Showing posts with label ಅಯೋಧ್ಯಾ. Show all posts
Showing posts with label ಅಯೋಧ್ಯಾ. Show all posts

Monday, January 22, 2024

PARYAYA: ʼಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆʼ ಪ್ರಕಟಿಸಿದ ಪ್ರಧಾನಿ

 ʼಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆʼ ಪ್ರಕಟಿಸಿದ ಪ್ರಧಾನಿ

ವದೆಹಲಿ: "ಅಯೋಧ್ಯೆಯಿಂದ ಹಿಂದಿರುಗಿದ ನಂತರ ಇದು ನನ್ನ ಮೊದಲ ನಿರ್ಧಾರ" ಎಂಬುದಾಗಿ ಹೇಳಿದ ಪ್ರಧಾನಿ  ನರೇಂದ್ರ ಮೋದಿ ಅವರು ಹೊಸ ʼಪ್ರಧಾನಮಂತ್ರಿ ಸೂರ್ಯೋದಯ ಯೋಜನೆʼಯನ್ನು 2024 ಜನವರಿ 22ರ ಸೋಮವಾರ ಸಂಜೆ ಪ್ರಕಟಿಸಿದರು.

"ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ" ಯೋಜನೆಯು ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ಲನ್ನು ಕಡಿಮೆ ಮಾಡುವುದಲ್ಲದೆಇಂಧನ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡಲಿದೆ ಎಂದು ಪ್ರಧಾನಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಿಂದ ಹಿಂದಿರುಗಿದ ನಂತರಜನರು ತಮ್ಮ ಮನೆಗಳಲ್ಲಿ ಸೌರ ಫಲಕಗಳನ್ನು ಸ್ಥಾಪಿಸಲು ಸಹಾಯ ಮಾಡುವ ಹೊಸ ಯೋಜನೆಯನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಈ ನಿರ್ಧಾರವು "ಜಗತ್ತಿನ ಎಲ್ಲಾ ಭಕ್ತರು ಸೂರ್ಯವಂಶಿ ಭಗವಾನ್ ಶ್ರೀರಾಮನ ಬೆಳಕಿನಿಂದ ಶಕ್ತಿಯನ್ನು ಪಡೆಯುತ್ತಾರೆ" ಎಂಬ ಅರಿವಿನಿಂದ ಪ್ರೇರಿತವಾಗಿದೆ ಎಂದು ಅವರು ನುಡಿದರು.

"ಅಯೋಧ್ಯೆಯಿಂದ ಹಿಂದಿರುಗಿದ ನಂತರ ನಾನು ತೆಗೆದುಕೊಂಡ ಮೊದಲ ನಿರ್ಧಾರವೆಂದರೆ ನಮ್ಮ ಸರ್ಕಾರವು "ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ" ಯನ್ನು 1 ಕೋಟಿ ಮನೆಗಳಿಗೆ ಮೇಲ್ಛಾವಣಿ ಸೌರ ಅಳವಡಿಸುವ ಗುರಿಯೊಂದಿಗೆ ಪ್ರಾರಂಭಿಸುವುದುʼ ಎಂದು ಪ್ರಧಾನಿ ಮೋದಿ ಟ್ವಿಟರಿನಲ್ಲಿ ಪೋಸ್ಟ್ ಮಾಡಿದರು.

"ಇದು ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಅನ್ನು ಕಡಿಮೆ ಮಾಡುವುದಲ್ಲದೆಇಂಧನ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುತ್ತದೆ" ಎಂದು ಅವರು ಬರೆದರು.

ಅಯೋಧ್ಯೆಯಲ್ಲಿ ನಡೆದ ಮಹಾಮಸ್ತಕಾಭಿಷೇಕದ ನೇತೃತ್ವ ವಹಿಸಿದ್ದ ಪ್ರಧಾನಿ ಮೋದಿನಂತರ ತಮ್ಮ ಭಾಷಣದಲ್ಲಿ ಭಗವಾನ್ ರಾಮನು "ಶಕ್ತಿ" ಮತ್ತು ಇಂದು "ಹೊಸ ಯುಗದ ಉದಯ" ಎಂದು ಹೇಳಿದರು.

"ರಾಮನು ಬೆಂಕಿಯಲ್ಲಅವನು ಶಕ್ತಿ. ರಾಮನು ವಿವಾದವಲ್ಲಅವನು ಪರಿಹಾರ. ರಾಮನು ನಮ್ಮವನಲ್ಲಅವನು ಪ್ರತಿಯೊಬ್ಬರಿಗೂ ಸೇರಿದವನು" ಎಂದು ಪ್ರಧಾನಿ ಹೇಳಿದರು.

"ಇಂದುನಾವು ಕೇವಲ ರಾ ಲಲ್ಲಾ ಅವರ ವಿಗ್ರಹದ ಪ್ರಾಣ ಪ್ರತಿಷ್ಠೆಯನ್ನು ನೋಡಿದ್ದಲ್ಲ, ಭಾರತದ ಮುರಿಯಲಾಗದ ಏಕತೆಯ ಪ್ರಾಣ ಪ್ರತಿಷ್ಠೆಯನ್ನು ಸಹ ನೋಡಿದ್ದೇವೆ" ಎಂದು ದೆಹಲಿಯ ಮನೆಯಲ್ಲಿ ಹಣತೆ ಬೆಳಗಿ ದೀಪಾವಳಿ ಆಚರಿಸುತ್ತಾ ಸಂಜೆ ಮೋದಿ ಹೇಳಿದರು.

ರಾಮ ಜನ್ಮಭೂಮಿ ಮಂದಿರವು ಸಾಂಪ್ರದಾಯಿಕ ನಾಗರ ಶೈಲಿಯಲ್ಲಿ ರೂಪುಗೊಂಡಿದೆ, 392 ಸ್ತಂಭಗಳೂ ಮತ್ತು 44 ಬಾಗಿಲುಗಳನ್ನು ಹೊಂದಿದೆ. ಸ್ತಂಭಗಳು ಮತ್ತು ಗೋಡೆಗಳು ಹಿಂದೂ ದೇವತೆಗಳ ಕೆತ್ತನೆಯ ಚಿತ್ರಣಗಳನ್ನು ಪ್ರದರ್ಶಿಸಿವೆ.

ಭಕ್ತರಿಗೆ ರಾಮಲಲ್ಲಾ ದರ್ಶನ

ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 23ರ ಮಂಗಳವಾರದಿಂದ ಭಕ್ತರಿಗೆ ಬಾಲರಾಮನ ದರ್ಶನ ಲಭಿಸಲಿದ್ದು ಬೆಳಗ್ಗೆ 7ರಿಂದ 10.30 ಮತ್ತು ಮಧ್ಯಾಹ್ನ 2 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ದರ್ಶನ ಅವಕಾಶ ಒದಗಿಸಲಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ತಿಳಿಸಿದೆ.

ನಿತ್ಯ ಸಂಜೆ 6.30ಕ್ಕೆ ವಿಶೇಷ ಭಜನೆ, ಶೃಂಗಾರ ಆರತಿ ನಡೆಯಲಿದ್ದು ಭಕ್ತರು ಒಂದು ದಿನ ಮೊದಲೇ ತಮ್ಮ ಸ್ಥಾನ ಕಾಯ್ದಿರಿಸಿಕೊಳ್ಳಬೇಕು ಎಂದು ಟ್ರಸ್ಟ್‌ ಕಾರ್ಯದರ್ಶಿ ಚಂಪತ್‌ ರಾಯ್‌ ತಿಳಿಸಿದ್ದಾರೆ.

ಸಂಜೆ 7 ಗಂಟೆಗೆ ಬಾಲ ರಾಮನಿಗೆ ಆರತಿ ನಡೆಯಲಿದ್ದು, ಆರತಿ ದರ್ಶನಕ್ಕೆ ಬರುವ ಭಕ್ತರು ಮುಂಚಿತವಾಗಿ ಟ್ರಸ್ಟ್‌ ಕಚೇರಿಯಿಂದ ಪಾಸ್‌ ಪಡೆದಿರಬೇಕು ಎಂದು ಹೇಳಿದರು.

ಬಾನಿನಿಂದ ರಾಮ ಮಂದಿರದ ವಿಡಿಯೋ

ಈ ಮಧ್ಯೆ ಹೆಲಿಕಾಪ್ಟರ್‌ ಮೂಲಕ ಇಂದು ಚಿತ್ರಿಸಲಾದ ರಾಮ ಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ಸಂದರ್ಭದ ವಿಡಿಯೋ ಒಂದು ವೈರಲ್‌ ಆಗಿದ್ದು ಅದನ್ನು ನೋಡಲು ಕೆಳಗೆ ಕ್ಲಿಕ್‌ ಮಾಡಬಹುದು.


ಈ ಕೆಳಗಿನ ಸುದ್ದಿಗಳನ್ನೂ ಓದಿರಿ:

ಬಾಲರಾಮನ ಪ್ರಾಣಪ್ರತಿಷ್ಠೆ, ವೇದಘೋಷ, ಸಂಭ್ರಮ ಸಡಗರ

ಉಕ್ಕು ಇಲ್ಲ, ಕಬ್ಬಿಣ ಇಲ್ಲ, ವಾಸ್ತುಶಿಲ್ಪದ ಅಧ್ಬುತ ಈ ರಾಮ ಮಂದಿರ

ಬಟ್ಟೆ ರಹಿತ ಪೂರ್ಣ ಮುಖದ ವಿಗ್ರಹ ನೈಜ ರಾಮಲಲ್ಲಾ ಅಲ್ಲ

PARYAYA: ʼಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆʼ ಪ್ರಕಟಿಸಿದ ಪ್ರಧಾನಿ:   ʼ ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆ ʼ ಪ್ರಕಟಿಸಿದ ಪ್ರಧಾನಿ ನ ವದೆಹಲಿ: " ಅಯೋಧ್ಯೆಯಿಂದ ಹಿಂದಿರುಗಿದ ನಂತರ ಇದು ನನ್ನ ಮೊದಲ ನಿರ್ಧಾರ" ಎಂಬುದಾಗಿ ಹೇಳಿ...

PARYAYA: ಬಾಲರಾಮನ ಪ್ರಾಣಪ್ರತಿಷ್ಠೆ, ವೇದಘೋಷ, ಸಂಭ್ರಮ ಸಡಗರ

 ಬಾಲರಾಮನ ಪ್ರಾಣಪ್ರತಿಷ್ಠೆ, ವೇದಘೋಷ, ಸಂಭ್ರಮ ಸಡಗರ

ಯೋಧ್ಯೆ: ವೇದಘೋಷ, ಭಕ್ತಿಗೀತೆಗಳು, ಭಜನೆ, ವಿವಿಧ್ಯ ವಾದ್ಯ ಸೇವೆಗಳ ಮಧ್ಯೆ ಅಯೋಧ್ಯೆಯಲ್ಲಿ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ನೂತನವಾಗಿ ನಿರ್ಮಿಸಿದ ಸುಂದರ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯು ಪ್ರಧಾನಿ ನರೇಂದ್ರ ಮೋದಿ ಅವರ ಯಜಮಾನಿಕೆಯಲ್ಲಿ 2024 ಜನವರಿ 22ರ ಸೋಮವಾರ ಮಧ್ಯಾಹ್ನ 12 ಗಂಟೆ ಬಳಿಕದ ಶುಭ ಮುಹೂರ್ತದಲ್ಲಿ ಸಡಗರೋತ್ಸಾಹದೊಂದಿಗೆ ನೆರವೇರಿತು.

ಇದರೊಂದಿಗೆ ಸುಮಾರು 500 ವರ್ಷಗಳ ಬಳಿಕ ಶ್ರೀ ರಾಮ ಚಂದ್ರನು ಮೂಲಸ್ಥಾನದಲ್ಲಿ ಬಾಲರಾಮನ (ರಾಮಲಲ್ಲಾ) ರೂಪದಲ್ಲಿ ಪುನರ್‌ ಪ್ರತಿಷ್ಠೆಗೊಂಡಿದ್ದಾನೆ. ಇದಕ್ಕೆ ಮುನ್ನ ವಿವಾದಿತ ಕಟ್ಟಡದಲ್ಲಿ ಪೂಜೆಗೊಳ್ಳುತ್ತಿದ್ದ ರಾಮ ಲಲ್ಲಾ ವಿಗ್ರಹಗಳನ್ನೂ ಮಂದಿರದಲ್ಲಿ ಪ್ರತಿಷ್ಠಾಪಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿ ಬೆನ್‌, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘ ಚಾಲಕ ಮೋಹನ್‌ ಭಾಗ್ವತ್‌, ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಪ್ರಮುಖರ ಸಮ್ಮುಖದಲ್ಲಿ ಬಾಲರಾಮನ ಪ್ರತಿಷ್ಠಾಪನೆಯ ವಿಧಿ ವಿಧಾನಗಳನ್ನು ನೆರವೇರಿಸಿದರು. ಮೂರ್ತಿಗೆ ಕಮಲದ ಹೂ, ಅಕ್ಷತೆ, ಕುಂಕುಮ ಇತ್ಯಾದಿಗಳನ್ನು ಅರ್ಪಿಸಿದರು. ಪ್ರಾಣ ಪ್ರತಿಷ್ಠಾಪನೆಯ ಬಳಿಕ ಮಂಗಳಾರತಿಯನ್ನೂ ಬೆಳಗಿದರು.

ಪ್ರಾಣಪ್ರತಿಷ್ಠೆಯ ಬಳಿಕ ಪ್ರಧಾನಿಯವರು ಅರ್ಚಕರಿಗೆ ವಸ್ತ್ರದಾನ ಮಾಡಿದರು.

ಪ್ರಾಣಪ್ರತಿಷ್ಠಾ ಸಮಾರಂಭದಲ್ಲಿ ಗರ್ಭಗುಡಿಯೊಳಗೆ ಪ್ರಧಾನಿ ಸೇರಿದಂತೆ ಐವರು ಗಣ್ಯರಿಗೆ ಮಾತ್ರ ಪ್ರವೇಶವಿತ್ತು. ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥರು ಈ ಸಂದರ್ಭದಲ್ಲಿ ಹಾಜರಿದ್ದರು.

ನೂರಾರು ಮಂದಿ ಸಂತರು, ದೇಶ ವಿದೇಶಗಳಿಂದ ಆಗಮಿಸಿದ್ದ ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ದೇವಾಲಯದ ಹೊರಭಾಗದಲ್ಲಿ ಸಹಸ್ರಾರು ಮಂದಿ ಭಕ್ತರು ನೆರೆದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಪ್ರಾಣಪ್ರತಿಷ್ಠಾ ಕಾರ್ಯಕ್ರಮದ ಬಳಿಕ ದೇವಾಲಯದ ಹೊರಭಾಗದಲ್ಲಿ ನಡೆದ ಸಭೆಯಲ್ಲಿ ಪ್ರಧಾನಿಯವರು ದೇವಾಲಯ ನಿರ್ಮಾಣಕ್ಕಾಗಿ ದುಡಿದ ಕಾರ್ಯಕ್ರಮರಿಗೆ ಗೌರವ ಸಲ್ಲಿಸಿದರು.

ಪ್ರಾಣಪ್ರತಿಷ್ಠೆಯ ಈ ಸಂಭ್ರಮದ ಕ್ಷಣ ವಿಶ್ವಾದ್ಯಂತ ಬೃಹತ್‌ ಪರದೆಗಳಲ್ಲಿ ಪ್ರಸಾರಗೊಂಡಿತು. ಕೋಟ್ಯಂತರ ಭಕ್ತರು ದೇವಾಲಯಗಳಲ್ಲಿ ನೆರೆದು ಈ ಅಪೂರ್ವ ಕ್ಷಣಗಳನ್ನು ಕಣ್ತುಂಬಿಗೊಂಡದ್ದಲ್ಲದೆ, ಪೂಜಾ ಕೈಂಕರ್ಯಗಳನ್ನು ಕೈಗೊಂಡರು.

ಬಾಲರಾಮನ ಪ್ರತಿಷ್ಠಾ ಸಮಾರಂಭದ ಕ್ಷಣಗಳ ಸಮೀಪ ನೋಟಕ್ಕಾಗಿ ಮೇಲಿನ ಚಿತ್ರಗಳನ್ನು ಕ್ಲಿಕ್ಕಿಸಿ.
ವಿಡಿಯೋ ನೋಡಲು ಇಲ್ಲಿ ಕ್ಲಿಕ್ಕಿಸಿ.

ಈ ಕೆಳಗಿನ ಸುದ್ದಿಗಳನ್ನೂ ಓದಿರಿ:

ಉಕ್ಕು ಇಲ್ಲ, ಕಬ್ಬಿಣ ಇಲ್ಲ, ವಾಸ್ತುಶಿಲ್ಪದ ಅಧ್ಬುತ ಈ ರಾಮ ಮಂದಿರ


PARYAYA: ಬಾಲರಾಮನ ಪ್ರಾಣಪ್ರತಿಷ್ಠೆ, ವೇದಘೋಷ, ಸಂಭ್ರಮ ಸಡಗರ:   ಬಾಲರಾಮನ ಪ್ರಾಣಪ್ರತಿಷ್ಠೆ, ವೇದಘೋಷ, ಸಂಭ್ರಮ ಸಡಗರ ಅ ಯೋಧ್ಯೆ: ವೇದಘೋಷ, ಭಕ್ತಿಗೀತೆಗಳು, ಭಜನೆ, ವಿವಿಧ್ಯ ವಾದ್ಯ ಸೇವೆಗಳ ಮಧ್ಯೆ ಅಯೋಧ್ಯೆಯಲ್ಲಿ ಶ್ರೀರಾಮ ಜನ್ಮಭೂಮಿ...

Sunday, January 21, 2024

PARYAYA: ಉಕ್ಕು ಇಲ್ಲ, ಕಬ್ಬಿಣ ಇಲ್ಲ, ವಾಸ್ತುಶಿಲ್ಪದ ಅಧ್ಬುತ ಈ ರಾಮ...

ಉಕ್ಕು ಇಲ್ಲ, ಕಬ್ಬಿಣ ಇಲ್ಲ, ವಾಸ್ತುಶಿಲ್ಪದ ಅಧ್ಬುತ ಈ ರಾಮ ಮಂದಿರ


ಹೊಸ ಚಿಗುರು, ಹಳೆ ಬೇರು ಕೂಡಿರಲು ಮರ ಸೊಬಗು,
ಹೊಸ ಯುಕ್ತಿ ಹಳೆ ತತ್ವದೊಡಗೂಡೆ ಧರ್ಮ,

ಋಷಿವಾಕ್ಯದೊಡೆ ವಿಜ್ಞಾನ ಕಲೆ ಮೇಳವಿಸೆ,
ಜಸವು  ಜನ ಜೀವನಕೆ ಮಂಕು ತಿಂಮ್ಮ!

ಕನ್ನಡದ ಖ್ಯಾತ ಕವಿ ಡಿವಿಜಿ ಅವರ ಈ ಕವನವನ್ನು ಕ್ಷಣ ಕ್ಷಣಕ್ಕೂ ನೆನಪಿಸುವಂತೆ ಮೂಡಿ ಬಂದಿದೆ. ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ನೂತನ ರಾಮ ಮಂದಿರ. ಭಾರತೀಯ ಚಿಂತನೆ, ವಾಸ್ತು, ಕಲೆ ಮತ್ತು ವಿಜ್ಞಾನ ಇವೆಲ್ಲವೂ ಇಲ್ಲಿ ಮೇಳೈಸಿವೆ.

ಭಾರತದ ಪ್ರಾಚೀನ ಚಿಂತನೆ, ವಾಸ್ತುಶಿಲ್ಪ ಮತ್ತು ಆಧುನಿಕ ವಿಜ್ಞಾನ ಮಿಳಿತವಾದ ಸುಂದರ ಮಂದಿರವನ್ನು ಭಾರತದ ನಾಗರ ಶೈಲಿಯಲ್ಲಿ ನಿರ್ಮಿಸಲಾಗಿದೆ. ಇದರ ಎತ್ತರ ಕುತುಬ್‌ ಮಿನಾರ್‌ ಕಟ್ಟಡದ ಶೇಕಡಾ 70ರಷ್ಟು ಇದೆ.

ಪ್ರಸಿದ್ಧ ವಾಸ್ತುಶಿಲ್ಪಿ ಚಂದ್ರಕಾಂತ್ ಬಿ ಸೋಂಪುರ ಅವರು ತಮ್ಮ ಮಗ ಆಶಿಶ್ ಸಹಾಯದಿಂದ ವಿನ್ಯಾಸಗೊಳಿಸಿರುವ ರಾಮ ಮಂದಿರದ ಕಲ್ಪನೆಯನ್ನು 30 ವರ್ಷಗಳಷ್ಟು ಹಿಂದೆಯೇ ವಿವರಿಸಿದ್ದರು.

2024 ಜನವರಿ 22ರ  ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರ ಯಜಮಾನಿಕೆಯಲ್ಲಿ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕಾಗಿ ಅಯೋಧ್ಯೆಯ ರಾಮಮಂದಿರವು ಇದೀಗ ಅಲಂಕೃತವಾಗಿ ನಿಂತಿದೆ.

ದೇವಾಲಯಗಳ ಪಟ್ಟಣ ಎಂಬುದಾಗಿಯೇ ಹೆಸರು ಪಡೆದಿರುವ ಅಯೋಧ್ಯೆಯಲ್ಲಿ 2.7 ಎಕರೆ ಭೂಮಿಯಲ್ಲಿ ಮೈತಳೆದು ನಿಂತಿರುವ ಈ ದೇವಾಲಯ 161 ಅಡಿ ಎತ್ತರ, 235 ಅಡಿ ಅಗಲ ಮತ್ತು ಒಟ್ಟು 360 ಅಡಿ ಉದ್ದವನ್ನು ಹೊಂದಿದೆ. ಆಧುನಿಕ ತಂತ್ರಜ್ಞಾನದ ಸಮ್ಮಿಲನದೊಂದಿಗೆ ಎಲ್ಲ ವೈದಿಕ ಆಚರಣೆಗಳನ್ನು ಅನುಸರಿಸಿ, ಪ್ರಾಚೀನ  ಭಾರತದ ಎರಡು ವಿಶಿಷ್ಟವಾದ ಕಟ್ಟಡ ಶೈಲಿಗಳಲ್ಲಿ ಒಂದಾದ ನಾಗರಾ ಶೈಲಿಯಲ್ಲಿ ಇದನ್ನು ನಿರ್ಮಿಸಲಾಗಿದೆ.

ಈ ದೇವಾಲಯದ ನಿರ್ಮಾಣ ಪ್ರದೇಶವು ಸುಮಾರು 57,000 ಚದರ ಅಡಿಗಳು. ಕಟ್ಟಡ ಮೂರು ಅಂತಸ್ತುಗಳನ್ನು ಹೊಂದಿದೆ. ಎತ್ತರಿಸಿದ ಪಾಯದ ಮೇಲೆ ಗರ್ಭಗುಡಿ ನಿರ್ಮಾಣಗೊಂಡಿದೆ. ಮೂರು ಅಂತಸ್ತುಗಳನ್ನು ಹೊಂದಿರುವ ದೇವಾಲಯದ ಗರ್ಭಗುಡಿಯ ಮೇಲೆ ಅತ್ಯಂತ ಎತ್ತರದ ಶಿಖರವಿದೆ. ದೇವಾಲಯ ಹೊಂದಿರುವ ಐದು ಮಂಟಪಗಳು ಒಟ್ಟು ಐದು ಶಿಖರಗಳನ್ನು ಹೊಂದಿವೆ. ಮಂಟಪಗಳು 300 ಸ್ತಂಭಗಳು ಮತ್ತು 44 ತೇಗದ ಬಾಗಿಲುಗಳನ್ನು ಹೊಂದಿವೆ.

ಭಗವಾನ್ ರಾಮನ ಹೆಸರನ್ನು ವಿವಿಧ ಭಾಷೆಗಳಲ್ಲಿ ಕೆತ್ತಿದ ಮತ್ತು 30 ವರ್ಷಗಳಿಂದ ಸಂಗ್ರಹಿಸಲಾದ ಸುಮಾರು ಎರಡು ಲಕ್ಷ ಇಟ್ಟಿಗೆಗಳನ್ನು ದೇವಾಲಯಕ್ಕೆ ಬಳಸಲಾಗಿದೆ. ತಾಜ್‌ ಮಹಲ್‌ ನಿರ್ಮಿಸಲು ಬಳಸಲಾಗಿದ್ದ ಅಮೃತಶಿಲೆಗಳನ್ನೇ ಬಳಸಿ ಗರ್ಭಗುಡಿಯ ಒಳಭಾಗವನ್ನು ಅಲಂಕರಿಸಲಾಗಿದೆ. ಉಕ್ಕು ಮತ್ತು ಕಬ್ಬಿಣವನ್ನು ಒಂದಿಷ್ಟೂ ಬಳಸಿಲ್ಲ ಎಂಬುದು ಇದರ ವಿಶೇಷ. ಹಾಗೆಯೇ ಈ ಮಂದಿರ ನಿರ್ಮಾಣಕ್ಕೆ ಒಂದಿಷ್ಟೂ ಸಿಮೆಂಟ್‌ ಅಥವಾ ಗಾರೆ ಕೂಡಾ ಬಳಸಿಲ್ಲ.

ನಾಗರ ಶೈಲಿಯ ಕಟ್ಟಡಗಳ ನಿರ್ಮಾಣ ಆರಂಭವಾದದ್ದು ಭಾರತವು ಸುವರ್ಣ ಯುಗವನ್ನು ಕಂಡಿದ್ದ ಗುಪ್ತರ ಕಾಲದಲ್ಲಿ. ಕಬ್ಬಿಣದ ಬಾಳಿಕೆ ಸುಮಾರು 80-90 ವರ್ಷ ಮಾತ್ರ. ಹೀಗಾಗಿ ದೇವಾಲಯವನ್ನು ಕನಿಷ್ಠ ಒಂದು ಸಾವಿರ ವರ್ಷ ಕಾಲ ದೃಢವಾಗಿ ನಿಲ್ಲುವಂತೆ ಗ್ರಾನೈಟ್‌, ಮರಳುಗಲ್ಲು, ಅಮೃತಶಿಲೆ ಬಳಸಿ ಲಾಕ್‌ ಮತ್ತು ಕೀ ಯಾಂತ್ರಿಕ ವ್ಯವಸ್ಥೆಯೊಂದಿಗೆ ನಿರ್ಮಿಸಲಾಗಿದೆ.

ರಾಮ ಮಂದಿರ ನಿರ್ಮಾಣಕ್ಕೆ ಮೊದಲು ಈ ಪ್ರದೇಶವನ್ನು 15 ಮೀಟರ್‌ ಆಳಕ್ಕೆ ಅಗೆದು, 47 ಪದರಗಳಲ್ಲಿ ಮಣ್ಣನ್ನು ಗಟ್ಟಿಯಾಗಿ ತುಂಬಿ ಪಾಯವನ್ನು ನಿರ್ಮಿಸಲಾಗಿತ್ತು. ಅದಕ್ಕೆ 1.5 ಮೀಟರ್‌ ದಪ್ಪದ ಎಂ-35 ದರ್ಜೆಯ ಕಾಂಕ್ರೀಟ್‌ ಹಾಕಲಾಯಿತು. ಗಟ್ಟಿಮಟ್ಟು ಆಗಲು 6.3 ಮೀಟರ್‌ ದಪ್ಪದ ಘನ ಗ್ರಾನೈಟ್‌ ಕಲ್ಲನ್ನು ಹೊದಿಸಲಾಯಿತು.

ವಿಜ್ಞಾನದ ಕೊಡುಗೆ

ರಾಮಮಂದಿರವನ್ನು ನಿರ್ಮಿಸಲು ಕೆಲವು ಉನ್ನತ ಭಾರತೀಯ ವಿಜ್ಞಾನಿಗಳು ಕೊಡುಗೆ ನೀಡಿದ್ದಾರೆ. ನಿರ್ಮಾಣದಲ್ಲಿ ಇಸ್ರೋ ತಂತ್ರಜ್ಞಾನವನ್ನೂ ಬಳಸಲಾಗಿದೆ. ಕೇಂದ್ರೀಯ ಕಟ್ಟಡ ಸಂಶೋಧನಾ ಸಂಸ್ಥೆಯ (ಸಿಬಿಆರ್‌ಐ) ನಿರ್ದೇಶಕ ಪ್ರದೀಪ್ ಕುಮಾರ್ ರಾಮಂಚರ್ಲಾ ಅವರು ಯೋಜನೆಯೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ವಿಶೇಷ ‘ಸೂರ್ಯ ತಿಲಕ್’ ಕನ್ನಡಿ ಎಂಬ ಮಸೂರ ಆಧಾರಿತ ಉಪಕರಣವನ್ನು ಸಿಬಿಆರ್‌ ಐ ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (ಐಐಎ/ IIA) ವಿಜ್ಞಾನಿಗಳ ತಂಡ ವಿನ್ಯಾಸಗೊಳಿಸಿದೆ. ಇದರ ಮೂಲಕ ಪ್ರತಿವರ್ಷ ರಾಮನವಮಿಯ ದಿನದಂದು ಮಧ್ಯಾಹ್ನದ ಸಮಯದಲ್ಲಿ ರಾಮಲಲ್ಲಾ ವಿಗ್ರಹದ ಹಣೆಯ ಮೇಲೆ ಸೂರ್ಯನ ಬೆಳಕಿನ ಅಭಿಷೇಕವಾಗುತ್ತದೆ.

ಚಿತ್ರಗಳ ಸಮೀಪ ನೋಟಕ್ಕೆ ಚಿತ್ರಗಳನ್ನು ಕ್ಲಿಕ್‌ ಮಾಡಿರಿ.

ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ.



ಇವುಗಳನ್ನೂ ಓದಿ:

ಬಟ್ಟೆ ರಹಿತ ಪೂರ್ಣ ಮುಖದ ವಿಗ್ರಹ ನೈಜ ರಾಮಲಲ್ಲಾ ಅಲ್ಲ


PARYAYA: ಉಕ್ಕು ಇಲ್ಲ, ಕಬ್ಬಿಣ ಇಲ್ಲ, ವಾಸ್ತುಶಿಲ್ಪದ ಅಧ್ಬುತ ಈ ರಾಮ...: ಉಕ್ಕು ಇಲ್ಲ, ಕಬ್ಬಿಣ ಇಲ್ಲ, ವಾಸ್ತುಶಿಲ್ಪದ ಅಧ್ಬುತ ಈ ರಾಮ ಮಂದಿರ ಹೊಸ ಚಿಗುರು, ಹಳೆ ಬೇರು ಕೂಡಿರಲು ಮರ ಸೊಬಗು, ಹೊಸ ಯುಕ್ತಿ ಹಳೆ ತತ್ವದೊಡಗೂಡೆ ಧರ್ಮ, ಋಷಿವಾಕ್...

Saturday, January 20, 2024

PARYAYA: ಬಟ್ಟೆ ರಹಿತ ಪೂರ್ಣ ಮುಖದ ವಿಗ್ರಹ ನೈಜ ರಾಮಲಲ್ಲಾ ಅಲ್ಲ

 ಬಟ್ಟೆ ರಹಿತ ಪೂರ್ಣ ಮುಖದ ವಿಗ್ರಹ ನೈಜ ರಾಮಲಲ್ಲಾ ಅಲ್ಲ

ಯೋಧ್ಯೆ: ಮುಖ ಸಂಪೂರ್ಣವಾಗಿ ಕಾಣುತ್ತಿದ್ದ ಬಾಲ ರಾಮನ ಚಿತ್ರ ಅಯೋಧ್ಯೆಯ ನೂತನ ರಾಮಲಲ್ಲಾ ವಿಗ್ರಹದ ನೈಜ ಚಿತ್ರವಲ್ಲ ಎಂದು ಅಯೋಧ್ಯಾ ರಾಮ ಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್‌ ೨೦೨೪ ಜನವರಿ ೨೦ರ ಶನಿವಾರ ಸ್ಪಷ್ಟ ಪಡಿಸಿದ್ದಾರೆ.

ಈ ಚಿತ್ರವನ್ನು ಪ್ರಚುರ ಪಡಿಸಿದ ಬಗ್ಗೆ ತನಿಖೆ ನಡೆಸಲಾಗುವುದು ಎಂದೂ ಅವರು ಹೇಳಿದ್ದಾರೆ. ಪ್ರಾಣಪ್ರತಿಷ್ಠಾಪನೆಗೆ ಮುನ್ನ ವಿಗ್ರಹದ ಕಣ್ಣುಗಳನ್ನು ತೋರಿಸುವಂತಿಲ್ಲ ಎಂದು ಅವರು ಹೇಳಿದ್ದಾರೆ.

ಬಾಲರಾಮನಿಗೆ ಸಂಬಂಧಿಸಿದಂತೆ ಮೊದಲಿಗೆ ಬಿಡುಗಡೆ ಮಾಡಲಾದ ಚಿತ್ರದಲ್ಲಿ ಬಾಲರಾಮನ ಮುಖವನ್ನು ಸಂಪೂರ್ಣವಾಗಿ ಹಳದಿ ಬಣ್ಣದಿಂದ ಮುಚ್ಚಲಾಗಿತ್ತು. ಆ ಬಳಿಕ ಮಾಧ್ಯಮಗಳಲ್ಲಿ ಪ್ರಕಟವಾದ ಚಿತ್ರಗಳಲ್ಲಿ ಒಂದರಲ್ಲಿ ವಿಗ್ರಹದ ಕಣ್ಣಿಗೆ ಮಾತ್ರ ಬಟ್ಟೆ ಕಟ್ಟಲಾಗಿತ್ತು. ಮತ್ತೊಂದು ಚಿತ್ರದಲ್ಲಿ ಮುಖವನ್ನು ಯಾವುದೇ ಬಟ್ಟೆಯಿಂದ ಮುಚ್ಚಿರಲಿಲ್ಲ. ಜೊತೆಗೆ ಕೈಗಳಲ್ಲಿ ಚಿನ್ನದ ಬಿಲ್ಲು, ಬಾಣಗಳನ್ನೂ ತೋರಿಸಲಾಗಿತ್ತು.

ಬಾಲರಾಮನ ಪ್ರಾಣಪ್ರತಿಷ್ಠಾಪನೆ ಜನವರಿ ೨೨ರಂದು ಮಧ್ಯಾಹ್ನ ನೆರವೇರಲಿದ್ದು, ವಿಶ್ವಾದ್ಯಂತ ಸಂಭ್ರಮ ಮನೆ ಮಾಡಿದೆ. ರಾಮಮಂದಿರ ಅಲಂಕಾರದೊಂದಿಗೆ ಸಜ್ಜುಗೊಂಡಿದೆ. ಅಯೋಧ್ಯೆಯಲ್ಲಿ ಬಿಗಿ ಬಂದೋಬಸ್ತ್‌ ವ್ಯವಸ್ಥೆಯನ್ನೂ ಮಾಡಲಾಗಿದೆ.

ಇವುಗಳನ್ನೂ ಓದಿ:

ಚಿನ್ನದ ಬಿಲ್ಲು ಬಾಣ, ಬಾಲರಾಮ ನಿನಗಿದೋ ಪ್ರಣಾಮ.


PARYAYA: ಬಟ್ಟೆ ರಹಿತ ಪೂರ್ಣ ಮುಖದ ವಿಗ್ರಹ ನೈಜ ರಾಮಲಲ್ಲಾ ಅಲ್ಲ:   ಬಟ್ಟೆ ರಹಿತ ಪೂರ್ಣ ಮುಖದ ವಿಗ್ರಹ ನೈಜ ರಾಮಲಲ್ಲಾ ಅಲ್ಲ ಅ ಯೋಧ್ಯೆ : ಮುಖ ಸಂಪೂರ್ಣವಾಗಿ ಕಾಣುತ್ತಿದ್ದ ಬಾಲ ರಾಮನ ಚಿತ್ರ ಅಯೋಧ್ಯೆಯ ನೂತನ ರಾಮಲಲ್ಲಾ ವಿಗ್ರಹದ ನೈಜ ...

Friday, January 19, 2024

PARYAYA: ಚಿನ್ನದ ಬಿಲ್ಲು ಬಾಣ, ಬಾಲರಾಮ ನಿನಗಿದೋ ಪ್ರಣಾಮ.

 ಚಿನ್ನದ ಬಿಲ್ಲು ಬಾಣ, ಬಾಲರಾಮ ನಿನಗಿದೋ ಪ್ರಣಾಮ...

ವದೆಹಲಿ: ಅಯೋಧ್ಯೆಯ ರಾಮಮಂದಿರ ಲೋಕಾರ್ಪಣೆಗೆ ಮುಂಚಿತವಾಗಿ 2024 ಜನವರಿ 19ರ ಶುಕ್ರವಾರ ಸಂಜೆಯ ವೇಳೆಗೆ ಮಂದಿರದಲ್ಲಿ ಪ್ರಾಣಪ್ರತಿಷ್ಠೆಗೆ ಸಜ್ಜಾಗಿರುವ ಬಾಲ ರಾಮನ ವಿಗ್ರಹ ಸಂಪೂರ್ಣವಾಗಿ ಅನಾವರಣಗೊಂಡಿದೆ.

ಅಯೋಧ್ಯೆಯ ದೇಗುಲದಲ್ಲಿ ಇರಿಸಲಾಗಿರುವ ರಾಮನ ವಿಗ್ರಹವನ್ನು ಸೋಮವಾರದ ಪ್ರಾಣಪ್ರತಿಷ್ಠಾ ಸಮಾರಂಭಕ್ಕೆ ಮುಂಚಿತವಾಗಿ ಬಹಿರಂಗಪಡಿಸಲಾಗಿದೆ. ವಿಗ್ರಹವು ಭಗವಾನ್ ರಾಮನನ್ನು ಐದು ವರ್ಷದ ಮಗುವಿನಂತೆ ಚಿತ್ರಿಸಿದ್ದು ಕೈಯಲ್ಲಿ ಚಿನ್ನದ ಬಿಲ್ಲು ಮತ್ತು ಬಾಣವನ್ನು ಹಿಡಿದು ನಿಂತಿರುವ ಭಂಗಿಯಲ್ಲಿದೆ. ಮುಗ್ಧ ಮುಖದಲ್ಲಿ ಮುಗುಳುನಗು ಹೊರಸೂಸುತ್ತಿದೆ.

ಮೈಸೂರು ಮೂಲದ ಕಲಾವಿದ ಅರುಣ್ ಯೋಗಿರಾಜ್ ಅವರು ಕೆತ್ತಿರುವ 51 ಇಂಚಿನ ರಾಮಲಲ್ಲಾ ವಿಗ್ರಹವನ್ನು ಕಪ್ಪು ಕಲ್ಲಿನಲ್ಲಿ ನಿರ್ಮಿಸಲಾಗಿದೆ.

ಇದಕ್ಕೆ ಮುನ್ನ ಗುರುವಾರಗರ್ಭಗುಡಿಯೊಳಗೆ ವಿಗ್ರಹವನ್ನು ಇರಿಸಿದ ಸಂದರ್ಭದ ಭಾವಚಿತ್ರಗಳನ್ನು ಬಿಡುಗಡೆ ಮಾಡಲಾಗಿತ್ತು. ಈ ವಿಗ್ರಹ ಬಟ್ಟೆಯಿಂದ ಮುಚ್ಚಲ್ಪಟ್ಟಿತ್ತು.

ಶುಕ್ರವಾರ ಬೆಳಗ್ಗೆ ಮತ್ತೊಂದು ಚಿತ್ರ ಹೊರಹೊಮ್ಮಿತುಅದರಲ್ಲಿ ರಾಮಲಲ್ಲಾನ ಕಣ್ಣುಗಳನ್ನು ಮಾತ್ರ ಬಟ್ಟೆಯಿಂದ ಮುಚ್ಚಲಾಗಿತ್ತು.

ಅಂತಿಮವಾಗಿ ಮಧ್ಯಾಹ್ನ ಸಂಪೂರ್ಣ ನೋಟವನ್ನು ಅನಾವರಣಗೊಳಿಸಲಾಯಿತುಇದು ದೇವರ ಮುಖ ಮತ್ತು ಚಿನ್ನದ ಬಿಲ್ಲು ಮತ್ತು ಬಾಣವನ್ನು ತೋರಿಸುತ್ತಿದೆ.

ಇವುಗಳನ್ನೂ ಓದಿ:

ರಾಮಲಲ್ಲಾ: ಇನ್ನೊಂದು ಭವ್ಯನೋಟ..!
ಅಯೋಧ್ಯೆಯ ಬಾಲರಾಮ: ಮೊದಲ ದೃಶ್ಯ ಕಣ್ತುಂಬಿಕೊಳ್ಳಿ.

ಅಯೋಧ್ಯಾ ರಾಮಮಂದಿರ: ಕತ್ತಲ ಬೆಳಕಲ್ಲಿ ಭವ್ಯನೋಟ

ಇಂದಿನ ಇತಿಹಾಸ History Today ಜನವರಿ 19

ಇಂದಿನ ಇತಿಹಾಸ History Today ಜನವರಿ 18 


PARYAYA: ಚಿನ್ನದ ಬಿಲ್ಲು ಬಾಣ, ಬಾಲರಾಮ ನಿನಗಿದೋ ಪ್ರಣಾಮ.:   ಚಿನ್ನದ ಬಿಲ್ಲು ಬಾಣ, ಬಾಲರಾಮ ನಿನಗಿದೋ ಪ್ರಣಾಮ. ನ ವದೆಹಲಿ : ಅಯೋಧ್ಯೆಯ ರಾಮಮಂದಿರ ಲೋಕಾರ್ಪಣೆಗೆ ಮುಂಚಿತವಾಗಿ 2024 ಜನವರಿ 19ರ ಶುಕ್ರವಾರ ಸಂಜೆಯ ವೇಳೆಗೆ ಮಂದಿರ...

PARYAYA: ರಾಮಲಲ್ಲಾ: ಇನ್ನೊಂದು ಭವ್ಯನೋಟ..!

 ರಾಮಲಲ್ಲಾ: ಇನ್ನೊಂದು ಭವ್ಯನೋಟ..!

ವದೆಹಲಿ: ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಇರಿಸಲಾಗಿರುವ ನೂತನ ರಾಮ ಲಲ್ಲಾ ವಿಗ್ರಹದ ಇನ್ನೊಂದು ಚಿತ್ರವನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ 2024 ಜನವರಿ 19 ರಂದು ಟ್ವಿಟ್ಟರಿನಲ್ಲಿ ಹಂಚಿಕೊಂಡಿದ್ದಾರೆ.

ಈ ಚಿತ್ರದಲ್ಲಿ ವಿಗ್ರಹದ ಕಣ್ಣಿಗೆ ಮಾತ್ರ ಪಟ್ಟಿಯನ್ನು ಕಟ್ಟಲಾಗಿದ್ದು, ವಿಗ್ರಹದ ಉಳಿದೆಲ್ಲ ಭಾಗವೂ ಅನಾವರಣಗೊಂಡಿದೆ.

ʼಪ್ರಭು ರಾಮ ಲಲ್ಲಾನ ಮೊದಲ ನೋಟ. ಜೈ ಶ್ರೀರಾಮ್‌ʼ ಎಂಬುದಾಗಿ ಕರಂದ್ಲಾಜೆ ಬರೆದಿದ್ದಾರೆ.

2024 ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ಅವರ ಯಜಮಾನಿಕೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ನೆರವೇರಲಿದೆ.

ಅರುಣ್‌ ಯೋಗಿರಾಜ್‌ ಅವರು ಕಪ್ಪು ಶಿಲೆಯಲ್ಲಿ ಕೆತ್ತಿರುವ ಈ ಬಾಲರಾಮನ ವಿಗ್ರಹ 51 ಅಂಗುಲ ಎತ್ತರವಿದೆ.

ಇವುಗಳನ್ನೂ ಓದಿ:

ಅಯೋಧ್ಯೆಯ ಬಾಲರಾಮ: ಮೊದಲ ದೃಶ್ಯ ಕಣ್ತುಂಬಿಕೊಳ್ಳಿ.

ಅಯೋಧ್ಯಾ ರಾಮಮಂದಿರ: ಕತ್ತಲ ಬೆಳಕಲ್ಲಿ ಭವ್ಯನೋಟ

ಇಂದಿನ ಇತಿಹಾಸ History Today ಜನವರಿ 19

ಇಂದಿನ ಇತಿಹಾಸ History Today ಜನವರಿ 18


PARYAYA: ರಾಮಲಲ್ಲಾ: ಇನ್ನೊಂದು ಭವ್ಯನೋಟ..!:   ರಾಮಲಲ್ಲಾ: ಇನ್ನೊಂದು ಭವ್ಯನೋಟ..! ನ ವದೆಹಲಿ: ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಇರಿಸಲಾಗಿರುವ ನೂತನ ರಾಮ ಲಲ್ಲಾ ವಿಗ್ರಹದ ಇನ್ನೊಂದು ಚಿತ್ರವನ್ನು ಕೇಂದ್ರ ...

Thursday, January 18, 2024

PARYAYA: ಅಯೋಧ್ಯೆಯ ಬಾಲರಾಮ: ಮೊದಲ ದೃಶ್ಯ ಕಣ್ತುಂಬಿಕೊಳ್ಳಿ.

 ಅಯೋಧ್ಯೆಯ ಬಾಲರಾಮ: ಮೊದಲ ದೃಶ್ಯ ಕಣ್ತುಂಬಿಕೊಳ್ಳಿ.

ಯೋಧ್ಯೆ: ಅಯೋಧ್ಯೆಯ ನೂತನ ರಾಮ ಮಂದಿರದ ಗರ್ಭಗುಡಿಯಲ್ಲಿ 2024 ಜನವರಿ 18ರಂದು ಇರಿಸಲಾದ ನೂತನ ಬಾಲರಾಮನ ವಿಗ್ರಹದ ಮೊದಲ ಚಿತ್ರವನ್ನು ವಿಶ್ವ ಹಿಂದೂ ಪರಿಷತ್‌  2024 ಜನವರಿ 19ರ ಶುಕ್ರವಾರ ಬಿಡುಗಡೆ ಮಾಡಿತು.

ವಿಶ್ವ ಹಿಂದೂ ಪರಿಷತ್ತಿನ ಮಾಧ್ಯಮ ಉಸ್ತುವಾರಿ ನೋಡಿಕೊಳ್ಳುತ್ತಿರುವ ಶರದ್‌ ಶರ್ಮ ಅವರು ಈ ಚಿತ್ರವನ್ನು ಬಿಡುಗಡೆ ಮಾಡಿದ್ದಾರೆ.

ಕನ್ನಡಿಗ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರು ಕೆತ್ತನೆ ಮಾಡಿರುವ ಬಾಲರಾಮನ ವಿಗ್ರಹವನ್ನು ಅಯೋಧ್ಯೆಯ ನೂತನ ರಾಮ ಮಂದಿರದದ ಗರ್ಭಗುಡಿಗೆ 2024 ಜನವರಿ 18ರ ಗುರುವಾರ ತಂದು ಪೀಠದ ಮೇಲೆ ಕೂರಿಸಲಾಗಿತ್ತು.

ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ನೇತೃತ್ವದಲ್ಲಿ ವೇದಘೋಷಗಳ ನಡುವೆ ಅರ್ಚಕರು ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದ್ದರು. ಇದರೊಂದಿಗೆ ಭಗವಾನ್‌ ರಾಮನ 500 ವರ್ಷಗಳ ಸುದೀರ್ಘ ವನವಾಸ ಅಂತ್ಯಗೊಂಡಿತ್ತು.

ಈ ಸಂದರ್ಭದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಮಂದಿರ ಸ್ಮರಣಾರ್ಥ ವಿಶೇಷ ಅಂಚೆ ಚೀಟಿಯನ್ನು ನವದೆಹಲಿಯಲ್ಲಿ ಬಿಡುಗಡೆ ಮಾಡಿದ್ದರು.

 2024 ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ಅವರ ಯಜಮಾನಿಕೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ನೆರವೇರಲಿದೆ.

ಅರುಣ್‌ ಯೋಗಿರಾಜ್‌ ಅವರು ಕಪ್ಪು ಶಿಲೆಯಲ್ಲಿ ಕೆತ್ತಿರುವ ಈ ಬಾಲರಾಮನ ವಿಗ್ರಹ 51 ಅಂಗುಲ ಎತ್ತರವಿದೆ.

ಇವುಗಳನ್ನೂ ಓದಿ:

ಅಯೋಧ್ಯಾ ರಾಮಮಂದಿರ: ಕತ್ತಲ ಬೆಳಕಲ್ಲಿ ಭವ್ಯನೋಟ


PARYAYA: ಅಯೋಧ್ಯೆಯ ಬಾಲರಾಮ: ಮೊದಲ ದೃಶ್ಯ ಕಣ್ತುಂಬಿಕೊಳ್ಳಿ.:   ಅಯೋಧ್ಯೆಯ ಬಾಲರಾಮ: ಮೊದಲ ದೃಶ್ಯ ಕಣ್ತುಂಬಿಕೊಳ್ಳಿ. ಅ ಯೋಧ್ಯೆ: ಅಯೋಧ್ಯೆಯ ನೂತನ ರಾಮ ಮಂದಿರದ ಗರ್ಭಗುಡಿಯಲ್ಲಿ 2024 ಜನವರಿ 18ರಂದು ಇರಿಸಲಾದ ನೂತನ ಬಾಲರಾಮನ ವಿಗ್...

Sunday, October 23, 2022

PARYAYA: ಅಯೋಧ್ಯಾ ದೀಪಾವಳಿ: ವಿಶ್ವದಾಖಲೆ

 ಅಯೋಧ್ಯಾ ದೀಪಾವಳಿ: ವಿಶ್ವದಾಖಲೆ

ಅಯೋಧ್ಯೆ: ಹನ್ನೆರಡು ಲಕ್ಷದ ಎಪ್ಪತ್ತಾರು ಸಾವಿರ (12,76,000) ಹಣತೆಗಳನ್ನು ಬೆಳಗುವ ಮೂಲಕ 2022 ಅಕ್ಟೋಬರ್‌ 24ರ ಭಾನುವಾರ ಅಯೋಧ್ಯೆ ವಿಶ್ವದಾಖಲೆಯನ್ನು ಬರೆಯಿತು. ಇದರೊಂದಿಗೆ  ಲೇಸರ್‌ ಬೆಳಕಿನಲ್ಲಿ ರಾಮಾಯಣ, ಅಯೋಧ್ಯಾ ಮಂದಿರದ ದೃಶ್ಯಗಳೂ ಕಣ್ಮನ ಸೆಳೆದವು.

ಅಯೋಧ್ಯೆಯ ಅಭೂತಪೂರ್ವ ದೀಪಾವಳಿ, ಗಂಗಾರತಿ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರೊಂದಿಗೆ ಪಾಲ್ಗೊಂಡರು.

ಈ ಸಂದರ್ಭವನ್ನು ಕಣ್ತುಂಬಿಕೊಳ್ಳಲು ಕೆಳಗಿನ ವಿಡಿಯೋ ಕ್ಲಿಕ್‌ ಮಾಡಿ. ಇದು ಎನ್‌ಎನ್‌ಐ  ವಿಡಿಯೋ.


ಇನ್ನೊಂದು ವಿಡಿಯೋ ನೋಡಿ: 

PARYAYA: ಅಯೋಧ್ಯಾ ದೀಪಾವಳಿ: ವಿಶ್ವದಾಖಲೆ:   ಅಯೋಧ್ಯಾ ದೀಪಾವಳಿ: ವಿಶ್ವದಾಖಲೆ ಅಯೋಧ್ಯೆ : ಹನ್ನೆರಡು ಲಕ್ಷದ ಎಪ್ಪತ್ತಾರು ಸಾವಿರ (12,76,000) ಹಣತೆಗಳನ್ನು ಬೆಳಗುವ ಮೂಲಕ 2022 ಅಕ್ಟೋಬರ್‌ 24ರ ಭಾನುವಾರ ಅಯೋಧ್ಯ...

Friday, March 8, 2019

ಅಯೋಧ್ಯಾ: ‘ಸಂಧಾನ’ ತಂಡ ರಚಿಸಿದ ಸುಪ್ರೀಂಕೋರ್ಟ್

ಅಯೋಧ್ಯಾ: ‘ಸಂಧಾನತಂಡ ರಚಿಸಿದ ಸುಪ್ರೀಂಕೋರ್ಟ್
ನವದೆಹಲಿ:  ಆರು ದಶಕಗಳಿಂದ ನೆನೆಗುದಿಯಲ್ಲಿರುವ  ಅಯೋಧ್ಯೆಯ ರಾಮಜನ್ಮಭೂಮಿ- ಬಾಬರಿ ಮಸೀದಿ ಭೂ ವಿವಾದ  ಇತ್ಯರ್ಥಕ್ಕಾಗಿ ಸಂಧಾನಮಾರ್ಗದಲ್ಲಿ ಸಾಗಲು ಸುಪ್ರೀಂಕೋರ್ಟ್ 2019 ಮಾರ್ಚ್ 8 ಶುಕ್ರವಾರ ಸುಪ್ರೀಂಕೋರ್ಟ್ ಆದೇಶ ನೀಡಿತು.

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ರಂಜನ್ ಗೊಗೋಯಿ ನೇತೃತ್ವದ ಪಂಚ ಸದಸ್ಯ ಪೀಠವು ನಿಟ್ಟಿನಲ್ಲಿ ತನ್ನ ಆದೇಶವನ್ನು ನೀಡಿ ಸಂಧಾನಕ್ಕಾಗಿ ಸುಪ್ರೀಂಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಎಫ್.ಎಂ. ಖಲೀಫುಲ್ಲಾ ಅಧ್ಯಕ್ಷತೆಯಲ್ಲಿ ತ್ರಿಸದಸ್ಯಸಂಧಾನ ತಂಡವನ್ನು ರಚಿಸಿತು.

ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಮುಖ್ಯಸ್ಥ ಶ್ರೀ ಶ್ರೀ ರವಿಶಂಕರ್ ಮತ್ತು ಹಿರಿಯ ವಕೀಲ ಹಾಗೂ  ತರಬೇತಿ ಪಡೆದ ಸಂಧಾನಕಾರ ಪಂಚು ಅವರನ್ನು ಸಂಧಾನ ತಂಡದ ಇತರ ಸದಸ್ಯರಾಗಿ ಪೀಠವು ನೇಮಕ ಮಾಡಿತು.

ಫೈಜಾಬಾದಿನಲ್ಲಿ ಒಂದು ವಾರದ ಒಳಗಾಗಿ ಸಂಧಾನ ಆರಂಭವಾಗಬೇಕು ಮತ್ತು ಉತ್ತರ ಪ್ರದೇಶ ರಾಜ್ಯವು ಸಂಧಾನಕ್ಕೆ ಬೇಕಾದ ಅಗತ್ಯಗಳನ್ನು ಒದಗಿಸಬೇಕು. ಸಂಧಾನ ತಂಡವು 8 ವಾರಗಳಲ್ಲಿ ತನ್ನ ವರದಿಯನ್ನು ಕೊಡಬೇಕು ಎಂದು ಪೀಠವು ಆಜ್ಞಾಪಿಸಿತು.

ಸಂಧಾನ ಪ್ರಕ್ರಿಯೆ ವಿಚಾರದಲ್ಲಿ ಸಂಪೂರ್ಣ ಗೌಪ್ಯತೆ ಕಾಪಾಡುವಂತೆ ಪೀಠವು ಉಭಯ ಪಕ್ಷಗಳಿಗೂ ತಾಕೀತು ಮಾಡಿತು. ಸಂಧಾನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕ್ಯಾಮರಾದಲ್ಲಿ ಚಿತ್ರೀಕರಿಸಲಾಗುವುದು. ಸಂಧಾನ ಪ್ರಕ್ರಿಯೆಯ ಯಾವುದೇ ಅಂಶವೂ  ಮುದ್ರಣ ಮಾಧ್ಯಮದಲ್ಲಾಗಲೀ, ವಿದ್ಯುನ್ಮಾನ (ಎಲೆಕ್ಟ್ರಾನಿಕ್) ಮಾಧ್ಯಮದಲ್ಲಾಗಲೀ ವರದಿಯಾಗಬಾರದು ಎಂದೂ ಪೀಠ ನಿರ್ದೇಶಿಸಿತು.

ತ್ರಿಸದಸ್ಯ ಸಂಧಾನ ತಂಡಕ್ಕೆ ಇನ್ನಷ್ಟು ಸಂಧಾನಕಾರರನ್ನು ಸೇರ್ಪಡೆ ಮಾಡಿಕೊಳ್ಳುವ ಮತ್ತು ಶಾಸಕಾಂಗ ನೆರವು ಕೋರುವ ಸ್ವಾತಂತ್ರ್ಯ ಇದೆ ಎಂದು ಸುಪ್ರೀಂಕೋರ್ಟ್ ಆದೇಶ ತಿಳಿಸಿತು.

ಸಂಧಾನ ಪ್ರಕ್ರಿಯೆಯಲ್ಲಿ ಏನಾದರೂ ಅಡೆತಡೆಗಳು ಎದುರಾದರೆ, ತಂಡವು ಸುಪ್ರೀಂಕೋರ್ಟ್ ರಿಜಿಸ್ಟ್ರಿಯನ್ನು ಸಂಪರ್ಕಿಸಬಹುದು ಎಂದೂ ಪಂಚ ಸದಸ್ಯ ಪೀಠ ತಿಳಿಸಿತು.

ನ್ಯಾಯಮೂರ್ತಿಗಳಾದ ಎಸ್.. ಬೊಬ್ಡೆ, ಡಿ.ವೈ. ಚಂದ್ರಚೂಡ್, ಅಶೋಕ ಭೂಷಣ್ ಮತ್ತು ಎಸ್.. ನಜೀರ್ ಅವರು ಪಂಚ ಸದಸ್ಯ ಪೀಠದ ಇತರ  ಸದಸ್ಯರಾಗಿದ್ದರು.

ಸಂಧಾನ ಪ್ರಕ್ರಿಯೆಗೆ ಅವಕಾಶ ನೀಡುವ ಬಗ್ಗೆ ಸುಪ್ರೀಂಕೋರ್ಟ್ ಪೀಠವು ಮಾರ್ಚ್ 6 ಬುಧವಾರ ತನ್ನ ತೀರ್ಪನ್ನು ಕಾಯ್ದಿರಿಸಿತ್ತು.
ಹೆಚ್ಚಿನ ವಿವರಗಳಿಗೆ ಕೆಳಗಿನ ಚಿತ್ರ ಕ್ಲಿಕ್ ಮಾಡಿರಿ: