Showing posts with label ಬೆಣ್ಣೆ. Show all posts
Showing posts with label ಬೆಣ್ಣೆ. Show all posts

Thursday, October 15, 2026

PARYAYA: ಬೆಣ್ಣೆ ಅಲಂಕಾರದಲ್ಲಿ ಕಂಗೊಳಿಸಿದ ವೆಂಕಟೇಶ್ವರ

 ಬೆಣ್ಣೆ ಅಲಂಕಾರದಲ್ಲಿ ಕಂಗೊಳಿಸಿದ ವೆಂಕಟೇಶ್ವರ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವದ  ನಾಲ್ಕನೇ ದಿನವಾದ ಬುಧವಾರ (೧೪ ಅಕ್ಟೋಬರ್‌ ೨೦೨೬) ವೆಂಕಟೇಶ್ವರ ಸ್ವಾಮಿಗೆ ಬೆಣ್ಣೆ ಅಲಂಕಾರ ಮಾಡಲಾಯಿತು.

ಶ್ರೀ ಪಾರ್ಥಸಾರಥಿ ಮತ್ತು ಕುಟುಂಬ ಮತ್ತು ಸುಜಾತಾ ರೆಡ್ಡಿ ಮತ್ತು ಕುಟುಂಬದವರು ಸ್ವಾಮಿಗೆ ಬೆಣ್ಣೆ ಅಲಂಕಾರ ಸೇವೆ ಮಾಡಿದರೆ, ಕಿರಣ್‌ ಮತ್ತು ಕುಟುಂಬದವರು ಪ್ರಸಾದ ಸೇವೆಯನ್ನು ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಲಕ್ಷ್ಮಿ ದೇವಿಗೆ ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ನಡೆಯಿತು. ದೇವಾಲಯದ ಮಹಿಳಾ ಭಕ್ತರಿಂದ ಭಜನಾ ಸೇವೆ ನಡೆಯಿತು.

ಭಕ್ತರು ಶ್ರದ್ಧಾ ಭಕ್ತಿಯೊಂದಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. 




PARYAYA: ಬೆಣ್ಣೆ ಅಲಂಕಾರದಲ್ಲಿ ಕಂಗೊಳಿಸಿದ ವೆಂಕಟೇಶ್ವರ:   ಬೆಣ್ಣೆ ಅಲಂಕಾರದಲ್ಲಿ ಕಂಗೊಳಿಸಿದ ವೆಂಕಟೇಶ್ವರ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇ...