರು ಈ ಸೂಚನೆ ನೀಡಿದರು.

ಗ್ರಾಮ ಪಂಚಾಯಿತಿ ವ್ಯವಸ್ಥೆ ಅಸ್ತಿತ್ವಕ್ಕೆ ಬಂದು ಮೂವತ್ತು ವರ್ಷಗಳು ಕಳೆದಿದ್ದರೂ ಗ್ರಾಮ ಪಂಚಾಯಿತಿಗಳ ಕಾರ್ಯ ನಿರ್ವಹಣೆ ಸುಧಾರಿಸಿಲ್ಲ. ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಗ್ರಾಮ ಪಂಚಾಯಿತಿಗಳ ಕಾರ್ಯ ನಿರ್ವಹಣೆ ಕುರಿತು ನೀಡಲಾಗುತ್ತಿರುವ ತರಬೇತಿ ಜೊತೆಗೆ ಆನ್‌ ಲೈನ್‌ ತರಬೇತಿಯ ಅಂಶವನ್ನು ಸೇರಿಸಲು ಸಾಧ್ಯವಿದೆ ಎಂದು ಅವರು ಹೇಳಿದರು.

ಈ ತರಬೇತಿಯಲ್ಲಿ ಇರಬೇಕಾದ ವಿಷಯಗಳಿಗೆ ಸಂಬಂಧಿಸಿದಂತೆ ತೀರ್ಮಾನಿಸಲು ಸರ್ಕಾರಿ ಅಧಿಕಾರಿಗಳು ಮತ್ತು ಸಂಪೂರ್ಣ ಸ್ವರಾಜ್‌ ಫೌಂಡೇಶನ್‌ ಸದಸ್ಯರನ್ನು ಒಳಗೊಂಡ ಸಮಿತಿಯನ್ನು ತ್ವರಿತವಾಗಿ ರಚಿಸಿ ಕಾರ್ಯೋನ್ಮುಖರಾಗುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗೃಹ ಸಚಿವ ಪರಮೇಶ್ವರ್‌ ಅವರು ಮಾತನಾಡಿ ಕನಿಷ್ಠ 4-5 ಜಿಲ್ಲೆಗಳಲ್ಲಿ ಒಂದೊಂದು ತಾಲೂಕಿನಲ್ಲಿ ಪ್ರಾಯೋಗಿಕ ಕಾರ್ಯಕ್ರಮ ಮೂಲಕ ಈ ತರಬೇತಿ ನೀಡುವ ಯತ್ನ ಆರಂಭಿಸುವಂತೆ ಸಲಹೆ ಮಾಡಿದರು.

ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖಾ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಮ್‌ ಅಂಜುಮ್‌ ಪರ್ವೇಜ್‌, ಸಚಿವಾಲಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್‌ ಮತ್ತು ಇತರ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಂಪೂರ್ಣ ಸ್ವರಾಜ್‌ ಫೌಂಡೇಷನ್‌ ಸಂಸ್ಥಾಪಕ ಹಾಗೂ ಕಾರ್ಯ ನಿರ್ವಾಹಕ ಟ್ರಸ್ಟಿ ಡಾ. ಶಂಕರ ಕೆ. ಪ್ರಸಾದ್‌ ಅವರು ʼಸಂಪೂರ್ಣ ಪಂಚಾಯತ್‌ ಆಪ್ತಮಿತ್ರ ಆಪ್‌ʼ ಮೂಲಕ ದಿಕ್ಸೂಚಿ ಕಲಿಕಾ ತಂತ್ರಜ್ಞಾನವನ್ನು ಬಳಸಿಕೊಂಡು ಗ್ರಾಮ ಪಂಚಾಯತ್‌ ಸದಸ್ಯರು, ಸಿಬ್ಬಂದಿಗೆ ತಾವಿರುವ ಜಾಗದಲ್ಲೇ ತರಬೇತಿ ಪಡೆಯುವ ಬಗೆ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.




ಇವುಗಳನ್ನೂ ಓದಿರಿ: 

ಮುಂದಿನ ಬಜೆಟಿಗೆ ಎನ್‌ಎಲ್‌ಟಿ: ಗೃಹ ಸಚಿವ ಪರಮೇಶ್ವರ್‌ ಭರವಸೆ
ಭ್ರಷ್ಟಾಚಾರ, ಮಧ್ಯವರ್ತಿ ನಿವಾರಣೆಗೆ ತಂತ್ರಜ್ಞಾನ ಪರಿಹಾರ
ಗಾಂಧಿಗಿರಿಯ ʼಗುಲಾಬಿ ಗ್ಯಾಂಗ್‌ʼ ಕಥೆಗೆ ಇದೀಗ ಪುಸ್ತಕ ರೂಪ
ಏನಿದೆ ಈ ಪುಸ್ತಕಗಳಲ್ಲಿ?
ಪುಸ್ತಕಗಳ ಬಿಡುಗಡೆ ಸಮಾರಂಭ
ರೇಡಿಯೋ ಶಿವಮೊಗ್ಗದಲ್ಲಿ ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ
ಶಿವಮೊಗ್ಗ ಬಾನುಲಿಯಲ್ಲಿ ಬಂತು ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ
ಶಿವಮೊಗ್ಗ ಬಾನುಲಿಯಲ್ಲಿ ಬಂತು ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ ಕಂತು-2
ಸಾಮರ್ಥ್ಯ ವೃದ್ಧಿಗೆ ಡಿಜಿಟಲ್‌ ತಂತ್ರಜ್ಞಾನ ಬಳಕೆ ಹೇಗೆ?
ಇದೀಗ ಬಿಡುಗಡೆಯಾಗಿದೆ……

PARYAYA: ಎನ್‌ಎಲ್‌ಟಿ ಬಳಕೆ: ಸಮಿತಿ ರಚನೆಗೆ ಸಚಿವ ಖರ್ಗೆ ನಿರ್ದೇಶನ:   ಎನ್‌ಎಲ್‌ಟಿ ಬಳಕೆ: ಸಮಿತಿ ರಚನೆಗೆ ಸಚಿವ ಖರ್ಗೆ ನಿರ್ದೇಶನ ಬೆಂ ಗಳೂರು: ಗ್ರಾಮ ಪಂಚಾಯಿತಿಗಳ ಸಾಮರ್ಥ್ಯ ವೃದ್ಧಿಗಾಗಿ ಸಂಪೂರ್ಣ ಸ್ವರಾಜ್‌ ಫೌಂಡೇಶನ್‌ ಅಭಿವೃದ್ಧಿ ಪಡಿ...

No comments:

Post a Comment