ವೈಕುಂಠ ಏಕಾದಶಿ ಮಹೋತ್ಸವ
ದೇಶಾದ್ಯಂತ ೨೦೨೫ ಜನವರಿ ೧೦ರ ಶುಕ್ರವಾರದ ಈದಿನ ಸಡಗರೋತ್ಸಾದೊಂದಿಗೆ ವೈಕುಂಠ ಏಕಾದಶಿ ಮಹೋತ್ಸವವನ್ನು ಭಕ್ತರು ಆಚರಿಸಿದರು. ಈ ಸಂದರ್ಭದಲ್ಲಿ ದೇವಾಲಯಗಳಲ್ಲಿ ವಿಶೇಷ ಪೂಜೆಗಳು ನಡೆದರು.
ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಮಹಾಗಣಪತಿ, ಶ್ರೀ ವೆಂಕಟೇಶ್ವರ, ಶ್ರೀ ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಮಹೋತ್ಸವವನ್ನು ಶ್ರದ್ಧಾ ಭಕ್ತಿಗಳೊಂದಿಗೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಎಲ್ಲ ದೇವತಾ ವಿಗ್ರಹ, ದೇವಸ್ಥಾನಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ಭಕ್ತರು ಉತ್ಸಾಹದಿಂದ ಪಾಲ್ಗೊಂಡಿದ್ದರು.
ಬಡಾವಣೆಯ ನಿರ್ಮಾಪಕ, ಶ್ರೀ ಬಾಲಾಜಿ ಮಹಾಗಣಪತಿ ದೇವಸ್ಥಾನ ಸಮಿತಿಯ ಗೌರವಾಧ್ಯಕ್ಷ ಶ್ರೀ ಎಸ್.ಎನ್. ಕೃಷ್ಣಯ್ಯ ಶೆಟ್ಟಿ ಅವರು ವಿಶೇಷ ಲಾಡು ಪ್ರಸಾದದ ವ್ಯವಸ್ಥೆ ಮಾಡಿದ್ದರು.
ಈ ಸಂದರ್ಭದ ಕೆಲವು ಚಿತ್ರಗಳು ಮತ್ತು ವಿಡಿಯೋ ಇಲ್ಲಿದೆ.
ಚಿತ್ರಗಳ ಸಮೀಪ ನೋಟಕ್ಕೆ ಅವುಗಳನ್ನು ಕ್ಲಿಕ್ ಮಾಡಿರಿ.
No comments:
Post a Comment